ಸರ್ಕಾರಿ ಶಾಲೆ ಮಕ್ಕಳಿಗೆ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಲೇಖನ ಸಾಮಾಗ್ರಿ ವಿತರಣೆ

ಸರ್ಕಾರಿ ಶಾಲೆ ಮಕ್ಕಳಿಗೆ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಲೇಖನ ಸಾಮಾಗ್ರಿ ವಿತರಣೆ

ಶಿವಮೊಗ್ಗ | 1 ಜುಲೈ 2023 | ಡಿಜಿ ಮಲೆನಾಡು.ಕಾಂ

ಸರ್ಕಾರಿ ಶಾಲೆ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣದ ಜತೆಗೆ ಅಗತ್ಯ ವಸ್ತುಗಳನ್ನು ಒದಗಿಸಿದಾಗ ಪರಿಪೂರ್ಣ ವಿದ್ಯಾರ್ಥಿಯಾಗಿಸಲು ಸಾಧ್ಯ ಹಾಗೂ ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಗುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on this Below Picture, Like & Follow Facebook Page ” Digi Malenadu “

ಶಿವಮೊಗ್ಗದ ಕೊಮ್ಮನಾಳು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಶಾಲಾ ಬ್ಯಾಗ್, ಲೇಖನ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ನಿರಂತರವಾಗಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಶಾಲೆಗಳ ಮಕ್ಕಳಿಗೆ ಅನುಕೂಲವಾಗುವಂತೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿದೆ ಎಂದು ತಿಳಿಸಿದರು.

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆ ಮಕ್ಕಳಲ್ಲಿ ಪ್ರತಿಭಾವಂತರಿದ್ದು, ಸೂಕ್ತ ವೇದಿಕೆಗಳನ್ನು ಕಲ್ಪಿಸುವ ಕೆಲಸ ಆಗಬೇಕು. ಸಂಘ ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ಗುರುತಿಸಿ ನೆರವು ನೀಡಿದಾಗ ಶಾಲೆಗಳ ಅಭಿವೃದ್ಧಿ ಆಗುತ್ತದೆ ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಇದೇ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ಹಾಗೂ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಕಾರ್ಯದರ್ಶಿ ಕುಮಾರಸ್ವಾಮಿ ಹಾಗೂ ಪದಾಧಿಕಾರಿಗಳು, ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!