ಆಗಸ್ಟ್ 11 ರಿಂದ ಶಿವಮೊಗ್ಗದಿಂದ ವಿಮಾನ ಹಾರಾಟ ಆರಂಭ, ಆಗಸ್ಟ್ ಕೊನೆಯಲ್ಲಿ ನಾಲ್ಕು ಹೊಸ ಮಾರ್ಗಗಳ ಸಂಪೂರ್ಣ ಮಾಹಿತಿ
ಶಿವಮೊಗ್ಗ | 29 ಜೂನ್ 2023 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ಹಾಗೂ ಬೆಂಗಳೂರು ನಡುವೆ ವಿಮಾನ ಹಾರಾಟ ಆಗಸ್ಟ್ 11ರಿಂದ ಆರಂಭ ಆಗಲಿದ್ದು, ಉಡಾನ್ ಯೋಜನೆಯಡಿಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ನಾಲ್ಕು ವಿವಿಧ ಮಾರ್ಗಗಳಲ್ಲಿ ವಿಮಾನ ಹಾರಾಟ ಆಗುವ ಸಾಧ್ಯತೆ ಇದೆ ಎಂದು ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ವಿಮಾನ ನಿಲ್ದಾಣದಿಂದ ದೇಶದ 11 ವಿವಿಧ ಮಾರ್ಗಗಳಲ್ಲಿ ವಿಮಾನ ಹಾರಾಟ ಆರಂಭಿಸುವಂತೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದೆ. ಇದೀಗ ನಾಲ್ಕು ಹೊಸ ಮಾರ್ಗಗಳಲ್ಲಿ ಉಡಾನ್ ಯೋಜನೆಯಡಿ ಹಾರಾಟ ನಡೆಸುವ ಘೋಷಣೆ ಆಗಿದೆ. ನಾಲ್ಕು ಮಾರ್ಗಳಿಂದ ಹೈದರಾಬಾದ್, ದೆಹಲಿ, ಚೆನ್ನೈ, ಗೋವಾ, ಕೊಚ್ಚಿ, ಸೇಲಂ, ತಿರುಪತಿ ಸೇರಿದಂತೆ ದೇಶದ ಮುಖ್ಯ ಸ್ಥಳಗಳಿಗೆ ವಿಮಾನಯಾನ ಸಂಪರ್ಕ ಸಾಧ್ಯವಾಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
600 ಕಿಮೀ ವಿಮಾನ ಹಾರಾಟ ನಡೆಸಬೇಕು ಎಂಬ ಮಿತಿ ಇತ್ತು. ಅಂತಹ ನಿಯಮ ತೆಗೆಯಲಾಗಿದೆ. ವಿಮಾನಯಾನ ಸಂಸ್ಥೆಗಳಿಗೆ ಸಬ್ಸಿಡಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕೇಂದ್ರ ಸರ್ಕಾರ ಒದಗಿಸಲಿದೆ. ತಾಂತ್ರಿಕ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಆಗಸ್ಟ್ ಕೊನೆಯಲ್ಲಿ ಹೊಸದಾಗಿ ನಾಲ್ಕು ಮಾರ್ಗಗಳಲ್ಲಿ ಹಾರಾಟ ಆರಂಭಿಸುವ ಬಗ್ಗೆ ಮಾಹಿತಿ ಸಿಗಲಿದೆ ಎಂದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಎಸ್.ರುದ್ರೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಡಾ. ಧನಂಜಯ ಸರ್ಜಿ, ಪವಿತ್ರಾ ರಾಮಯ್ಯ, ಜ್ಯೋತಿಪ್ರಕಾಶ್, ಶ್ರೀನಾಥ್, ಶಿವರಾಜ್, ಜಗದೀಶ್, ಅಣ್ಣಪ್ಪ, ಸತೀಶ್, ಮಾಲತೇಶ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu