ಶಿವಮೊಗ್ಗದಲ್ಲಿ ಮೆಕ್ಕೆಜೋಳ ಸಂಶೋಧನಾ ಕೇಂದ್ರ ತೆರೆಯಲು ಕೇಂದ್ರ ಸಚಿವರಿಗೆ ಬಿ.ವೈ.ರಾಘವೇಂದ್ರ ಮನವಿ

ಶಿವಮೊಗ್ಗದಲ್ಲಿ ಮೆಕ್ಕೆಜೋಳ ಸಂಶೋಧನಾ ಕೇಂದ್ರ ತೆರೆಯಲು ಕೇಂದ್ರ ಸಚಿವರಿಗೆ ಬಿ.ವೈ.ರಾಘವೇಂದ್ರ ಮನವಿ

ಶಿವಮೊಗ್ಗ | 11 ಆಗಸ್ಟ್‌ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಪ್ರಧಾನ ಬೆಳೆ ಮೆಕ್ಕೆಜೋಳದ ಸಂಶೋಧನಾ ಕೇಂದ್ರ ಸ್ಥಾಪಿಸಲು ಅಗತ್ಯವಾದ ಆರ್ಥಿಕ ನೆರವು ಮಂಜೂರು ಮಾಡುವಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಶಿವಮೊಗ್ಗ  ಲೋಕಸಭೆ ಸದಸ್ಯ ಬಿ ವೈ ರಾಘವೇಂದ್ರ ಮನವಿ ಮಾಡಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ವಿಷಯ ಪ್ರಸ್ತಾಪಿಸಿದ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಮೆಕ್ಕೆಜೋಳ ಬೆಳೆ ಪ್ರದೇಶ ರಾಜ್ಯದಲ್ಲಿ ಹೆಚ್ಚುತ್ತಿದ್ದರೂ ಇಳುವರಿ ಮಾತ್ರ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಇದೆ. ಈ ಕೇಂದ್ರ ಇಳುವರಿ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

Click on below this picture, Like & Follow Facebook Page ” Digi Malenadu “

ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ (ಐಸಿಎಆರ್) ಮೆಕ್ಕೆ ಜೋಳ ಸಂಶೋಧನಾ ಕೇಂದ್ರಕ್ಕೆ ಸ್ಥಳ ಪರಿಶೀಲನೆ ನಡೆಸಿದ್ದು, ಶಿವಮೊಗ್ಗದಲ್ಲಿ  ಐಸಿಎಆರ್ ಐಐಎಂಆರ್ ನ ಮೆಕ್ಕೆಜೋಳ ಪ್ರಾದೇಶಿಕ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲು ಶಿಫಾರಸು ಮಾಡಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮೆಕ್ಕೆಜೋಳ ಸಂಶೋಧನಾ ಕೇಂದ್ರಕ್ಕೆ ಪೂರಕ ಎಲ್ಲ ಅಂಶಗಳು ಶಿವಮೊಗ್ಗದಲ್ಲಿ ಇರುವುದನ್ನು ಪರಿಗಣಿಸಿ  ಸ್ಥಳ ಆಯ್ಕೆ  ಸಮಿತಿಯು ಶಿವಮೊಗ್ಗಕ್ಕೆ  ಕೇಂದ್ರವನ್ನು ಶಿಫಾರಸು ಮಾಡಿದೆ. ಮುಂದಿನ ಅಗತ್ಯ ಕ್ರಮಕ್ಕಾಗಿ ಎಸ್‌ಎಸ್‌ಸಿ ವರದಿಯನ್ನು ಐಸಿಎಆರ್‌ಗೆ  ಸಲ್ಲಿಸಲಾಗಿದೆ. ಇದಕ್ಕೆ ಐದು ಕೋಟಿ ಅನುದಾನ ನಿರೀಕ್ಷಿಸಲಾಗುತ್ತಿದೆ.

ಮೆಕ್ಕೆಜೋಳದ ಪ್ರಾದೇಶಿಕ ಕೇಂದ್ರವು ದೇಶದಲ್ಲಿ ಮೆಕ್ಕೆಜೋಳದ ಉತ್ಪಾದನೆಯಲ್ಲಿ ನವೀನ ಸಂಶೋಧನೆ ಮೂಲಕ ಸುಧಾರಣೆಯನ್ನು ತ್ವರಿತಗೊಳಿಸಲು ಅಗತ್ಯವಾಗಿದೆ.  ದೇಶದ ಇಂಧನ  ಬೇಡಿಕೆಯನ್ನು ಸರಿದೂಗಿಸಲು  ಪೆಟ್ರೋಲ್‌ನೊಂದಿಗೆ ಎಥೆನಾಲ್‌ನ ಶೇ. 20 ಮಿಶ್ರಣವನ್ನು ಸಾಧ್ಯವಾಗಿಸಲು  ಮೆಕ್ಕೆಜೋಳ ಉತ್ಪಾದನೆ ಹೆಚ್ಚಿಸುವುದು ಅಗತ್ಯವಾಗಿದೆ ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಕರ್ನಾಟಕವು ದೇಶದಲ್ಲೇ ಅತಿ ಹೆಚ್ಚು ಮೆಕ್ಕೆಜೋಳ ಬೆಳೆಯುವ  ಪ್ರದೇಶ ಹೊಂದಿರುವ ರಾಜ್ಯವಾಗಿದೆ. ದೇಶದ ಮೆಕ್ಕೆಜೋಳ ಉತ್ಪಾದನೆಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ  ರಾಜ್ಯದ ಮೆಕ್ಕೆಜೋಳದ ಇಳುವರಿ ರಾಷ್ಟ್ರೀಯ ಸರಾಸರಿಗೆ ಹೋಲಿಸಿದರೆ ಕಡಿಮೆಯಾಗಿದೆ.

ಶಿವಮೊಗ್ಗದಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆಯು ರಾಜ್ಯದ ಸರಾಸರಿ  ಇಳುವರಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ರಾಜ್ಯದ ರೈತರಿಗೆ  ದೊಡ್ಡ ಮಟ್ಟದಲ್ಲಿ  ಪ್ರಯೋಜನವಾಗಲಿದೆ.  ದೇಶದ ಇತರ ಭಾಗಗಳ ರೈತರಿಗೂ ಕೂಡಾ ತನ್ನ ಸಂಶೋಧನೆಯ ಮೂಲಕ ನೆರವಾಗಲಿದೆ. ಕೇಂದ್ರ ಸ್ಥಾಪನೆಗೆ ಅಗತ್ಯವಾದ ಅನುದಾನವನ್ನು ಮಂಜೂರು ಮಾಡಲು ಸಂಸದರು ವಿತ್ತ ಸಚಿವರಿಗೆ ಮನವಿ ಮಾಡಿದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!