ಸೆಪ್ಟೆಂಬರ್ 26ರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಪ್ರಾರಂಭ

ಶಿವಮೊಗ್ಗ | 22 ಸೆಪ್ಟೆಂಬರ್ 2023 | ಡಿಜಿ ಮಲೆನಾಡು.ಕಾಂ
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಶಿವಮೊಗ್ಗ ಜಿಲ್ಲೆಯಲ್ಲಿ 26-09-2023 ರಿಂದ 25-10-2023 ವರೆಗೆ 4ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದೆ. 3 ತಿಂಗಳ ಮೇಲ್ಪಟ್ಟ ಎಲ್ಲ ದನ, ಎಮ್ಮೆ ಮತ್ತು ಕರುಗಳಿಗೆ ಲಸಿಕೆ ನೀಡಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
Click on below this picture, Like & Follow Facebook Page ” Digi Malenadu “
ರೈತರಿಗೆ ಆರ್ಥಿಕ ಸಂಕಷ್ಟ ತಂದೊಡ್ಡುವ ಕಾಲುಬಾಯಿ ರೋಗ ನಿಯಂತ್ರಿಸಿ, ನಿರ್ಮೂಲನೆ ಮಾಡಲು ಪ್ರತಿ 6 ತಿಂಗಳಿಗೊಮ್ಮೆ ರೋಗದ ವಿರುದ್ದ ಲಸಿಕೆ ಹಾಕಿಸುವುದು ಕಡ್ಡಾಯವಾಗಿರುತ್ತದೆ. ಲಸಿಕೆದಾರರು ನಿಮ್ಮ ಗ್ರಾಮಕ್ಕೆ, ಮನೆ ಬಾಗಿಲಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕಿಸುವಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾದ ಕಾಲುಬಾಯಿ ರೋಗವನ್ನು ತಡೆಯಲು ದನ, ಎಮ್ಮೆ ಮತ್ತು ಕರುಗಳಿಗೆ ಕಡ್ಡಾಯವಾಗಿ ಕಾಲುಬಾಯಿ ರೋಗ ಲಸಿಕೆ ಹಾಕಿಸಬೇಕು. ಹೆಚ್ಚಿನ ಮಾಹಿತಿಗೆ ಸಮೀಪದ ಪಶುಪಾಲನಾ ಸಮೀಪ ಇಲಾಖೆ ಸಂಪರ್ಕಿಸಬಹುದಾಗಿದೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಶಿವಮೊಗ್ಗ ಜಿಲ್ಲೆಯಲ್ಲಿ 26-09-2023 ರಿಂದ 25-10-2023 ವರೆಗೆ 4ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 1586 ಗ್ರಾಮಗಳಿದ್ದು, 4ನೇ ಸುತ್ತಿನ ಲಸಿಕಾ ಕಾರ್ಯಕ್ರಮಕ್ಕೆ 639250 ಡೋಸ್ ಲಸಿಕೆ ನೀಡಲಾಗಿದೆ. ಒಟ್ಟು 653573 ಸಿರಿಂಜ್‍ಗಳು ಲಭ್ಯವಿದೆ. 3 ತಿಂಗಳ ಮೇಲ್ಪಟ್ಟ ಎಲ್ಲ ದನ, ಎಮ್ಮೆ ಮತ್ತು ಕರುಗಳಿಗೆ ಲಸಿಕೆ ಹಾಕಿಸಬೇಕು ಎಂದು ಪಶುಪಾಲನಾ ಮತ್ತು ಪಶುಸೇವಾ ಇಲಾಖೆಯ ಉಪನಿರ್ದೇಶಕ ಡಾ. ಶಿವಯೋಗಿ ತಿಳಿಸಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/