ಸೇವೆಯು ಹೆಚ್ಚು ಜನರಿಗೆ ತಲುಪಿದಾಗ ಸಾರ್ಥಕ ಭಾವ

ಸೇವೆಯು ಹೆಚ್ಚು ಜನರಿಗೆ ತಲುಪಿದಾಗ ಸಾರ್ಥಕ ಭಾವ

ಶಿವಮೊಗ್ಗ | 1 ಆಗಸ್ಟ್‌ 2023 | ಡಿಜಿ ಮಲೆನಾಡು.ಕಾಂ

ಆಧುನಿಕ ತಂತ್ರಜ್ಞಾನದ ಸದುಪಯೋಗದ ಜತೆಯಲ್ಲಿ ರೋಟರಿ ಸೇವಾ ಕಾರ್ಯಗಳು ಹೆಚ್ಚು ಜನರಿಗೆ ತಲುಪುವಂತಾಗಬೇಕು. ಸೇವಾ ಚಟುವಟಿಕೆಗಳು ಹೆಚ್ಚು ಜನರಿಗೆ ತಲುಪಿದಾಗ ಸಾರ್ಥಕ ಭಾವ ಮೂಡುತ್ತದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಡ್ವಾನ್ಸ್ಡ್‌ ಸ್ಕಿಲ್ ಅಕಾಡೆಮಿ ಮುಖ್ಯ ಕಾರ್ಯ ನಿರ್ವಾಹಕಿ ಸವಿತಾ ಮಾಧವ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ರಾಜೇಂದ್ರ ನಗರದಲ್ಲಿರುವ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮೈಕ್ರೋ ಸಾಫ್ಟ್ ವೇರ್ ಕಂಪನಿಯ ಮುಖ್ಯ ಕಾರ್ಯನಿರ್ವಾಧಿಕಾರಿ ಸತ್ಯ ನಾಡೆಲ್ಲಾ ಅವರ ಲೇಖನ ” ಹಿಟ್ ರಿಫ್ರೆಷ್ ” ಎಂಬ ಪುಸ್ತಕದ ಕುರಿತು ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಜೀವನದ ಕಹಿ ದಿನಗಳಲ್ಲೂ ಒಬ್ಬ ವ್ಯಕ್ತಿ ಸಮಾಜಕ್ಕೆ ಉತ್ತಮ ಕೊಡುಗೆ ಹೇಗೆ ಕೊಡಬಹುದು ಎಂಬ ನಿದರ್ಶನಗಳನ್ನು ವಿವರಿಸಿ, ರೋಟರಿ ಸದಸ್ಯರು ಆಧುನಿಕ ತಂತ್ರಜ್ಞಾನದ ಸವಲತ್ತುಗಳನ್ನು ಬಳಸಿಕೊಂಡು ಸಮುದಾಯದಲ್ಲಿ ಹೆಚ್ಚಿನ ಸೌಲಭ್ಯಗಳನ್ನು ಉಚಿತವಾಗಿ ನೀಡಲು ಅವಕಾಶವಿದೆ. ಈ ನಿಟ್ಟಿನಲ್ಲಿ ರೋಟರಿ ಇನ್ನೂ ಹೆಚ್ಚು ಕಾರ್ಯ ಪ್ರವೃತ್ತರಾಗಬೇಕು ಸಲಹೆ ನೀಡಿದರು.

ರೋಟರಿ ಶಿವಮೊಗ್ಗ ಪೂರ್ವ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್ ಮಾತನಾಡಿ, ರೋಟರಿ ಸಂಸ್ಥೆಯು ನೂರಾರು ವರ್ಷಗಳಿಂದ ಸಮಾಜಮುಖಿ ಸೇವೆಗಳನ್ನು ಮಾಡುತ್ತಾ ಬರುತ್ತಿದ್ದು, ಪೋಲಿಯೋ ನಿರ್ಮೂಲನೆ ಕಾರ್ಯದಲ್ಲಿ ಮಹತ್ತರ ಪಾತ್ರ ವಹಿಸಿತ್ತು. ನೂರಾರು ಶಾಲೆಗಳಿಗೆ ಪರಿಕರಗಳು ನೀಡುತ್ತಾ ಬಂದಿದೆ ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಇತ್ತೀಚಿನ ದಿನಗಳಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡುತ್ತ ಬಂದಿದೆ. ರೋಟರಿ ಸಂಸ್ಥೆಯು ಕೋವಿಡ್ ಸಂದರ್ಭದಲ್ಲಿ ಲಕ್ಷಾಂತರ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಟ್ಯಾಬ್ ನೀಡಿದೆ. ಮುಂದಿನ ದಿನಗಳಲ್ಲಿ ತಂತ್ರಜ್ಞಾನವನ್ನು ಉಪಯೋಗಿಸಿ ಹೆಚ್ಚಿನ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಾಗುವುದು ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವದ ಕಾರ್ಯದರ್ಶಿ ಕಿಶೋರ್ ಕುಮಾರ್, ವಸಂತ್ ಹೋಬಳಿದಾರ್, ಶ್ರೀಕಾಂತ್, ಮಂಜುನಾಥ ಕದಂ, ವೀಣಾ ಕಿಶೋರ್, ಬಿಂದು ವಿಜಯ ಕುಮಾರ್, ಚಂದ್ರಶೇಖರಯ್ಯ, ಫ್ರೊ. ಧನಂಜಯ್, ಡಾ. ಅರುಣ್, ಡಾ. ಪರಮೇಶ್ವರ್ ಶಿಗ್ಗಾಂವ್, ಆದಿಮೂರ್ತಿ ಹಾಗೂ ಇತರೆ ಎಲ್ಲ ರೋಟರಿ ಸದಸ್ಯರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!