ಶಿವಮೊಗ್ಗ ನಗರದ ದೇವಂಗಿ ರತ್ನಾಕರ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

ಶಿವಮೊಗ್ಗ ನಗರದ ದೇವಂಗಿ ರತ್ನಾಕರ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

ಶಿವಮೊಗ್ಗ | 28 ಆಗಸ್ಟ್‌ 2023 | ಡಿಜಿ ಮಲೆನಾಡು.ಕಾಂ

ಬೊಮ್ಮನಕಟ್ಟೆ ಮಾರ್ಗದಲ್ಲಿರುವ ದೇವಂಗಿ ರತ್ನಾಕರ ಬಡಾವಣೆಯಲ್ಲಿ ಇರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆಗಸ್ಟ್‌ 31 ರಿಂದ ಸೆಪ್ಟೆಂಬರ್‌ 2ರ ವರೆಗೆ ಶ್ರೀ ರಾಘವೇಂದ್ರ ತೀರ್ಥ ಗುರು ಸಾರ್ವಭೌಮರ 352ನೇ ಆರಾಧನಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “

ದೇವಂಗಿ ರತ್ನಾಕರ ಬಡಾವಣೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮೊದಲ ಬಾರಿ ಆರಾಧನಾ ಮಹೋತ್ಸವ ನಡೆಯುತ್ತಿದ್ದು, ಭಕ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಆಗಸ್ಟ್‌ 30ರ ಸಂಜೆ 6ಕ್ಕೆ ಗೋಪೂಜೆ, ಧ್ವಜಾರೋಹಣ, ಧನ, ಧಾನ್ಯ ಪೂಜೆ, ಲಕ್ಷ್ಮೀ ಪೂಜೆ, ಸ್ವಸ್ತಿ ವಾಚನ, ಮಹಾಮಂಗಳಾರತಿ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿವಿಧ ಧಾರ್ಮಿಕ ಪೂಜೆಯೊಂದಿಗೆ ಆಗಸ್ಟ್‌ 31 ರಂದು ಪೂರ್ವಾರಾಧನೆ, ಸೆಪ್ಟೆಂಬರ್‌ 1 ರಂದು ಮಧ್ಯಾರಾಧನೆ, ಸೆಪ್ಟೆಂಬರ್‌ 2 ರಂದು ಉತ್ತರಾಧನೆ ನಡೆಯಲಿದ್ದು, ಆರಾಧನೆ ಪ್ರಯುಕ್ತ ಪ್ರತಿ ದಿನ ಸಂಜೆ 6 ರಿಂದ ಭಜನೆ, ವೀಣಾ ವಾದನ ಮತ್ತು ಪ್ರವಚನ ಇರಲಿದೆ. ಪಲ್ಲಕ್ಕಿ ಸೇವೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಪ್ರಮುಖರಾದ ಧಿರೇಂದ್ರ ಆಚಾರ್‌, ಟಿ.ಆರ್.ಅಶ್ವತ್ಥ್‌ ನಾರಾಯಣ ಶೆಟ್ಟಿ, ಮಧುಸೂದನ್‌, ಸುಧೀಂದ್ರ, ಕುಬೇರಪ್ಪ, ಪ್ರಶಾಂತ್‌, ಕೆ.ವಿ.ಅಣ್ಣಪ್ಪ, ಶೇಷಗಿರಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!