ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅಗತ್ಯ, ಡಿವಿಎಸ್‌ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅಗತ್ಯ, ಡಿವಿಎಸ್‌ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

ಶಿವಮೊಗ್ಗ | 7 ಜುಲೈ 2023 | ಡಿಜಿ ಮಲೆನಾಡು.ಕಾಂ

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ದೃಷ್ಠಿಯಿಂದ ಶಿಕ್ಷಕರು ತಂತ್ರಜ್ಞಾನದ ಸದುಪಯೋಗ ಪಡೆದುಕೊಂಡು ಪರಿಣಾಮಕಾರಿ ಬೋಧನಾ ಕ್ರಮಗಳನ್ನು ಅಳವಡಿಸಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಡಿವಿಎಸ್ ಇಂಗ್ಲೀಷ್ ವಿಭಾಗ, ಕುವೆಂಪು ವಿಶ್ವವಿದ್ಯಾಲಯ ಇಂಗ್ಲೀಷ್ ವಿಭಾಗ ಹಾಗೂ ಕಾಲೇಜು ಆಂಗ್ಲ ಶಿಕ್ಷಕರ ವೇದಿಕೆ ವತಿಯಿಂದ ಆಯೋಜಿಸಿದ್ದ “ ಎನ್‌ಇಪಿ ಇಂಗ್ಲೀಷ್ ಪಠ್ಯಕ್ರಮ : ಮೌಲ್ಯಮಾಪನ ಹಾಗೂ ಬೋಧನಾ ಕ್ರಮಗಳು” ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Click on this Picture, Like & Follow Facebook Page ” Digi Malenadu “

ರಾಷ್ಟ್ರೀಯ ಶಿಕ್ಷಣ ನೀತಿ ಬಂದ ನಂತರದಲ್ಲಿ ಎದುರಾಗುತ್ತಿರುವ ಸವಾಲುಗಳು ಹಾಗೂ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ವಿಶ್ವವಿದ್ಯಾಲಯ ಹಾಗೂ ಸರ್ಕಾರದ ಹಂತದಲ್ಲಿ ಸಮಸ್ಯೆ ಪರಿಹರಿಸುವ ಕೆಲಸ ಆಗಬೇಕು. ಮುಂದಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕ್ರಮ ವಹಿಸಬೇಕಿದೆ ಎಂದು ತಿಳಿಸಿದರು.

ಕಾಲೇಜು ಆಂಗ್ಲ ಶಿಕ್ಷಕರ ವೇದಿಕೆ ಅಧ್ಯಕ್ಷೆ ಡಾ. ಎಂ.ಕೆ.ವೀಣಾ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಅವಕಾಶಗಳ ಜತೆಯಲ್ಲಿ ಸಮಸ್ಯೆಗಳು ಸಹ ಎದುರಾಗಿವೆ. ವಿದ್ಯಾರ್ಥಿಗಳ ಮೌಲ್ಯ, ಕೌಶಲ್ಯ, ಜ್ಞಾನ ವೃದ್ಧಿಸುವ ದಿಸೆಯಲ್ಲಿ ಶಿಕ್ಷಕರು ಹೊಸ ಬೋಧನಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು. ಶಿಕ್ಷಣ ಬೋಧನಾ ಕ್ರಮವು ಯಾಂತ್ರೀಕ ಆಗಿರಬಾರದು. ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗುವ ರೀತಿಯಲ್ಲಿ ಶಿಕ್ಷಣ ನೀಡಬೇಕು ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಕಾಲೇಜು ಆಂಗ್ಲ ಶಿಕ್ಷಕರ ವೇದಿಕೆ ಕಾರ್ಯದರ್ಶಿ ಡಾ. ಟಿ.ಅವಿನಾಶ್ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಯು ತುಂಬಾ ಗೊಂದಲ ಮೂಡಿಸುವ ರೀತಿಯಲ್ಲಿದೆ. ಶಿಕ್ಷಣ ನೀಡುವಲ್ಲಿ ಆಗುತ್ತಿರುವ ಸಮಸ್ಯೆಗಳು ಹಾಗೂ ಪರಿಹಾರದ ಕುರಿತು ಸಮಾಲೋಚನೆ ನಡೆಸಬೇಕಿದೆ. ಸಮಸ್ಯೆಗಳಿಂದ ಹೊರಬರುವುದು ಹೇಗೆ ಎನ್ನುವುದಕ್ಕೆ ಉತ್ತರ ಕಂಡುಕೊಳ್ಳಬೇಕಿದೆ. ಹೊಸ ಪಠ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ತಲುಪಿಸಲು ಶಿಕ್ಷಕರು ಸಿದ್ಧತೆ ನಡೆಸಬೇಕು ಎಂದು ತಿಳಿಸಿದರು.

ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಫ್ರೊಫೆಸರ್ ಡಾ. ಪ್ರವೀಣ್ ಶೆಟ್ಟಿ ಉಪನ್ಯಾಸ ನೀಡಿದರು. ಕುವೆಂಪು ವಿಶ್ವವಿದ್ಯಾಲಯದ ಡಾ. ನಾಗ್ಯಾನಾಯ್ಕ ಬಿ.ಎಚ್., ಡಿವಿಎಸ್ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಕೇತನಾ ಆರ್ತಿ ಎನ್., ಐಕ್ಯೂಎಸಿ ಸಂಚಾಲಕ ಕುಮಾರಸ್ವಾಮಿ, ಚೈತ್ರಾ ಎಂ.ಆರ್. ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!