ಐಲೆಟ್ಸ್ ಡಯಾಬಿಟಿಸ್ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ ಜುಲೈ 14ಕ್ಕೆ
ಶಿವಮೊಗ್ಗ | 11 ಜುಲೈ 2023 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ನಗರದ ಐಲೆಟ್ಸ್ ಡಯಾಬಿಟಿಸ್ ಆಸ್ಪತ್ರೆಯಲ್ಲಿ ಜುಲೈ 14 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ವರೆಗೆ ಬೆಂಗಳೂರಿನ ಗರ್ಭಗುಡಿ ಐವಿಎಫ್ ಸೆಂಟರ್ ಹಾಗೂ ಮಣಿಪಾಲ್ ಆಸ್ಪತ್ರೆಯ ಸಹಯೋಗದಲ್ಲಿ “ಬಂಜೆತನ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಐಲೆಟ್ಸ್ ಆಸ್ಪತ್ರೆಯ ಎಂಡಿ ಡಾ. ಪ್ರೀತಂ ಬಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
Click on this below picture, Like & Follow Facebook Page ” Digi Malenadu “
ಜೀವನದ ಶೈಲಿ, ಆಹಾರ ಕ್ರಮ, ಮದುವೆ ವಿಳಂಬ, ಮದ್ಯ ವ್ಯಸನ ಸೇರಿದಂತೆ ವಿವಿಧ ಕಾರಣಗಳಿಂದ ಬಂಜೆತನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ವೈದ್ಯರ ಸೂಕ್ತ ಮಾರ್ಗದರ್ಶನದ ಅವಶ್ಯಕತೆ ಇದೆ. ಶಿಬಿರದಲ್ಲಿ ನೋಂದಣಿ ಮಾಡಿಸುವವರಿಗೆ ವೈದ್ಯಕೀಯ ಸಲಹೆ, ಸಮಾಲೋಚನೆ ಹಾಗೂ ಮಾರ್ಗದರ್ಶನ ನೀಡಲಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಐವಿಎಫ್ ಸೆಂಟರ್ ಮಾರುಕಟ್ಟೆ ವ್ಯವಸ್ಥಾಪಕ ಸಂಜಯ್ ಮಾತನಾಡಿ, ತಜ್ಞ ವೈದ್ಯೆ ಡಾ. ಆಶಾ ಎಸ್.ವಿಜಯ್ ತಂಡ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದು, ತಪಾಸಣೆ ಮಾಡಿಸಿಕೊಳ್ಳಬಹುದಾಗಿದೆ. ಬೆಂಗಳೂರಿನಲ್ಲಿ ಐವಿಎಫ್ ಚಿಕಿತ್ಸೆ ಸಂದರ್ಭದಲ್ಲಿ ಉಚಿತ ವಸತಿ ಸೌಲಭ್ಯ ನೀಡಲಾಗುವುದು. ಶಿವಮೊಗ್ಗ ಜಿಲ್ಲೆಯ ಜನರು ಶಿಬಿರದ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ಐಲೆಟ್ಸ್ ಆಸ್ಪತ್ರೆಯ ವಿನಯ್ ಜಾನ್, ಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu