ರಕ್ತದಾನದಿಂದ ಜೀವ ಉಳಿಸುವ ಮಹತ್ತರ ಕಾರ್ಯ, ಡಿವಿಎಸ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಶಿವಮೊಗ್ಗ | 27 ಜುಲೈ 2023 | ಡಿಜಿ ಮಲೆನಾಡು.ಕಾಂ
ರಕ್ತದಾನ ಪ್ರಕ್ರಿಯೆಯು ಜೀವ ಉಳಿಸುವ ಮಹತ್ತರ ಕಾರ್ಯ ಆಗಿದ್ದು, ರಕ್ತದಾನ ಕುರಿತು ಭಯ ಪಡುವ ಅಗತ್ಯವಿಲ್ಲ, ತಪ್ಪು ಕಲ್ಪನೆ ಕೂಡ ಹೊಂದಬಾರದು. ಆರೋಗ್ಯವಂತ ಯುವಜನರು ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವತಿಯಿಂದ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
Click on below this picture, Like & Follow Facebook Page ” Digi Malenadu “
ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ರಕ್ತದಾನವು ಅತ್ಯಂತ ಮಹತ್ತರ ಪಾತ್ರ ವಹಿಸುತ್ತದೆ. ಸದೃಢ ಆರೋಗ್ಯಕ್ಕಾಗಿ ಅರ್ಹರಿರುವ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು. ಒಮ್ಮೆ ರಕ್ತದಾನ ಮಾಡುವುದರಿಂದ ಮೂರ್ನಾಲ್ಕು ಜೀವ ಉಳಿಸಲು ಸಾಧ್ಯವಿದೆ. ಶಿವಮೊಗ್ಗದಲ್ಲಿ ರಕ್ತದ ಕೊರತೆ ಇದ್ದು, ಇಂತಹ ರಕ್ತದಾನ ಕ್ಯಾಂಪ್ ಗಳನ್ನು ಹೆಚ್ಚು ಆಯೋಜಿಸುವುದರಿಂದ ರಕ್ತದ ಕೊರತೆ ಸಮಸ್ಯೆ ಸ್ವಲ್ಪಮಟ್ಟಿಗೆ ನಿವಾರಿಸಬಹುದು. ಕೆಲ ಸಂದರ್ಭಗಳಲ್ಲಿ ರಕ್ತ ಸಿಗದೇ ಜೀವ ಉಳಿಸಲು ಕಷ್ಟದ ಸನ್ನಿವೇಶ ಎದುರಾಗಿರುವ ಸನ್ನಿವೇಶ ನೋಡಿದ್ದೇವೆ. ಜಿಲ್ಲಾ ಕೇಂದ್ರಗಳಲ್ಲಿ ರಕ್ತದ ಲಭ್ಯತೆ ಇರುವಂತೆ ನೋಡಿಕೊಳ್ಳಬೇಕು ಎಂದರು.
ರಕ್ತದಾನದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಮ್ಮೆ ತಪ್ಪು ಸಂದೇಶಗಳನ್ನು ಹರಡಿಸುತ್ತಾರೆ. ಇದು ಅತ್ಯಂತ ತಪ್ಪುಕೆಲಸ. ಇಂತಹ ಕೆಲಸ ಮಾಡುವುದು ಕೂಡ ತಪ್ಪು. ಪ್ರತಿಯೊಬ್ಬರೂ ರಕ್ತದಾನ ಕುರಿತು ಗೊಂದಲ ಇದ್ದಲ್ಲಿ ವೈದ್ಯರ ಬಳಿ ಸಮಾಲೋಚಿಸಿ ಪರಿಹರಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಡಾ. ಕೆ.ಎ.ವಿಷ್ಣುಮೂರ್ತಿ ಮಾತನಾಡಿ, ಪ್ರತಿಯೊಬ್ಬರೂ ಜನ್ಮದಿನದ ಸಂಭ್ರಮ ಆಚರಣೆಯನ್ನು ರಕ್ತದಾನ ಮಾಡುವ ಮೂಲಕ ಸಾರ್ಥಕ ದಿನ ಆಗಿಸಿಕೊಳ್ಳಿ, ಜೀವ ಉಳಿಸುವ ಮಹತ್ತರ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ಆರೋಗ್ಯವಂತ ಯುವ ವಿದ್ಯಾರ್ಥಿಗಳು ಕಾಲೇಜು ಹಂತದಿಂದಲೇ ರಕ್ತದಾನ ಮಾಡುವ ಅಭ್ಯಾಸ ರೂಢಿಸಿಕೊಳ್ಳಬೇಕು. ಜೀವನದ ಅವಧಿಯಲ್ಲಿ ಹೆಚ್ಚು ರಕ್ತದಾನ ಮಾಡಿ ಅನೇಕ ಜೀವ ಉಳಿಸಿದ ಪುಣ್ಯ ಸಿಗುತ್ತದೆ. ಶಿಬಿರದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ರಕ್ತದಾನ ಮಾಡಬೇಕು ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್ ಕುಮಾರ್ ಮಾತನಾಡಿ, ರಕ್ತದಾನ ಮಾಡುವುದರಿಂದ ಆರೋಗ್ಯ ಸದೃಢ ಆಗಲಿದ್ದು, ಯಾವುದೇ ಅಂಜಿಕೆ ಬೇಡ, ಹೃದಯಾಘಾತ ಶೇ. 80 ಕಡಿಮೆ ಆಗುತ್ತದೆ ಎಂದು ತಿಳಿಸಿದರು.
ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸಿದ್ದರು. ಬೆಳಗ್ಗೆ 10 ರಿಂದ ಮಧ್ಯಾಹ್ನ 3.30ರವರೆಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಐವತ್ತಕ್ಕೂ ಅಧಿಕ ವಿದ್ಯಾರ್ಥಿಗಳು ರಕ್ತದಾನ ಮಾಡಿದರು.
ದೇಶಿಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್, ಸಹ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ, ಮೆಗ್ಗಾನ್ ರಕ್ತನಿಧಿ ಕೇಂದ್ರ ಆಸ್ಪತ್ರೆ ವೈದ್ಯಾಧಿಕಾರಿ ಡಾ. ವೀಣಾ.ಎಸ್., ರೆಡ್‌ಕ್ರಾಸ್ ಸಂಜೀವಿನಿ ರಕ್ತನಿಧಿ ಕೇಂದ್ರದ ಕಾರ್ಯದರ್ಶಿ ಮಂಜುನಾಥ್ ಅಪ್ಪಾಜಿ, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ನ್ಯಾಕ್ ಸಲಹೆಗಾರ ಪ್ರೊ. ಎಚ್.ಎಸ್.ಸುಧಾಕರ್, ಐಕ್ಯೂಎಸಿ ಸಂಯೋಜಕ ಪ್ರೊ. ಎನ್.ಕುಮಾರಸ್ವಾಮಿ, ರೆಡ್‌ಕ್ರಾಸ್ ಘಟಕ ಸಂಯೋಜಕ ಶ್ರೀನಿವಾಸ್ ಲಮಾಣಿ, ಕೇತನಾ ಆರ್ತಿ, ಧರಣೇಂದ್ರ ದಿನಕರ್ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu