ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಸೆಪ್ಟೆಂಬರ್ 15ಕ್ಕೆ
ಶಿವಮೊಗ್ಗ | 11 ಸೆಪ್ಟೆಂಬರ್ 2023 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ನಗರದ ಸೈನ್ಸ್ ಮೈದಾನದಲ್ಲಿ ಸೆಪ್ಟೆಂಬರ್ 15ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಿದ್ದು, 50ಕ್ಕೂ ಹೆಚ್ಚಿನ ಕಂಪನಿಗಳು ಫಾಲ್ಗೊಳ್ಳಲಿವೆ. 5 ಸಾವಿರಕ್ಕೂ ಅಧಿಕ ಉದ್ಯೋಗ ನೇಮಕಾತಿ ಅವಕಾಶ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Click on below this picture, Like & Follow Facebook Page ” Digi Malenadu “
ಎಸ್ ಎಸ್ ಎಲ್ ಸಿ ಉತ್ತೀರ್ಣ, ಅನುತ್ತೀರ್ಣ ಆದವರು, ಐಟಿಐ, ಡಿಪ್ಲೋಮಾ ಸೇರಿ ಎಲ್ಲ ರೀತಿಯ ಉನ್ನತ ಶಿಕ್ಷಣ, ತರಬೇತಿ ಪಡೆದ ಯುವಕರು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದೆ. ಆನ್‌ಲೈನ್ ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದು. ಮೇಳ ನಡೆಯುವ ದಿನದಂದು ಆಕಾಂಕ್ಷಿಗಳು ಸ್ಥಳದಲ್ಲಿಯೇ ಹೆಸರು ನೋಂದಾಯಿಸಿ ಭಾಗವಹಿಸಲು ಅವಕಾಶ ಇದೆ ಎಂದರು.
ಸಾಫ್ಟ್‌ವೇರ್, ಆಟೋ ಮೊಬೈಲ್, ಫೌಂಡ್ರಿ, ರಿಟೇಲ್ ಫಾರ್ಮಸಿ, ಹಣಕಾಸು ವಿಮೆ, ಗಾರ್ಮೆಂಟ್ಸ್ ಸೇರಿ 50ಕ್ಕೂ ಹೆಚ್ಚಿನ ಸ್ಥಳೀಯ ಮತ್ತು ರಾಜ್ಯ ಮಟ್ಟದ ಬೃಹತ್ ಕಂಪನಿಗಳು ಭಾಗವಹಿಸಲಿವೆ. ಸ್ವಯಂ ಉದ್ಯೋಗ ಆಸಕ್ತರಿಗೆ ಬ್ಯಾಂಕ್ ಸಾಲ ಸೌಲಭ್ಯ ಮಾಹಿತಿ ಒದಗಿಸಲು ಅವಕಾಶ ಕಲ್ಪಿಸಲಾಗಿದೆ.
ಕೌಶಲ್ಯಾಭಿವೃದ್ಧಿ ಇಲಾಖೆಯ ನಿರ್ದೇಶಕ ಡಾ. ನಾಗೇಂದ್ರ ಎಫ್.ಹೊನ್ನಳ್ಳಿ ಮಾತನಾಡಿ, ಅತ್ಯಂತ ಕಡಿಮೆ ಶುಲ್ಕದಲ್ಲಿ ಅತ್ಯಾಧುನಿಕ ರೀತಿಯ ಎಲೆಕ್ಟ್ರಿಕ್ ವೆಹಿಕಲ್ ಮತ್ತು ರೋಬೋಟಿಕ್ ವಿಷಯಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ 70,000 ಮಕ್ಕಳು ಐಟಿಐ ಮತ್ತು ಡಿಪ್ಲೋಮಾ ತರಬೇತಿಗೆ ದಾಖಲಾಗಿದ್ದಾರೆ. ತರಬೇತಿ ಪಡೆದ ವಿದ್ಯಾರ್ಥಿಗಳು ಪಡೆದುಕೊಳ್ಳುವ ಪ್ರಮಾಣ ಪತ್ರಕ್ಕೆ ದೇಶ ವಿದೇಶಗಳಲ್ಲಿ ಮಾನ್ಯತೆ ದೊರೆಯಲಿದೆ ಎಂದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಆಸಕ್ತ ಯುವಜನರು ವಿವರಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಚೇರಿ ಹಾಗೂ ಸರ್ಕಾರಿ ಐಟಿಐ ಕಚೇರಿ ಸಂಪರ್ಕಿಸಬಹುದಾಗಿದೆ. ಮಾಹಿತಿಗೆ ಮೊ.ನಂ. 8457825088, 9880005425, 08182-25593, 255294 ಸಂಪರ್ಕಿಸಬಹುದಾಗಿದೆ ಎಂದರು.
ಜಿಲ್ಲಾ ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಅಧಿಕಾರಿ ಖಲಂದರ್ ಖಾನ್ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/