ಸಂಶೋಧನಾ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ವಹಿಸುವುದು ಅಗತ್ಯ, ಡಿವಿಎಸ್‌ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

ಸಂಶೋಧನಾ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ವಹಿಸುವುದು ಅಗತ್ಯ, ಡಿವಿಎಸ್‌ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

ಶಿವಮೊಗ್ಗ | 30 ಜೂನ್ 2023 | ಡಿಜಿ ಮಲೆನಾಡು.ಕಾಂ

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರ ಮುಂದುವರೆದಿದ್ದು, ವಿಜ್ಞಾನ ಅಧ್ಯಯನದ ವಿದ್ಯಾರ್ಥಿಗಳು ಸಂಶೋಧನಾ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಬೆಂಗಳೂರಿನ ರಾಷ್ಟ್ರೀಯ ಅಂತರಿಕ್ಷಯಾನ ಪ್ರಯೋಗಾಲಯದ ಹಿರಿಯ ವಿಜ್ಞಾನಿ ಡಾ. ಸಿ.ಎಂ.ಮಂಜುನಾಥ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಭೌತಶಾಸ್ತ್ರ ವಿಭಾಗದ ವತಿಯಿಂದ “ವಿಮಾನಯಾನ ಎಷ್ಟು ಸುರಕ್ಷಿತ” ವಿಷಯ ಕುರಿತು ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಉಪನ್ಯಾಸ ನೀಡಿದರು.

Click on this picture, Like & Follow Facebook Page ” Digi Malenadu “

ಅಂತರಿಕ್ಷ ಕ್ಷೇತ್ರದಲ್ಲಿ ಹೆಚ್ಚಿನ ವಿಷಯ ಕಲಿಕೆಯ ಜತೆಯಲ್ಲಿ ಉನ್ನತ ಸಾಧನೆ ಮಾಡಲು ಅವಕಾಶ ಇರುತ್ತದೆ. ವಿಮಾನಯಾನ ಕುರಿತು ಹೆಚ್ಚಿನ ಸಂಶೋಧನಾ ಮನೋಭಾವ ಬೆಳೆಸಿಕೊಳ್ಳಬೇಕು. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಆಗುತ್ತಿರುವ ಅಭಿವೃದ್ಧಿಗಳ ಬಗ್ಗೆ ನಿರಂತರವಾಗಿ ತಿಳಿದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ವಿಜ್ಞಾನ ವಿದ್ಯಾರ್ಥಿಗಳು ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ದೃಷ್ಠಿಯಿಂದ ಶೈಕ್ಷಣಿಕ ಹಂತದಲ್ಲಿ ಹೆಚ್ಚಿನ ಗಮನ ವಹಿಸಿ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಶಿವಮೊಗ್ಗದಲ್ಲಿಯೂ ವಿಮಾನಯಾನ ಹಾರಾಟ ಆರಂಭಗೊಳ್ಳಲಿದೆ. ಆಸಕ್ತಿಕರ ವಿಷಯಗಳ ಬಗ್ಗೆ ವಿಜ್ಞಾನಿಗಳಿಂದ ತಿಳಿದುಕೊಳ್ಳಬೇಕು ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ದೇಶಿಯ ವಿದ್ಯಾಶಾಲಾ ಸಮಿತಿ ಜಂಟಿ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯ ಹಾಗೂ ಉನ್ನತ ಶಿಕ್ಷಣದ ಬಗ್ಗೆ ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ವಿಮಾನಯಾನ ಕ್ಷೇತ್ರದಲ್ಲಿ ಇರುವ ಅವಕಾಶಗಳ ಬಗ್ಗೆ ಅರಿತುಕೊಂಡು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳಲ್ಲಿ ಸಂಶೋಧನಾ ಕ್ಷೇತ್ರಗಳಲ್ಲಿ ಆಸಕ್ತಿ ಹೆಚ್ಚಿಸುವ ಆಶಯದಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ದೃಷ್ಠಿಯಿಂದ ಉಪನ್ಯಾಸ ಹಾಗೂ ತರಬೇತಿ ಕಾರ್ಯಾಗಾರಗಳನ್ನು ನಿರಂತರವಾಗಿ ಆಯೋಜಿಸಲಾಗುವುದು ಎಂದು ಹೇಳಿದರು.

ದೇಶಿಯ ವಿದ್ಯಾಶಾಲಾ ಸಮತಿಯ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ದೇಶಿಯ ವಿದ್ಯಾಶಾಲಾ ಸಮಿತಿ ಖಜಾಂಚಿ ಬಿ.ಗೋಪಿನಾಥ್, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಎ.ಎಸ್.ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!