ಆಶ್ರಯ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನ, ಶಿವಮೊಗ್ಗ ನಗರ ನಿವಾಸಿಗಳಿಗೆ ಅವಕಾಶ
ಶಿವಮೊಗ್ಗ | 27 ಜೂನ್ 2023 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ಮಹಾನಗರ ಪಾಲಿಕೆಯು ನಗರದ ಗೋಪಿಶೆಟ್ಟಿಕೊಪ್ಪ ಗ್ರಾಮದ ಒಟ್ಟು 19.23 ಎಕರೆ ಜಮೀನಿನಲ್ಲಿ ಜಿ+2 ಮಾದರಿಯ ಮನೆಗಳನ್ನು ನಗರದ ನಿವೇಶನ ರಹಿತರಿಗೆ ಹಂಚುವ ಸಲುವಾಗಿ ಹೊಸದಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಅರ್ಜಿದಾರರು ಶಿವಮೊಗ್ಗ ನಗರ ಪ್ರದೇಶದಲ್ಲಿ ವಾಸ ಆಗಿರಬೇಕು. ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ಹೊಂದಿರಬೇಕು. ಅರ್ಜಿದಾರರು ಅಥವಾ ಕುಟುಂಬದವರು ಸ್ವಂತ ನಿವೇಶನ, ಮನೆ ಹೊಂದಿರಬಾರದು. ಅರ್ಜಿಯನ್ನು ಮಹಿಳಾ ಫಲಾನುಭವಿಯ ಹೆಸರಿನಲ್ಲಿಯೇ ಸಲ್ಲಿಸಬೇಕು. ಪುರುಷ ಅಭ್ಯರ್ಥಿ ಆಗಿದ್ದಲ್ಲಿ ಮಾಜಿ ಸೈನಿಕ, ವಿಕಲಚೇತನ, ವಿಧುರ ಹಾಗೂ ಹಿರಿಯ ನಾಗರೀಕ ಆಗಿರಬೇಕು.
ಅರ್ಜಿದಾರರು ಬೇರೆ ಯಾವುದೇ ಯೋಜನೆಯಡಿಯಲ್ಲಿ ನಿವೇಶನ, ವಸತಿ ಸೌಲಭ್ಯ ಪಡೆದಿರಬಾರದು. ಯಾವುದಾದರೂ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ ವಿವರ ನೀಡಬೇಕು. ವಾರ್ಷಿಕ ಆದಾಯ ಮಿತಿ 86,700 ರೂ. ಒಳಗಿರಬೇಕು. ತೃತೀಯ ಲಿಂಗಿಗಳೂ ಸಹ ಅರ್ಜಿ ಸಲ್ಲಿಸಬಹುದು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಆಸಕ್ತರು ಪಾಲಿಕೆ ವೆಬ್‌ಸೈಟ್ ನಲ್ಲಿ ‘ಆಶ್ರಯ ಯೋಜನೆ ಅಪ್ಲಿಕೇಷನ್’ ಕ್ಲಿಕ್ ಮಾಡಿ ಸೆಪ್ಟಂಬರ್ 30 ರೊಳಗೆ ಅರ್ಜಿ ಸಲ್ಲಿಸುವುದು. ಅಕ್ಟೋಬರ್ 7 ರೊಳಗೆ ಬ್ಯಾಂಕ್ ಮೂಲಕ ನಿಗದಿತ ಶುಲ್ಕವನ್ನು ಪಾವತಿಸುವಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗೆ ದೂ.ಸಂ. 08182220799 ಹಾಗೂ ತಾಂತ್ರಿಕ ಸಲಹೆಗೆ ದೂ.ಸಂ. 08182268544, 08182268545 ಸಂಪರ್ಕಿಸಬಹುದಾಗಿದೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu