ಜೆ ಎನ್ ಎನ್ ಸಿ ಇ ಕಾಲೇಜಿನಲ್ಲಿ ವಿಶ್ವ ಜೈವಿಕ ಇಂಧನ ದಿನಾಚರಣೆ
ಶಿವಮೊಗ್ಗ | 10 ಆಗಸ್ಟ್ 2023 | ಡಿಜಿ ಮಲೆನಾಡು.ಕಾಂ
ಪರಿಸರಕ್ಕೆ ಪೂರಕವಾದ ನವೀಕರಿಸಬಹುದಾದ ಇಂಧನಗಳ ಬಳಕೆ ಹೆಚ್ಚಾಗಬೇಕು. ಪರಿಸರ ಸಂರಕ್ಷಣೆಯು ನಮ್ಮೆಲ್ಲರ ಪ್ರಮುಖ ಆದ್ಯತೆ ಆಗಬೇಕು ಎಂದು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಟಿ.ಎ.ರತ್ನಪ್ರಭಾ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ನಗರದ ಜೆ ಎನ್ ಎನ್ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ, ಜೈವಿಕ ಇಂಧನ ಅಭಿವೃದ್ಧಿ ಜಿಲ್ಲಾ ಉಸ್ತುವಾರಿ ಸಮಿತಿ, ಜಿಲ್ಲಾ ಜೈವಿಕ ಇಂಧನ ಸಂಶೋಧನಾ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಜೈವಿಕ ಇಂಧನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
Click on below this picture, Like & Follow Facebook Page ” Digi Malenadu “
ಪರಿಸರ ತಜ್ಞ ಡಾ. ಎಲ್.ಕೆ.ಶ್ರೀಪತಿ ಮಾತನಾಡಿ, ನಮಗೆ ಶುದ್ಧ ಗಾಳಿ ನೀರು ನೀಡುವ ಹಸಿರಿನ ಶಕ್ತಿಗಾಗಿ ಜೈವಿಕ ಇಂಧನದ ಬಳಕೆ ಹೆಚ್ಚಾಗಬೇಕು. ಮಳೆ ದುರ್ಬಲಗೊಳ್ಳುವುದರ ಮೂಲಕ ದೈನಂದಿನ ಜೀವನದ ಮೇಲೆ ಅತಿಯಾದ ಪರಿಣಾಮ ಬೀರಿದೆ. 200 ವರ್ಷಗಳ ಹವಾಮಾನದ ದಾಖಲೆ ನೋಡಿದಾಗ ಅತಿ ಹೆಚ್ಚು ಬಿಸಿಲು ಇತ್ತೀಚಿನ ಇಪತ್ತು ವರ್ಷಗಳಲ್ಲಿ ಉಂಟಾಗಿದೆ ಎಂದು ತಿಳಿಸಿದರು.
ಇಲೆಕ್ಟ್ರಿಕಲ್ ವಿಭಾದ ಮುಖ್ಯಸ್ಥ ಡಾ. ಹೆಚ್.ಬಿ.ಸುರೇಶ್ ಮಾತನಾಡಿ, ಶಿವಮೊಗ್ಗ ಜಿಲ್ಲಾ ಜೈವಿಕ ಇಂಧನ ಪ್ರಾತ್ಯಕ್ಷತೆ ಹಾಗೂ ಮಾಹಿತಿ ಕೇಂದ್ರವು ಹತ್ತು ವರ್ಷಗಳಲ್ಲಿ ಹೊಂಗೆ ಬೀಜಗಳು ಹಾಗೂ ಕರಿದ ಎಣ್ಣೆಗಳಿಂದ ಇಪ್ಪತ್ತು ಸಾವಿರಕ್ಕೂ ಹೆಚ್ಚು ಜೈವಿಕ ಇಂಧನ ಉತ್ಪಾದಿಸಲಾಗಿದೆ ಎಂದು ಹೇಳಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಜೆ ಎನ್ ಎನ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಪಿ.ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು. ಶಿವಮೊಗ್ಗ ಜಿಲ್ಲಾ ಜೈವಿಕ ಇಂಧನ ಪ್ರಾತ್ಯಕ್ಷತೆ ಹಾಗೂ ಮಾಹಿತಿ ಕೇಂದ್ರದ ಸಂಚಾಲಕ ಚೇತನ್.ಎಸ್.ಜೆ, ಡಾ. ರವಿಕುಮಾರ್.ಬಿ.ಎಸ್, ಲೋಕೇಶ್ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/