ಕಠಿಣ ಸನ್ನಿವೇಶಗಳನ್ನು ಸಮರ್ಥವಾಗಿ ನಿರ್ವಹಿಸುವ ಗುಣ ಅಗತ್ಯ, ಹಾಸ್ಯ ಭಾಷಣಕಾರ ರಾಘವೇಂದ್ರ ಆಚಾರ್ಯ

ಕಠಿಣ ಸನ್ನಿವೇಶಗಳನ್ನು ಸಮರ್ಥವಾಗಿ ನಿರ್ವಹಿಸುವ ಗುಣ ಅಗತ್ಯ, ಹಾಸ್ಯ ಭಾಷಣಕಾರ ರಾಘವೇಂದ್ರ ಆಚಾರ್ಯ

ಶಿವಮೊಗ್ಗ | 12 ಜುಲೈ 2023 | ಡಿಜಿ ಮಲೆನಾಡು.ಕಾಂ

ಬದುಕಿನಲ್ಲಿ ಎದುರಾಗುವ ಕಠಿಣ  ಸನ್ನಿವೇಶಗಳನ್ನು ಸಮರ್ಥವಾಗಿ ನಿರ್ವಹಿಸುವ ಗುಣವನ್ನು ಯುವ ಸಮೂಹ ಬೆಳೆಸಿಕೊಳ್ಳಬೇಕು ಎಂದು ಹಾಸ್ಯ ಭಾಷಣಕಾರ ರಾಘವೇಂದ್ರ ಆಚಾರ್ಯ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಎಂಸಿಎ ವಿಭಾಗದ ವತಿಯಿಂದ ಬುಧವಾರ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಟೆಕ್ ಕ್ರಂಚ್’ ಯುಜಿ ಫೆಸ್ಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Click on this below picture, Like & Follow Facebook Page ” Digi Malenadu “

ಆಧುನಿಕ ಶೈಲಿಯ ಬದುಕಿನಲ್ಲಿ ಯುವ ಸಮೂಹ ದ್ವಂದ್ವದಲ್ಲಿ ಸಿಲುಕಿ ಕೊಂಡಿದ್ದಾರೆ. ತನ್ನನ್ನು ತಾನು ಹುಡುಕಿಕೊಂಡು ದೂರದ ಊರುಗಳಿಗೆ ತಿರುಗಾಡುತ್ತಾರೆ ವಿನಃ. ತನ್ನ ಸುತ್ತಲಿನ ವಾತಾವರಣದಿಂದಲೇ ಬದುಕಿಗೆ ಪ್ರೇರಣೆ ಪಡೆಯುವ ಅವಕಾಶಗಳನ್ನು ಹುಡುಕಿಕೊಳ್ಳುವುದರಲ್ಲಿ ಸೋತು ಬಿಟ್ಟಿದ್ದಾರೆ ಎಂದು ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣರಾವ್ ಮಾತನಾಡಿ, ಮನುಷ್ಯ ಸದಾ ಚಟುವಟಿಕೆಗಳಿಂದ ಕೂಡಿರಬೇಕು. ಬದುಕು ಹೇಗೊ ಆಯಿತು ಎಂಬ ತಾತ್ಸಾರಕ್ಕಿಂತ, ಹೀಗೆ ಆಗಬೇಕು ಎಂಬ ಸ್ಪಷ್ಟತೆ ಇರಬೇಕು. ಮನುಷ್ಯನ ಜೀವನದಲ್ಲಿ‌ ಎಲ್ಲ ಪ್ರಾಕಾರಗಳು ಇರಬೇಕು. ಸಂತೋಷವೆಂಬ ಪ್ರಕಾರ ಮೇಲುಗೈ ಸಾಧಿಸಬೇಕು ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಪದವಿ ಕಾಲೇಜುಗಳ ಮೂವತ್ತಕ್ಕು ಹೆಚ್ಚು ತಂಡಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಹಾಸ್ಯ ಭಾಷಣಕಾರ ಉಮೇಶ್ ಗೌಡ ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಶೈಕ್ಷಣಿಕ ಆಡಳಿತಾಧಿಕಾರಿ ಎಂ.ಎನ್.ರಾಮಚಂದ್ರ, ಜೆ.ಎನ್.ಎನ್.ಸಿ.ಇ ಪ್ರಾಚಾರ್ಯ ಡಾ. ಪಿ.ಮಂಜುನಾಥ, ಎಂಸಿಎ ವಿಭಾಗದ ನಿರ್ದೇಶಕ ಡಾ.ಪ್ರಭುದೇವ, ಎಂಬಿಎ ವಿಭಾಗದ ನಿರ್ದೇಶಕ ಡಾ.ಶ್ರೀಕಾಂತ್, ಕಾರ್ಯಕ್ರಮ ಸಂಯೋಜಕ ಕೆ.ಎಲ್.ಅರುಣ್ ಕುಮಾರ್, ಹೆಚ್.ಟಿ.ಮಂಜುನಾಥ, ವಿದ್ಯಾರ್ಥಿ ಸಂಯೋಜಕ ಅಮಿತ್, ಕವನ, ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!