ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸೆಪ್ಟೆಂಬರ್ 15ಕ್ಕೆ ಇಂಜಿನಿಯರ್ ದಿನಾಚರಣೆ
ಶಿವಮೊಗ್ಗ | 12 ಸೆಪ್ಟೆಂಬರ್ 2023 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೇರೋಕಾಸ್ಟ್ ಸಭಾಂಗಣದಲ್ಲಿ ಸೆಪ್ಟೆಂಬರ್ 15ರಂದು ಬೆಳಗ್ಗೆ 10.30ಕ್ಕೆ ಇಂಜಿನಿಯರ್ ದಿನ ಮತ್ತು ಭಾರತರತ್ನ ಡಾ. ಸರ್.ಎಂ.ವಿಶ್ವೇಶ್ವರಯ್ಯ ಜನ್ಮದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಇಂಜಿನಿಯರ್ ದಿನಾಚರಣೆಯನ್ನು ಸೆಪ್ಟೆಂಬರ್ 15ರ ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಉದ್ಘಾಟಿಸುವರು. ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ ರಾಷ್ಟ್ರೀಯ ಅಧ್ಯಕ್ಷ ಡಿ.ಎಸ್.ಚಂದ್ರಶೇಖರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Click on below this picture, Like & Follow Facebook Page ” Digi Malenadu “
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ್ ಹೋಬಳಿದಾರ್ ಮಾತನಾಡಿ, ಹಾರ್ನಳ್ಳಿ ಕೆ.ಮಂಜಪ್ಪ & ಕೋ ಸಂಸ್ಥೆಯ ಎಚ್.ಎಂ.ಲೀಲಾಮೂರ್ತಿ ಅವರಿಗೆ ವಿಶೇಷ ಗೌರವಾರ್ಪಣೆ, ವಿಜಯ್ ಟೆಕ್ನೋಕ್ರ್ಯಾಟ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಿ.ಜಿ.ಬೆನಕಪ್ಪ ಅವರಿಗೆ ವಿಶೇಷ ಸನ್ಮಾನ ಮಾಡಲಾಗುವುದು ಎಂದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಖಜಾಂಚಿ ಎಂ.ರಾಜು ಮಾತನಾಡಿ, ಪ್ರಣವ್ ಪ್ಯಾಕೆಜಿಂಗ್, ಶಿವಾಜಿ ಆಗ್ರೋ ಕಾಂಪೋನೆಂಟ್ಸ್ ಮತ್ತು ಎನ್.ಎನ್.ಇಂಜಿನಿಯರಿಂಗ್ ಸಂಸ್ಥೆಗಳಿಗೆ 2023ನೇ ಸಾಲಿನ ಕೈಗಾರಿಕಾ ಪ್ರಶಸ್ತಿ ಪುರಸ್ಕಾರ ನೀಡಲಾಗುತ್ತಿದೆ. ಪ್ರಾರ್ಥನಾ ಇಂಜಿನಿಯರಿಂಗ್ ಸೂಪರ್ವೈಸರ್ ಕೆ.ವೇದನಾಥನ್, ವೋಲ್ ಮ್ಯಾಕ್ ಕಾಂಪೋನೆಂಟ್ಸ್ ಸಂಸ್ಥೆಯ ಸಿ.ವಿರೇಂದ್ರ ಅವರಿಗೆ ಅತ್ತ್ಯುತ್ತಮ ಕಾರ್ಮಿಕ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತಿದೆ ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಬಿ.ಗೋಪಿನಾಥ್, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ನಿರ್ದೇಶಕ ಬಿ.ಆರ್.ಸಂತೋಷ್, ಪ್ರದೀಪ್ ವಿ.ಯಲಿ, ಇ.ಪರಮೇಶ್ವರ್, ಮಾಜಿ ಅಧ್ಯಕ್ಷ ಟಿ.ಆರ್.ಅಶ್ವತ್ಥ್ ನಾರಾಯಣ ಶೆಟ್ಟಿ, ಡಿ.ಎಂ.ಶಂಕರಪ್ಪ ಸುದ್ದಿಗೋಷ್ಠಿಯಲ್ಲಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/