ಗೃಹಲಕ್ಷ್ಮಿ ಯೋಜನೆ ಚಾಲನಾ ಕಾರ್ಯಕ್ರಮದ ಸಿದ್ದತೆಗೆ ಶಿವಮೊಗ್ಗ ಜಿಲ್ಲಾಧಿಕಾರಿ ಸೂಚನೆ
ಶಿವಮೊಗ್ಗ | 16 ಆಗಸ್ಟ್ 2023 | ಡಿಜಿ ಮಲೆನಾಡು.ಕಾಂ
ಮಹಿಳೆಯರ ಆರ್ಥಿಕ ಸಬಲೀಕರಣ ಧ್ಯೇಯದೊಂದಿಗೆ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 27 ರಂದು ಬೆಳಗಾವಿಯಲ್ಲಿ ಚಾಲನೆ ನೀಡುತ್ತಿದ್ದು, ಏಕಕಾಲದಲ್ಲಿ ಎಲ್ಲ ಗ್ರಾಮ ಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯಕ್ರಮ ಆಯೋಜಿಸಲು ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅಧಿಕಾರಿಗಳಿಗೆ ಸೂಚಿಸಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ಜಿಲ್ಲಾಡಳಿತ ಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ತಹಶೀಲ್ದಾರ್, ಇಒ, ಸ್ಥಳೀಯ ಸಂಸ್ಥೆ ಮುಖ್ಯಸ್ಥರು, ಸಿಡಿಪಿಒಗಳೊಂದಿಗೆ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Click on below this picture, Like & Follow Facebook Page ” Digi Malenadu “
ಬೆಳಗಾವಿ ಕಾರ್ಯಕ್ರಮದ ನೇರ ಪ್ರಸಾರವನ್ನು ಎಲ್ಲ ಗ್ರಾಮ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳಲ್ಲಿ ಮಾಡಲಾಗುವುದು. ಎಲ್‍ಇಡಿ ಪರದೆ ಅಥವಾ ಒಂದು ಟಿವಿ ವ್ಯವಸ್ಥೆ ಮಾಡಿಕೊಳ್ಳಬೇಕು. ಫಲಾನುಭವಿಗಳು ಮತ್ತು ಸಾರ್ವಜನಿಕರನ್ನು ಕಾರ್ಯಕ್ರಮಕ್ಕೆ ಸೇರಿಸಬೇಕು. ಸರ್ಕಾರಿ ಕಟ್ಟಡಗಳು ಅಥವಾ ಸಭಾ ಭವನದಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಅತಿಥಿಗಳಾಗಿ ಭಾಗವಹಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಜಿಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಮಾತನಾಡಿ, ಜಿಪಂ ಯೋಜನಾ ನಿರ್ದೇಶಕರು ಗ್ರಾಂ ಪಂಚಾಯಿತಿ ವಾರು ಉಸ್ತುವಾರಿ ನೋಡಿಕೊಳ್ಳಬೇಕು. ಹೊಸನಗರ, ತೀರ್ಥಹಳ್ಳಿ, ಸಾಗರ ಗಳಲ್ಲಿ ನೆಟವರ್ಕ್ ಸಮಸ್ಯೆಗಳಿದ್ದರೆ ಸರಿಪಡಿಸಿಕೊಂಡು ಈಗಿನಿಂದಲೇ ಸಿದ್ದತೆ ಆರಂಭಿಸಬೇಕು ಎಂದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ತಹಶೀಲ್ದಾರ್ ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಸಂತೋಷಕುಮಾರ್, ಸಿಡಿಪಿಒ ಚಂದ್ರಪ್ಪ ಹಾಜರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/