ಐಐಎಫ್ ರಾಷ್ಟ್ರೀಯ ಅಧ್ಯಕ್ಷರಾಗಿ ಶಿವಮೊಗ್ಗದ ಡಿ.ಎಸ್.ಚಂದ್ರಶೇಖರ್ ಅಧಿಕಾರ ಸ್ವೀಕಾರ ಸೆಪ್ಟೆಂಬರ್ 9ಕ್ಕೆ
ಶಿವಮೊಗ್ಗ | 7 ಸೆಪ್ಟೆಂಬರ್ 2023 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗದ ಕಿಮ್ಮನೆ ಗಾಲ್ಫ್ ರೆಸಾರ್ಟ್‌ನಲ್ಲಿ ಸೆಪ್ಟೆಂಬರ್ 9ರಂದು ಸಂಜೆ 6ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ ರಾಷ್ಟ್ರೀಯ ಅಧ್ಯಕ್ಷರಾಗಿ ಶಿವಮೊಗ್ಗದ ಶಾಂತಾಲಾ ಸ್ಪೆರೋಕಾಸ್ಟ್ ಸಂಸ್ಥೆಯ ಉಪಾಧ್ಯಕ್ಷ ಡಿ.ಎಸ್.ಚಂದ್ರಶೇಖರ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಐಐಎಫ್ ಶಿವಮೊಗ್ಗ ಘಟಕದ ಅಧ್ಯಕ್ಷ ಟಿ.ಎನ್.ಪರಮಶೇಖರ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಐಐಎಫ್ ಸಂಸ್ಥೆಯು ದೇಶದಲ್ಲಿ 26 ಘಟಕಗಳನ್ನು ಹೊಂದಿದ್ದು, ಕೊಲ್ಕತ್ತಾದಲ್ಲಿ ರಾಷ್ಟ್ರೀಯ ಮಟ್ಟದ ಕೇಂದ್ರ ಕಚೇರಿ ಹೊಂದಿದೆ. ಭಾರತದಲ್ಲಿ ಫೌಂಡ್ರಿಮೆನ್ ಶಿಕ್ಷಣ, ಸಂಶೋಧನೆ, ತರಬೇತಿ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸಲು 1950ರಿಂದ ಕಾರ್ಯ ನಿರ್ವಹಿಸುತ್ತಿದೆ. ಶಿವಮೊಗ್ಗ ಘಟಕವು 10 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Click on below this picture, Like & Follow Facebook Page ” Digi Malenadu “
ನಿಯೋಜಿತ ಐಐಎಫ್ ರಾಷ್ಟ್ರೀಯ ಅಧ್ಯಕ್ಷ ಡಿ.ಎಸ್.ಚಂದ್ರಶೇಖರ್ ಮಾತನಾಡಿ, ಫೌಂಡ್ರಿ ಕ್ಷೇತ್ರಕ್ಕೆ ಶಿವಮೊಗ್ಗ ಜಿಲ್ಲೆಯ ಕೊಡುಗೆ ಹೆಚ್ಚಿದ್ದು, ದೇಶ ವಿದೇಶಗಳಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ತಯಾರಾಗುವ ಫೌಂಡ್ರಿ ಉತ್ಪನ್ನಗಳು ರಫ್ತಾಗುತ್ತಿವೆ. ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಅವಕಾಶ ಸಿಕ್ಕಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಫೌಂಡ್ರಿ ಉದ್ಯಮ ವಿಸ್ತಾರಕ್ಕೆ ಎಲ್ಲ ರೀತಿ ಪ್ರಯತ್ನ ನಡೆಸಲಾಗುವುದು ಎಂದು ತಿಳಿಸಿದರು.
ಐಐಎಫ್ ಸರ್ವ ಸದಸ್ಯರ ಸಭೆಯಲ್ಲಿ ನವನೀತ್ ಅಗರ್‌ವಾಲ್ ಉಪಾಧ್ಯಕ್ಷರಾಗಿ, ಮುತ್ತುಕುಮಾರ್.ಎಸ್. ಗೌರವ ಕಾರ್ಯದರ್ಶಿಯಾಗಿ, ಸುಶೀಲ್ ಶರ್ಮಾ ಖಜಾಂಚಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ದೇಶದ 15 ರಾಜ್ಯಗಳ 400-500 ಫೌಂಡ್ರಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಐಐಎಫ್ ಶಿವಮೊಗ್ಗ ಘಟಕದ ಮಾಜಿ ಅಧ್ಯಕ್ಷ ಶ್ರೀನಾಥ್ ಗಿರಿಮಾಜಿ, ಸ್ಥಾಪಕ ಅಧ್ಯಕ್ಷ ದಾಮೋದರ ಬಾಳಿಗ, ದಕ್ಷಿಣ ವಲಯ ಉಪಾಧ್ಯಕ್ಷ ಡಿ.ಜಿ.ಬೆನಕಪ್ಪ, ರಾಘವೇಂದ್ರ ಹೆಬ್ಬಾರ್, ಸುರೇಶ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/