ರಸಪ್ರಶ್ನೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದರಿಂದ ಬೌದ್ಧಿಕ ಶಕ್ತಿ ವೃದ್ಧಿ
ಶಿವಮೊಗ್ಗ | 22 ಜುಲೈ 2023 | ಡಿಜಿ ಮಲೆನಾಡು.ಕಾಂ
ರಸಪ್ರಶ್ನೆ ಸ್ಪರ್ಧೆಯಲ್ಲಿ ಮಕ್ಕಳು ಭಾಗವಹಿಸುವುದರಿಂದ ಸಾಮಾನ್ಯ ಜ್ಞಾನ ವೃದ್ಧಿಯಾಗುವ ಜೊತೆಗೆ ಬೌದ್ಧಿಕ ಬೆಳವಣಿಗೆ ಸಮರ್ಪಕವಾಗಿ ಆಗುತ್ತದೆ ಎಂದು ಶಿವಮೊಗ್ಗ ಸರ್ಜಿ ಫೌಂಡೇಷನ್ ಮ್ಯಾನೇಜಿಂಗ್ ಟ್ರಸ್ಟಿ ಡಾ. ಧನಂಜಯ ಸರ್ಜಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಜಾವಳ್ಳಿಯ ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್ ವತಿಯಿಂದ ಹಮ್ಮಿಕೊಂಡಿದ್ದ ಇಂಟರ್ ಸ್ಕೂಲ್ ರಸಪ್ರಶ್ನೆ ಸ್ಪರ್ಧೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
Click on below this picture, Like & Follow Facebook Page ” Digi Malenadu “
ರಸಪ್ರಶ್ನೆ ಸ್ಪರ್ಧೆಯು ಮಕ್ಕಳಲ್ಲಿ ಕ್ರಿಯಾಶೀಲತೆ ಹೆಚ್ಚಿಸುತ್ತದೆ. ಸ್ಪರ್ಧೆಯನ್ನು ಹೇಗೆ ಎದುರಿಸಬೇಕು ಎಂಬ ಬಗ್ಗೆ ಗೊತ್ತಾಗುತ್ತದೆ. ಇಂತಹ ಕಾರ್ಯಕ್ರಮಗಳು ಹೆಚ್ಚು ನಡೆದಷ್ಟೂ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಪೂರಕವಾಗುತ್ತದೆ. ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬಹುದು ಎಂದು ತಿಳಿಸಿದರು.
ಮಕ್ಕಳು ಪ್ರಶ್ನೆ ಕೇಳುವ ಗುಣವನ್ನು ರೂಢಿಸಿಕೊಳ್ಳುವುದರಿಂದ ಮಕ್ಕಳಲ್ಲಿ ಕುತೂಹಲ ಹೆಚ್ಚಾಗುತ್ತದೆ. ಹೊಸ ವಿಷಯ ಕಲಿಕೆಗೆ ಉತ್ಸಾಹ ದೊರೆಯುತ್ತದೆ. ಓದಿನ ಬಗ್ಗೆ ಆಸಕ್ತಿ, ಸಕಾರಾತ್ಮಕ ಭಾವನೆಗಳು ಬೆಳೆಯುತ್ತದೆ. ಗುರಿ ಮುಟ್ಟುವ ಆತ್ಮಬಲ, ಕೌಶಲ್ಯ ವೃದ್ಧಿಯಾಗುತ್ತದೆ. ನಿಮ್ಮನ್ನು ನೀವು ಪ್ರಶ್ನೆ ಮಾಡಿಕೊಂಡರೆ ಜೀವನದಲ್ಲಿ ಎತ್ತರಕ್ಕೆ ಹೋಗಲು ಸಾಧ್ಯ ಎಂದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ವಿದ್ಯಾರ್ಥಿಗಳು ನೆನಪಿನ ಶಕ್ತಿ ಹೇಗೆ ವೃದ್ಧಿಸಿಕೊಳ್ಳಬೇಕು. ಓದುವಾಗ ಯಾವ ಕ್ರಮಗಳನ್ನು ಅನುಸರಿಸಿದರೆ ದೀರ್ಘಕಾಲ ನೆನಪಿನಲ್ಲಿ ಉಳಿಯುತ್ತದೆ. ಓದಲು ಸರಳ ಸೂತ್ರಗಳನ್ನು ವಿವರಿಸಿ ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟರು. ಅಡ್ವಾನ್ಸ್‌ಡ್ ಸ್ಕಿಲ್ ಡೆವಲಪ್‌ಮೆಂಟ್ ಅಕಾಡೆಮಿ ಸಿಇಒ ಸವಿತಾ ಮಾದವ್, ಓಪನ್ ಮೈಂಡ್ಸ್ ವರ್ಲ್ದ್ ಸ್ಕೂಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಕಿರಣ್ ಕುಮಾರ್ ಹಾಜರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu