ಶಿವಮೊಗ್ಗ ಜಿಲ್ಲೆಯ ಪ್ರವಾಸಿ ಸ್ಥಳಗಳ ಪರಿಚಯಿಸುವ ಅನ್ವೇಷಣೆ ಅಗತ್ಯ

ಶಿವಮೊಗ್ಗ ಜಿಲ್ಲೆಯ ಪ್ರವಾಸಿ ಸ್ಥಳಗಳ ಪರಿಚಯಿಸುವ ಅನ್ವೇಷಣೆ ಅಗತ್ಯ

ಶಿವಮೊಗ್ಗ | 21 ಜುಲೈ 2023 | ಡಿಜಿ ಮಲೆನಾಡು.ಕಾಂ

ಪ್ರವಾಸಿ ತಾಣಗಳ ಕುರಿತು ಪರಿಚಯಿಸುವ ಹಾಗೂ ಅನ್ವೇಷಣೆ ಮಾಡುವ ಪ್ರವೃತ್ತಿ ರಾಜ್ಯದಲ್ಲಿ ಕಡಿಮೆ. ಆದ್ದರಿಂದ ರಾಜ್ಯದ ಬಹುತೇಕ ಪ್ರವಾಸಿ ಸ್ಥಳಗಳ ಬಗ್ಗೆ ಜನರಿಗೆ ತಿಳಿದಿಲ್ಲ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಪ್ರವಾಸೋದ್ಯಮ ಇಲಾಖೆ, ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣೆ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ್ದ ಶಿವಮೊಗ್ಗ ಪ್ರವಾಸೋದ್ಯಮ ಹಾಗೂ ಪೂರಕ ಅಭಿವೃದ್ಧಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಕರ್ನಾಟಕ ರಾಜ್ಯದಲ್ಲಿ ಸಾವಿರಾರು ಪ್ರವಾಸಿ ತಾಣಗಳಿದ್ದು, ಪ್ರತಿಯೊಂದು ಜಿಲ್ಲೆಯಲ್ಲಿಯೂ ಐವತ್ತಕ್ಕೂ ಅಧಿಕ ಪ್ರವಾಸಿ ಕ್ಷೇತ್ರಗಳಿವೆ. ಪರಿಸರ, ಐತಿಹಾಸಿಕ, ಧಾರ್ಮಿಕ ಸೇರಿದಂತೆ ಆಕರ್ಷಣೆಯ ಪ್ರವಾಸ ಸ್ಥಳಗಳನ್ನು ಪರಿಚಯಿಸುವ ಹಾಗೂ‌ ಅನ್ವೇಷಿಸುವ ಕಾರ್ಯ ಆಗಬೇಕು. ಶಿವಮೊಗ್ಗ ಜಿಲ್ಲೆಯಲ್ಲಿ ಸಹ ನೂರಾರು ಪ್ರವಾಸಿ ಕ್ಷೇತ್ರಗಳಿವೆ. ಪರಿಚಯಿಸುವ ಕೆಲಸ ಮಾಡುವುದರಿಂದ ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿ ಆಗಲಿದೆ ಎಂದು ತಿಳಿಸಿದರು.

ಪ್ರವಾಸೋದ್ಯಮದ ಸುಸ್ಥಿರ ಅಭಿವೃದ್ಧಿ ಆಗಬೇಕು. ಪ್ರವಾಸಿ ಸ್ಥಳಗಳಲ್ಲಿ ಮೂಲ ಸೌಕರ್ಯ, ಸುರಕ್ಷತೆಗೆ ಹೆಚ್ಚಿನ ಕ್ರಮ ವಹಿಸಬೇಕು. ಕೃಷಿ ಪ್ರವಾಸೋದ್ಯಮದ ಪ್ರಾಮುಖ್ಯತೆ ಅರಿವು‌ ಮಾಡಿಸಬೇಕು. ಪ್ರವಾಸೋದ್ಯಮದಲ್ಲಿ ಇರುವ ಉದ್ಯೋಗ ಸಾಧ್ಯತೆಗಳ ಬಗ್ಗೆ ಹೆಚ್ಚಿನ ಜಾಗೃತಿ ಆಗಬೇಕು ಎಂದರು.

ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣೆ ಕಾಲೇಜಿನ ಪ್ರಾಚಾರ್ಯೆ ಡಾ. ಎಂ.ಕೆ.ವೀಣಾ ಮಾತನಾಡಿ, ಅಭಿವೃದ್ಧಿ ಹೆಸರಿನಲ್ಲಿ ಪ್ರಕೃತಿ ನಾಶ ಆಗುತ್ತಿದ್ದು, ಪರಿಸರ ಹಾನಿಯಾಗುವುದನ್ನು ತಪ್ಪಿಸಬೇಕು. ಪರಿಸರ ಸಂರಕ್ಷಣೆ ಜತೆಯಲ್ಲಿ ಪ್ರವಾಸೋದ್ಯಮ ಪೂರಕ ಅಭಿವೃದ್ಧಿ ಆಗಬೇಕು. ನೈಸರ್ಗಿಕವಾಗಿ ಇರುವ ಪ್ರವಾಸಿ ಸ್ಥಳಗಳ ಗುರುತಿಸುವ ಕೆಲಸ‌‌ ಆಗಬೇಕು. ಪಾರಂಪರಿಕ ಚಟುವಟಿಕೆಗಳ ಕುರಿತಾಗಿರುವ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಪ್ರವಾಸ ಎನ್ನುವುದು ಕೇವಲ ಮನರಂಜನೆಯಲ್ಲ. ಪ್ರವಾಸವು ಸಾಹಸಿ ಹಾಗೂ ಜ್ಞಾನಾರ್ಜನೆಯ ಮಾರ್ಗ. ಶಿವಮೊಗ್ಗ ಜಿಲ್ಲೆಯ ಪ್ರವಾಸ ಸ್ಥಳಗಳನ್ನು ಹೆಚ್ಚು ಹೆಚ್ಚು ಪರಿಚಯಿಸಬೇಕು ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಶಿವಮೊಗ್ಗ ಜಿಲ್ಲೆಯು ಪ್ರಾಕೃತಿಕವಾಗಿ ಸಂಪನ್ಮೂಲ ಹೊಂದಿದ್ದು, ಪ್ರವಾಸೋದ್ಯಮ ಕ್ಕೆ ಪೂರಕ ಅವಕಾಗಳಿವೆ. ಹೊಸ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸುವ ಅಗತ್ಯವಿದೆ ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಪ್ರವಾಸಿ ಯುವಜನರ ತಂಡವನ್ನು ಕಾಲೇಜು ವಿದ್ಯಾರ್ಥಿಗಳು ರಚಿಸಿಕೊಂಡು ಶಿವಮೊಗ್ಗ ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಿ ವಿಡಿಯೋ ಚಿತ್ರಿಕರೀಸಿ ಸೋಷಿಯಲ್ ಮಿಡಿಯಾದ ತಾಣಗಳಲ್ಲಿ ದಾಖಲಿಸಬೇಕು. ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ವಿಶ್ವದ ಎಲ್ಲರಿಗೂ ವಿಷಯ ತಲುಪಬೇಕು. ಪ್ರವಾಸೋದ್ಯಮ ಅಭಿವೃದ್ಧಿ ಸಾಧ್ಯತೆಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಬೇಕು ಎಂದು ತಿಳಿಸಿದರು.

ಪತ್ರಕರ್ತ ರಾಮಚಂದ್ರ ಗುಣಾರಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಆವಿನ್.ಆರ್., ಅಜಯ್ ಕುಮಾರ್ ಶರ್ಮಾ, ಸವಿತಾ ಮಾಧವ್ ಅವರು‌ ವಿಶೇಷ ಉಪನ್ಯಾಸ ನೀಡಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ್ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯ್ ಕುಮಾರ್, ಬಿ.ಗೋಪಿನಾಥ್, ಪ್ರದೀಪ್ ಯಲಿ, ಇ.ಪರಮೇಶ್ವರ್, ಗಣೇಶ್ ಅಂಗಡಿ, ರಮೇಶ್ ಹೆಗೆಡೆ ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!