ಸಂಚಾರ ನಿಯಮ ಪಾಲಿಸದೇ ಇದ್ದರೆ ದಂಡ, ಶಿವಮೊಗ್ಗ ನಗರದ ವಿವಿಧ ಕಡೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ

ಸಂಚಾರ ನಿಯಮ ಪಾಲಿಸದೇ ಇದ್ದರೆ ದಂಡ, ಶಿವಮೊಗ್ಗ ನಗರದ ವಿವಿಧ ಕಡೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ

ಶಿವಮೊಗ್ಗ | 23 ಆಗಸ್ಟ್‌ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದ ವೃತ್ತಗಳಲ್ಲಿ ಸ್ಮಾರ್ಟ್‌ ಸಿಟಿ ಐಟಿಎಂಎಸ್‌ ಯೋಜನೆಯಡಿ ಸಿಸಿ ಕ್ಯಾಮೆರಾ ಅಳವಡಿಸಿದ್ದು, ಸಂಚಾರ ನಿಯಮಗಳನ್ನು ಉಲ್ಲಂಘಿಸಿದಲ್ಲಿ ವಾಹನ ಸವಾರರಿಗೆ ದಂಡ ಕಟ್ಟುವಂತೆ ನೊಟೀಸ್‌ ಕಳುಹಿಸಲಾಗುತ್ತದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್‌ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ 100ಕ್ಕೂ ಹೆಚ್ಚು ಕಡೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ್ದು, ರಸ್ತೆ ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳಿಗೆ ಆಗಸ್ಟ್‌ 28ರಿಂದ ಸಿಸಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ದಂಡದ ನೊಟೀಸ್‌ ಕಳುಹಿಸಲಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Click on below this picture, Like & Follow Facebook Page ” Digi Malenadu “

ಯಾವ್ಯಾವ ಕಾರಣಗಳಿಗೆ ದಂಡ?: ಅತಿ ವೇಗದ ವಾಹನ ಚಾಲನೆ, ಪೂರ್ಣ ಹೆಲ್ಮೇಟ್‌ ಧರಿಸದೇ ಸಂಚಾರ, ದ್ವಿಚಕ್ರ ವಾಹನದಲ್ಲಿ ಮೂವರ ಪ್ರಯಾಣ, ವಾಹನ ಚಾಲನೆ ವೇಳೆ ಮೊಬೈಲ್‌ ಬಳಕೆ, ಅಜಾಗರೂಕತೆಯಿಂದ ವಾಹನ ಚಾಲನೆ, ಏಕಮುಖ ರಸ್ತೆಯಲ್ಲಿ ವಾಹನ ಚಾಲನೆ, ವಾಹನ ಪ್ರವೇಶ ಇರದ ರಸ್ತೆಯಲ್ಲಿ ಸಂಚಾರ, ನಿಷೇಧಿತ ಸ್ಥಳದಲ್ಲಿ ವಾಹನ ನಿಲುಗಡೆ, ಕಾರ್‌ ಚಲಾಯಿಸುವಾಗ ಸೀಟ್‌ ಬೆಲ್ಟ್‌ ಧರಿಸದೇ ಇರುವುದು ಮುಂತಾದ ಅಂಶಗಳು ಕ್ಯಾಮೆರಾದಲ್ಲಿ ದಾಖಲಾಗುವುದನ್ನು ಆಧರಿಸಿ ದಂಡದ ನೊಟೀಸ್‌ ಕಳುಹಿಸಲಾಗುತ್ತದೆ ಎಂದರು.

ಶಿವಮೂರ್ತಿ ವೃತ್ತ, ಮಹಾವೀರ ವೃತ್ತ, ಶಂಕರಮಠ, ಕರ್ನಾಟಕ ಸಂಘ, ಐಬಿ ವೃತ್ತ, ಲಕ್ಷ್ಮೀ ಟಾಕೀಸ್‌, ಆಲ್ಕೋಳ, ಪೊಲೀಸ್‌ ಚೌಕಿ ಸೇರಿದಂತೆ ವಿವಿಧ ಕಡೆಗಳಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ. ಮಲವಗೊಪ್ಪ ರಸ್ತೆ, ಸವಳಂಗ ರಸ್ತೆ, ಬೈಪಾಸ್‌ ರಸ್ತೆ, ಗುರುಪುರ ರಸ್ತೆ ಸೇರಿದಂತೆ ಅನೇಕ ಕಡೆಗಳಲ್ಲಿ ನೂರಕ್ಕೂ ಅಧಿಕ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಏಕಮುಖ ರಸ್ತೆಯಲ್ಲಿ ಸಂಚಾರ ಸೇರಿದಂತೆ ಸಂಚಾರ ನಿಯಮ ಉಲ್ಲಂಘಿಸಿದ ವಾಹನದ ಸಂಖ್ಯೆ ಆಧರಿಸಿ ಮಾಲೀಕರ ವಾಹನ ದಾಖಲೆಯಲ್ಲಿ ಇರುವ ಮೊಬೈಲ್‌ ಗೆ ಸಂದೇಶ ರವಾನೆಯಾಗಲಿದೆ. ದಂಡ ಪಾವತಿಸುವ ಕುರಿತು ನೋಟೀಸ್‌ನಲ್ಲಿ ಮಾಹಿತಿ ಇರಲಿದೆ ಎಂದು ತಿಳಿಸಿದರು. ಎಎಸ್‌ಪಿ ಅನಿಲ್‌ ಕುಮಾರ್‌ ಭೂಮರೆಡ್ಡಿ, ಟ್ರಾಫಿಕ್‌ ಇನ್ಸ್‌ಪೆಕ್ಟರ್‌ ಸಂತೋಷ್‌, ಡಿವೈಎಸ್‌ಪಿ ಸುರೇಶ್‌, ಸಿಬ್ಬಂದಿ ಸುದ್ದಿಗೋಷ್ಠಿಯಲ್ಲಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!