ಶಿವಮೊಗ್ಗ ವಿಮಾನ ಹಾರಾಟ ಶೀಘ್ರ ಆರಂಭ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ

ಶಿವಮೊಗ್ಗ ವಿಮಾನ ಹಾರಾಟ ಶೀಘ್ರ ಆರಂಭ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ

ಶಿವಮೊಗ್ಗ | 16 ಜುಲೈ 2023 | ಡಿಜಿ ಮಲೆನಾಡು.ಕಾಂ

ಪ್ರಧಾನಿ ನರೇಂದ್ರ ಮೋದಿಯಿಂದ ಲೋಕಾರ್ಪಣೆಗೊಂಡ ಶಿವಮೊಗ್ಗ ವಿಮಾಣ ನಿಲ್ದಾಣ ಆಗಸ್ಟ್‌ 11ರಿಂದ ಕಾರ್ಯಾಚರಣೆ ಆರಂಭಿಸಲಿದೆ. ಶೀಘ್ರದಲ್ಲೇ ಟಿಕೆಟ್‌ ಬುಕಿಂಗ್‌ ಮಾಡಬಹುದಾಗಿದ್ದು, ವಿಮಾನ ಹಾರಾಟ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್‌.ಸೆಲ್ವಮಣಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ವಿಮಾನ ಕಾರ್ಯಾಚರಣೆಗೆ ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಕೊಳ್ಳಬೇಕು. ಇಂಡಿಗೋ ಅಧಿಕಾರಿ, ಸಿಬ್ಬಂದಿಯೊಂದಿಗೆ ಚರ್ಚಿಸಿ ವೀಕ್ಷಣೆ ವೇಳೆ ನೀಡಿರುವ ಅಂಶ ಹಾಗೂ ಹೆಚ್ಚುವರಿ ಸೌಕರ್ಯಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅಧಿಕಾರಿಗಳಿಗೆ ಸೂಚಿಸಿದರು.

Click on below this picture, Like & Follow Facebook Page ” Digi Malenadu “

78 ಆಸನ ವ್ಯವಸ್ಥೆಯುಳ್ಳ ಎಟಿಆರ್ 72 ಇಂಡಿಗೋ ವಿಮಾನ ಆಗಸ್ಟ್‌ 11 ರಂದು ಕಾರ್ಯಾಚರಣೆ ನಡೆಸಲಿದೆ. ವಿಮಾನ ನಿಲ್ದಾಣದ ಅಧಿಕೃತ ವೆಬ್‍ಸೈಟ್ ಅಭಿವೃದ್ದಿಪಡಿಸಿ ಗಣ್ಯರಿಂದ ಲೋಕಾರ್ಪಣೆ ಮಾಡಿಸಬೇಕು. ಗಣ್ಯರ ಸ್ವಾಗತ ಮತ್ತು ಉದ್ಘಾಟನಾ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ವಿಮಾನ ನಿಲ್ದಾಣಕ್ಕೆ ಅಗತ್ಯವಾದ ವಾಹನಗಳ ಸೌಕರ್ಯ, ಕಾಫಿ ತಿಂಡಿ ಮಳಿಗೆ, ಅಗತ್ಯ ಆಂಬುಲೆನ್ಸ್ ಹಾಗೂ ಜಿಲ್ಲಾ ಪ್ರವಾಸೋದ್ಯಮಕ್ಕೆ ಒಂದು ಪ್ರತ್ಯೇಕ ಮಳಿಗೆ ಸಿದ್ದಪಡಿಸಬೇಕು. ವಿಮಾನದ ನಿಲ್ದಾಣದ ಸುತ್ತ ನಿಯಮಾನುಸಾರ ಬಫರ್‌ ಜೋನ್‌ ಅಧಿಸೂಚನೆಗೆ ಕ್ರಮ ಕೈಗೊಳ್ಳಬೇಕು. ಕಾನೂನು ಸುವ್ಯವಸ್ಥೆ ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ಸೇರಿ ಕಾರ್ಯಕ್ರಮದ ಯಶಸ್ಸಿಗೆ ಅಗತ್ಯವಾದ ಎಲ್ಲ ಅಂಶಗಳ ಕುರಿತು ಸಮರ್ಪಕವಾಗಿ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ದಿ ಸಚಿವ ಎಂ.ಬಿ.ಪಾಟೀಲ್ ಆಗಸ್ಟ್‌ 11 ರ ಬೆಳಗ್ಗೆ 9.30 ಕ್ಕೆ ಬೆಂಗಳೂರಿನಿಂದ ಇಂಡಿಗೋ ವಿಮಾನದಲ್ಲಿ ಹೊರಟು ಬೆಳಗ್ಗೆ 11 ಕ್ಕೆ ಶಿವಮೊಗ್ಗ ವಿಮಾಣ ನಿಲ್ದಾಣಕ್ಕೆ ಆಗಮಿಸುವರು. ಬೆಳಗ್ಗೆ 11.20 ಕ್ಕೆ ವಿಮಾನ ಪ್ರಯಾಣಿಕರೊಂದಿಗೆ ಶಿವಮೊಗ್ಗದಿಂದ ನಿರ್ಗಮಿಸಿ ಮಧ್ಯಾಹ್ನ 12.15 ಕ್ಕೆ ಬೆಂಗಳೂರು ವಿಮಾನ ನಿಲ್ದಾಣ ತಲುಪುವ ಯೋಜನೆ ಇದೆ ಎಂದು ಶಿವಮೊಗ್ಗ ವಿಮಾನ ನಿಲ್ದಾಣ ನಿರ್ದೇಶಕ ಕ್ಯಾಪ್ಟನ್  ಶಮಂತ್ ಮಾಹಿತಿ ನೀಡಿದರು.

ಅಪರ ಜಿಲ್ಲಾಧಿಕಾರಿ(ಪ್ರಭಾರ) ಮೇಘನಾ ಆರ್, ಶಿವಮೊಗ್ಗ ಎಸಿ ರವಿಚಂದ್ರನ್‌ ನಾಯಕ್, ಪಿಡಬ್ಲ್ಯುಡಿ ಕಾರ್ಯಪಾಲಕ ಅಭಿಯಂತರ ಸಂಪತ್‍ಕುಮಾರ್ ಪಿಂಗಳೆ, ಪೊಲೀಸ್ ಪಡೆ ಅಸಿಸ್ಟೆಂಟ್ ಕಮಾಂಡೆಂಟ್ ಚಂದ್ರಶೇಖರ್, ಕೆಎಸ್‍ಐಐಡಿಸಿ ಅಧಿಕಾರಿಗಳು, ಅಧಿಕಾರಿಗಳು, ಗುತ್ತಿಗೆದಾರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!