ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರ‍್ಯಾಕ್ಟ್ ಕ್ಲಬ್ ಮಹತ್ತರ ಪಾತ್ರ

ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರ‍್ಯಾಕ್ಟ್ ಕ್ಲಬ್ ಮಹತ್ತರ ಪಾತ್ರ

ಶಿವಮೊಗ್ಗ | 6 ಆಗಸ್ಟ್‌ 2023 | ಡಿಜಿ ಮಲೆನಾಡು.ಕಾಂ

ಮಕ್ಕಳಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುವಲ್ಲಿ, ಬೌದ್ಧಿಕ ಶಕ್ತಿ ಹಾಗೂ ಸಾಂಸ್ಕೃತಿಕ ಆಸಕ್ತಿ ಬೆಳೆಸುವಲ್ಲಿ ಇಂಟರ‍್ಯಾಕ್ಟ್ ಕ್ಲಬ್ ಸಹಕಾರಿಯಾಗುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ಸತೀಶ್ ಚಂದ್ರ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ರಾಜೇಂದ್ರ ನಗರದ ರೊಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಇಂಟರ‍್ಯಾಕ್ಟ್ ಕ್ಲಬ್ ಪದಗ್ರಹಣ, ಪ್ರತಿಭಾ ಪುರಸ್ಕಾರ, ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ನಾಯಕತ್ವ ಗುಣ ಹಾಗೂ ಸೇವಾ ಮನೋಭಾವನೆ ಬೆಳೆಸುವಲ್ಲಿ ಇಂಟರ‍್ಯಾಕ್ಟ್ ಕ್ಲಬ್ ಸಹಕಾರಿ ಆಗಿದೆ ಎಂದು ತಿಳಿಸಿದರು.

Click on below this picture, Like & Follow Facebook Page ” Digi Malenadu “

ರೋಟರಿ ವಲಯ 11ರ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ಇಂಟರ‍್ಯಾಕ್ಟ್ ಕ್ಲಬ್‌ಗಳಲ್ಲಿ ಭಾಗವಹಿಸುವುದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶ ವಿದೇಶದ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲು ವೇದಿಕೆ ದೊರಕುತ್ತದೆ. ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಹೆಚ್ಚಿನ ಅವಕಾಶಗಳು ದೊರೆಯುತ್ತವೆ ಎಂದು ಹೇಳಿದರು.

ಹೈಸ್ಕೂಲ್ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಡಿಕ್ಷನರಿ ಹಾಗೂ ನಗದು ಬಹುಮಾನ, ಲೇಖನಗಳನ್ನು ನೀಡಲಾಯಿತು. ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.

ಇಂಟರ‍್ಯಾಕ್ಟ್ ಕ್ಲಬ್ ನೂತನ ಅಧ್ಯಕ್ಷ ಹರ್ಷಿತ್, ಕಾರ್ಯದರ್ಶಿ ಗಾನವಿ ಅವರು ಪದಾಧಿಕಾರಿಗಳೊಂದಿಗೆ ಅಧಿಕಾರ ಸ್ವೀಕರಿಸಿದರು. ಅಬ್ದುಲ್ ಕಲಾಂ ಸ್ಪೇಸ್ ಕ್ಲಬ್ ಜಿಲ್ಲಾ ಘಟಕದ ಚೇರ‍್ಮನ್ ಡಾ. ಪರಮೇಶ್ವರ್ ಶಿಗ್ಗಾವ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕಿಶೋರ್ ಡಿ., ನಾಗವೇಣಿ, ಪ್ರಾಚಾರ್ಯ ಸೂರ್ಯನಾರಾಯಣ, ಮಾಜಿ ಅಧ್ಯಕ್ಷ ಗಣೇಶ್, ಪ್ರಜ್ವಲ್, ನರಸಿಂಹಯ್ಯ, ಸುಷ್ಮಾ ಎಲ್ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!