ಪಿಯು ಶಿಕ್ಷಣಕ್ಕೂ ಮುನ್ನ ಗುರಿ ಸಾಧನೆಯ ಸ್ಪಷ್ಟತೆ ಮುಖ್ಯ
ಶಿವಮೊಗ್ಗ | 16 ಜುಲೈ 2023 | ಡಿಜಿ ಮಲೆನಾಡು.ಕಾಂ
ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಲ್ಲಿಯೇ ಗುರಿ ಸಾಧಿಸುವ ಸ್ಪಷ್ಟತೆ ಹೊಂದಬೇಕು. ಶಿಕ್ಷಣ ಪೂರ್ಣಗೊಳ್ಳುತ್ತಿದ್ದರೂ ಭವಿಷ್ಯದ ಕಲ್ಪನೆ ಇಲ್ಲದಿದ್ದರೆ ಸಾಧನೆ ಅಸಾಧ್ಯ ಎಂದು ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ನಗರದ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಪದವಿಪೂರ್ವ ( ಸ್ವತಂತ್ರ ) ಕಾಲೇಜಿನ ಗ್ರಂಥಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ “ಮಾರ್ಗದರ್ಶನ ಕಾರ್ಯಕ್ರಮ” ಉದ್ಘಾಟಿಸಿ ಮಾತನಾಡಿದರು. ಪ್ರಥಮ ಪಿಯು ಸೇರ್ಪಡೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಜೀವನದಲ್ಲಿ ಆಯ್ಕೆ ಮಾಡಿಕೊಳ್ಳುವ ಕ್ಷೇತ್ರದ ಸ್ಪಷ್ಟತೆ ಹಾಗೂ ಅದಕ್ಕೆ ಬೇಕಾದ ಸಿದ್ಧತೆ ಆರಂಭಿಸಬೇಕು. ನಿಮ್ಮ ಆಸಕ್ತಿ ಕ್ಷೇತ್ರ ಯಾವುದು, ಆ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಬೇಕಾದ ಕೈಗೊಳ್ಳಬೇಕಾದ ಸಿದ್ಧತೆಗಳು ಏನೇಂಬುದನ್ನು ಅರಿತುಕೊಂಡು ಪ್ರಯತ್ನ ಮಾಡಬೇಕು. ಹಂತ ಹಂತವಾಗಿ ಪ್ರಯತ್ನ ಹಾಗೂ ನಿರಂತರ ಪರಿಶ್ರಮ ಯಶಸ್ಸಿನ ಸೂತ್ರ ಎಂದು ತಿಳಿಸಿದರು.
Click on below this picture, Like & Follow Facebook Page ” Digi Malenadu “
ವಿದ್ಯಾರ್ಥಿಗಳು ಪೋಷಕರು, ಹಿರಿಯರು ಹಾಗೂ ಶಿಕ್ಷಕರ ಮಾರ್ಗದರ್ಶನ ಪಡೆದುಕೊಳ್ಳಬೇಕು. ಆದರೆ ಆಯ್ಕೆಯ ಬಗ್ಗೆ ಯಾವುದೇ ಗೊಂದಲ ಇಟ್ಟುಕೊಳ್ಳಬಾರದು. ಗೊಂದಲ ಇದ್ದರೆ ಮುಂದಿನ ಹಾದಿ ಕಷ್ಟವಾಗುತ್ತದೆ ಅಥವಾ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಸೂಕ್ತ ಮಾರ್ಗದರ್ಶನ ಪಡೆದು ಮುನ್ನಡೆಯಬೇಕು ಎಂದರು.
ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡುವ ಜತೆಯಲ್ಲಿ ಕಾಲೇಜಿನ ಕೀರ್ತಿ ಹೆಚ್ಚಿಸುವ ಕೆಲಸ ಮಾಡಬೇಕು. ಹೆಚ್ಚು ರ‍್ಯಾಂಕ್, ಡಿಸ್ಟಿಂಕ್ಷನ್‌ಗಳನ್ನು ಪಡೆಯಬೇಕು. ಉನ್ನತ ಸ್ಥಾನ ತಲುಪಲು ಪ್ರಯತ್ನ ನಡೆಸಬೇಕು ಎಂದು ಶುಭ ಹಾರೈಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಪದವಿಪೂರ್ವ ( ಸ್ವತಂತ್ರ ) ಕಾಲೇಜಿನ ಪ್ರಾಚಾರ್ಯ ಎ.ಇ.ರಾಜಶೇಖರ್ ಮಾತನಾಡಿ, ಪೋಷಕರಿಗೆ ಮಾಹಿತಿ ಒದಗಿಸುವುದು ಹಾಗೂ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಇರುವ ಅವಕಾಶಗಳ ಬಗ್ಗೆ ಮಾರ್ಗದರ್ಶನ ನೀಡುವುದು ಕಾರ್ಯಕ್ರಮದ ಆಶಯ. ಏನೇ ಗೊಂದಲಗಳಿದ್ದರೂ ಸಮಾಲೋಚನೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು. ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.
ದೇಶಿಯ ವಿದ್ಯಾಶಾಲಾ ಸಮಿತಿ ಶಿಕ್ಷಕ ಪ್ರತಿನಿಧಿ ಉಮೇಶ್ ಎಚ್.ಸಿ., ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu