ರಸ್ತೆ ಸುರಕ್ಷತೆ ನಿಯಮಗಳ ಪಾಲನೆ ಅತ್ಯಂತ ಮುಖ್ಯ

ರಸ್ತೆ ಸುರಕ್ಷತೆ ನಿಯಮಗಳ ಪಾಲನೆ ಅತ್ಯಂತ ಮುಖ್ಯ

ಶಿವಮೊಗ್ಗ | 3 ಆಗಸ್ಟ್‌ 2023 | ಡಿಜಿ ಮಲೆನಾಡು.ಕಾಂ

ರಸ್ತೆ ಸುರಕ್ಷಿತ ನಿಯಮಗಳನ್ನು ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲಿಸಬೇಕು. ಇದರಿಂದ ರಸ್ತೆ ಅಪಘಾತಗಳನ್ನು ತಪ್ಪಿಸಬಹುದು. ವಿದ್ಯಾರ್ಥಿಗಳು ಪಾಲಕರಿಗೆ ನಿಯಮಗಳ ಬಗ್ಗೆ ತಿಳುವಳಿಕೆ ಮೂಡಿಸಬೇಕು ಎಂದು ಡಾ. ಬಿ.ಸುರೇಶ್‌ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ ರೋಟರಿ ಪೂರ್ವ ಶಾಲೆಯಲ್ಲಿ ರೋಟರಿ ಶಿವಮೊಗ್ಗ ಪೂರ್ವ, ಐಎಂಎ ಹಾಗೂ ಆರ್ಥೋಪೆಡಿಕ್ ಅಸೋಸಿಯೇಷನ್ ಸಹಯೋಗದಲ್ಲಿ ಆಯೋಜಿಸಿದ್ದ ರಸ್ತೆ ಸುರಕ್ಷತೆ ಜಾಗೃತಿ, ಸಿಪಿಆರ್ ಪ್ರಥಮ ಚಿಕಿತ್ಸೆ ಜಾಗೃತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಕಾನೂನಿನ ನಿಯಮದಂತೆ ವಾಹನ ಚಲಾವಣೆ ಮತ್ತು ಅರ್ಹತೆ ನಂತರ ವಾಹನ ಚಲಾಯಿಸಬೇಕು ಎಂದು ತಿಳಿಸಿದರು.

Click on below this picture, Like & Follow Facebook Page ” Digi Malenadu “

ವಿದ್ಯಾರ್ಥಿಗಳು ಬಾಲ್ಯದಿಂದಲೇ ಉತ್ತಮ ಪೌಷ್ಟಿಕಾಂಶವುಳ್ಳ ಆಹಾರ ಸೇವನೆ ಮಾಡಬೇಕು.  ಪ್ರತಿ ದಿನ ಯೋಗ, ವ್ಯಾಯಾಮ ಅಭ್ಯಾಸ ಮಾಡಬೇಕು. ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತಿ ಅವಶ್ಯಕ. ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಆದ್ಯತೆ ನೀಡಬೇಕು ಎಂದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಎಲ್ಲ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಹಾಗೂ ಅರಿವು ಕಾರ್ಯಕ್ರಮ ಮಾಡಲು ಯೋಜನೆ ರೂಪಿಸಿದೆ. ವಿದ್ಯಾರ್ಥಿಗಳು ಪೋಷಕರಿಗೆ ಸಂಚಾರಿ ನಿಯಮಗಳ ಪಾಲನೆ ಮಹತ್ವ ತಿಳಿಸಬೇಕು ಎಂದರು.

ಸಂಚಾರ ನಿಯಮಗಳ ಬಗ್ಗೆ ಹಾಗೂ ಅಪಘಾತವಾದಾಗ ಪ್ರಥಮ ಚಿಕಿತ್ಸೆ ಹೇಗೆ ಕೊಡಬೇಕೆಂದು ಪಿಪಿಟಿ ಮುಖಾಂತರ ವಿಡಿಯೋ ತೋರಿಸಿದರು. ರಸ್ತೆ ಅಪಘಾತದಲ್ಲಿ ಯಾರಾದರೂ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರೆ ಅವರಿಗೆ ಪ್ರಥಮ ಚಿಕಿತ್ಸೆ ಹೇಗೆ ನೀಡುವುದು ಹಾಗೂ ಹೃದಯಬಡಿತ ಸರಿಪಡಿಸುವುದರ ಕುರಿತು ಸಿಪಿಆರ್ ಮುಖಾಂತರ ಹೇಗೆ ಮಾಡಬೇಕೆಂದು ವಿವರಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ರೋಟರಿ ಶಿವಮೊಗ್ಗ ಪೂರ್ವ ಆಂಗ್ಲ ಶಾಲೆಯ ಉಪಾಧ್ಯಕ್ಷ ಡಾ. ಪರಮೇಶ್ವರ್ ಶಿಗ್ಗಾವ್,  ಐಎಂಎ ಶಿವಮೊಗ್ಗ ಅಧ್ಯಕ್ಷ ಡಾ. ಅರುಣ್, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕಿಶೋರ್ ಕುಮಾರ್, ಶಾಲೆಯ ಖಜಾಂಚಿ ಜಿ.ವಿಜಯ್ ಕುಮಾರ್, ಶಾಲೆಯ ಕಾರ್ಯದರ್ಶಿ ರಾಮಚಂದ್ರ ಎಸ್ ಸಿ, ಜಂಟಿ ಕಾರ್ಯದರ್ಶಿ ನಾಗವೇಣಿ, ರೋಟರಿ ಸದಸ್ಯರಾದ ಮಂಜುನಾಥ್ ಕದಂ, ಪ್ರಜ್ವಲ್ ಸುರೇಂದ್ರ ಕೋಟ್ಯಾನ್, ಶಾರದಾ ಶೇಷಗಿರಿ ಗೌಡ, ದಿವ್ಯ ಪ್ರವೀಣ್ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!