ದೇಶಿಯ ವಿದ್ಯಾಶಾಲಾ ಸಮಿತಿಯಿಂದ ಸ್ವಾತಂತ್ರ್ಯ ದಿನಾಚರಣೆ

ದೇಶಿಯ ವಿದ್ಯಾಶಾಲಾ ಸಮಿತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಶಿವಮೊಗ್ಗ | 16 ಆಗಸ್ಟ್‌ 2023 | ಡಿಜಿ ಮಲೆನಾಡು.ಕಾಂ

ಭಾರತ ದೇಶಕ್ಕೆ ಸ್ವಾತಂತ್ರ್ಯ ಸಿಗುವಲ್ಲಿ ಅಸಂಖ್ಯಾತ ರಾಷ್ಟ್ರ ಭಕ್ತರ ಕೊಡುಗೆ ಅಪಾರ ಇದ್ದು, ಲಕ್ಷಾಂತರ ದೇಶಭಕ್ತರ ತ್ಯಾಗ ಬಲಿದಾನದಿಂದ ಭಾರತ ದೇಶ ಸ್ವಾತಂತ್ರ್ಯವಾಯಿತು ಎಂದು ಹಿರಿಯ ಉಪನ್ಯಾಸಕ ಸಿ.ಮಂಜುನಾಥ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ದೇಶಿಯ ವಿದ್ಯಾಶಾಲಾ ಸಮಿತಿ ವತಿಯಿಂದ ಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ 77ನೇ ಸ್ವಾತಂತ್ರ್ಯ ಮಹೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಮಹಾತ್ಮ ಗಾಂಧೀಜಿ ಸೇರಿದಂತೆ ಸಾವಿರಾರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದ ನಾಯಕರು ತಮ್ಮದೇ ಆದ ಮಾರ್ಗಗಳಲ್ಲಿ ಹೋರಾಟ ನಡೆಸಿದರು. ಎಲ್ಲರ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿತು ಎಂದು ತಿಳಿಸಿದರು.

Click on below this picture, Like & Follow Facebook Page ” Digi Malenadu “

77ನೇ ಸ್ವಾತಂತ್ರ್ಯ ಮಹೋತ್ಸವ ಸಂಭ್ರಮಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ, ದೇಶದ ಸ್ವಾತಂತ್ರ್ಯಯಕ್ಕಾಗಿ ಜೀವನ ಸಮರ್ಪಿಸಿದ ಹೋರಾಟಗಾರರ ಕೊಡುಗೆ ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ. ಪ್ರತಿಯೊಬ್ಬರು ಸಧೃಢ ಭಾರತ ನಿರ್ಮಾಣದಲ್ಲಿ ಕೈಜೋಡಿಸಬೇಕು. ದೇಶವನ್ನು ರಕ್ಷಣೆ ಮಾಡುತ್ತಿರುವ ಸೈನಿಕರಿಗೆ ಪ್ರತಿಯೊಬ್ಬರೂ ಗೌರವ ಸಲ್ಲಿಸಬೇಕು ಎಂದು ಸಂದೇಶ ತಿಳಿಸಿದರು.

ದೇಶಕ್ಕಾಗಿ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ ರಮೇಶ್ ಎನ್. ಹಾಗೂ ಬಸವರಾಜ ನಾಯ್ಕ ಎಲ್. ಅವರನ್ನು ಗೌರವಿಸಲಾಯಿತು. ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ ಧರಿಸಿದ್ದರು. ಸಭಾ ಕಾರ್ಯಕ್ರಮದ ನಂತರ ದೇಶಭಕ್ತಿ ಗೀತೆಗಳ ಗಾಯನ ಹಾಗೂ ನೃತ್ಯ ಕಾರ್ಯಕ್ರಮ ನಡೆಯಿತು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಡಿವಿಎಸ್ ಮಾಜಿ ಅಧ್ಯಕ್ಷ ಕೆ.ಬಸಪ್ಪಗೌಡ, ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್, ಸಹ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಎ.ಇ.ರಾಜಶೇಖರ್, ಆರ್.ಲಕ್ಷ್ಮೀದೇವಿ, ಹರೀಶ್, ಎನ್‌ಎಸ್‌ಎಸ್, ರೇಂಜರ್ಸ್‌, ರೋವರ್ಸ್‌ ಘಟಕದ ಪ್ರತಿನಿಧಿಗಳು, ಬೋಧಕ ಸಿಬ್ಬಂದಿ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!