ಜನ್ಮದಿನದ ಸಂಭ್ರಮದಲ್ಲಿ ಯುವ ನಾಯಕ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ

ಜನ್ಮದಿನದ ಸಂಭ್ರಮದಲ್ಲಿ ಯುವ ನಾಯಕ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ

ಶಿವಮೊಗ್ಗ | 16 ಆಗಸ್ಟ್‌ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿದ ಯುವ ನಾಯಕ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರಿಗೆ 50ನೇ ಜನ್ಮದಿನದ ಸಂಭ್ರಮ. ಪುರಸಭೆ ಸದಸ್ಯ ಸ್ಥಾನದಿಂದ ಲೋಕಸಭೆ ಪ್ರವೇಶಿಸುವವರೆಗೂ ನಡೆದು ಬಂದ ಹಾದಿಯೇ ಅಮೋಘ ಸಾಧನೆಯಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಜನಪ್ರತಿನಿಧಿಯಾಗಿ ಒಂದು ದಶಕಕ್ಕೂ ಅಧಿಕ ಅವಧಿ ಸೇವೆ ಸಲ್ಲಿಸಿರುವ ಬಿ.ವೈ. ರಾಘವೇಂದ್ರ ಅವರು ಪ್ರತಿ ಹಂತದಲ್ಲಿಯೂ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಶ್ರಮಿಸಿದ್ದಾರೆ. ಶಿವಮೊಗ್ಗ ಜಿಲ್ಲೆಗೆ ಅವಶ್ಯವಿರುವ ಎಲ್ಲ ಯೋಜನೆಗಳನ್ನು ತರುವಲ್ಲಿ ಸಂಪೂರ್ಣ ಪ್ರಯತ್ನ ನಡೆಸಿದ್ದಾರೆ. ರಾಜ್ಯ, ಕೇಂದ್ರ ಸರ್ಕಾರಗಳಿಂದ ತರಬಲ್ಲ ಎಲ್ಲ ಅನುದಾನಗಳನ್ನು ತರುವ ಮೂಲಕ ಅಭಿವೃದ್ಧಿ ಹರಿಕಾರರಾಗಿದ್ದಾರೆ.

Click on below this picture, Like & Follow Facebook Page ” Digi Malenadu “

ಶಿಕಾರಿಪುರ ಶಾಸಕರಾಗಿದ್ದ ಅವಧಿ ಹಾಗೂ ಶಿವಮೊಗ್ಗ ಲೋಕಸಭೆ ಸದಸ್ಯರಾಗಿದ್ದ ಅವಧಿಯಲ್ಲೂ ಸದಾ ಶಿವಮೊಗ್ಗ ಜಿಲ್ಲೆಗೆ ಅಭಿವೃದ್ಧಿಗೆ ಆಲೋಚನೆ ನಡೆಸುವ ರಾಘವೇಂದ್ರ ಅವರು ಐವತ್ತನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ರಸ್ತೆ ಸಂಪರ್ಕ, ರೈಲ್ವೇ, ಆರೋಗ್ಯ, ವಿಮಾನ, ಕೃಷಿ, ಕೈಗಾರಿಕೆ, ಉದ್ಯಮ ಸೇರಿದಂತೆ ಪ್ರತಿಯೊಂದು ಕ್ಷೇತ್ರದ ಅಭಿವೃದ್ಧಿಗೂ ಯೋಜನೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಶಿವಮೊಗ್ಗ-ತಾಳಗುಪ್ಪ ಬ್ರಾಡ್‌ಗೇಜ್‌ ಪರಿವರ್ತನೆ, ಶಿವಮೊಗ್ಗ ಬೆಂಗಳೂರು ಜನಶತಾಬ್ಧಿ ರೈಲು, ಇಂಟರ್‌ಸಿಟಿ, ಬೀರೂರು ಶಿವಮೊಗ್ಗ ಡಬ್ಲಿಂಗ್‌ ಸರ್ವೇ, ಶಿಕಾರಿಪುರ ರಾಣೆಬೆನ್ನೂರು ಹೊಸ ಮಾರ್ಗ ಸಮೀಕ್ಷೆ, ಶಿವಮೊಗ್ಗ ಭದ್ರಾವತಿ ಸೇರಿದಂತೆ ರೈಲ್ವೇ ನಿಲ್ದಾಣಗಳ ಆಧುನೀಕರಣ ಸೇರಿದಂತೆ ರೈಲ್ವೇ ಕ್ಷೇತ್ರದಲ್ಲಿ ಶಿವಮೊಗ್ಗಕ್ಕೆ ಸಂಬಂಧಿಸಿ ಯೋಜನೆಗಳನ್ನು ತಂದಿದ್ದಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಇಎಸ್‌ಐ ಆಸ್ಪತ್ರೆ ನಿರ್ಮಾಣ, ವಿಮಾನ ಸೇವೆ ಆರಂಭ, ಟವರ್‌ ಸಮಸ್ಯೆ ಪರಿಹಾರಕ್ಕೆ ಕ್ರಮ, ಕೇಂದ್ರಿಯ ವಿದ್ಯಾಲಯ, ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಶ್ರಮ, ಜೋಗ ಅಭಿವೃದ್ಧಿ, ಉಡುತಡಿ ಅಭಿವೃದ್ಧಿ, ಪ್ರವಾಸಿ ತಾಣಗಳ ಅಭಿವೃದ್ಧಿ, ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಕ್ರಮ, ನೀರಾವರಿ ಯೋಜನೆಗಳಿಂದ ಪ್ರಾಮುಖ್ಯತೆ, ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಕ್ರಮ ಸೇರಿದಂತೆ ಶಿವಮೊಗ್ಗ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಲು ಶ್ರಮಿಸಿದ್ದಾರೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಮಂಜೂರಾತಿಗೆ ವಿಶೇಷವಾಗಿ ಶ್ರಮಿಸಿದ್ದಾರೆ. ಅಭಿವೃದ್ಧಿಯ ಜತೆಯಲ್ಲಿ ಜನರ ಮನಸ್ಸನನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!