ತಂತ್ರಜ್ಞಾನದ ಪರಿಣಾಮಕಾರಿ ಬಳಕೆ ಅತ್ಯಂತ ಮುಖ್ಯ

ತಂತ್ರಜ್ಞಾನದ ಪರಿಣಾಮಕಾರಿ ಬಳಕೆ ಅತ್ಯಂತ ಮುಖ್ಯ

ಶಿವಮೊಗ್ಗ | 25 ಸೆಪ್ಟೆಂಬರ್ 2023 | ಡಿಜಿ ಮಲೆನಾಡು.ಕಾಂ

ತಂತ್ರಜ್ಞಾನದ ಮೂಲ ನೀತಿ ತತ್ವಗಳನ್ನು ಅರಿತು ಸಮಾಜದ ಪ್ರಗತಿಗೆ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ಲೇಸ್ಮೆಂಟ್ ಸೆಲ್‌ ವತಿಯಿಂದ ಹನಿವೆಲ್ ಕಂಪನಿ‌ ಮತ್ತು ಭಾರತ ಸರ್ಕಾರದ ಐಸಿಟಿ ಅಕಾಡೆಮಿ ಸಹಯೋಗದಲ್ಲಿ ನೂತನವಾಗಿ ಸ್ಥಾಪಿಸಿರುವ ಸೆಂಟರ್ ಫಾರ್ ಎಕ್ಸಲೆನ್ಸ್ ಪ್ರಾಂಗಣ ಹಾಗೂ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸೈಬರ್ ಸೆಕ್ಯುರಿಟಿ ಕುರಿತ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಸೈಬರ್ ಕ್ಷೇತ್ರ ಸದಾ ಒಂದಿಲ್ಲೊಂದು ಭದ್ರತಾ ಸವಾಲುಗಳನ್ನು ಎದುರಿಸುತ್ತಿದ್ದು, ಯುವ ಸಮೂಹ ಅಂತಹ ಸವಾಲುಗಳನ್ನು ಪರಿಹರಿಸುವತ್ತ ಯೋಚಿಸಬೇಕಿದೆ. ತಾಂತ್ರಿಕ ಜ್ಞಾನದ ಜೊತೆಗೆ ಭಾರತ ಸರ್ಕಾರ ನೂತನವಾಗಿ ಅನುಷ್ಠಾನಗೊಳಿಸಿರುವ ಸೈಬರ್ ಭದ್ರತಾ ನಿಯಮಾವಳಿಗಳನ್ನು, ಕಾನೂನಿತ್ಮಾಕ ವಿಚಾರಗಳನ್ನು ಅರಿಯಬೇಕು ಎಂದು ತಿಳಿಸಿದರು.

ಐಸಿಟಿ ಅಕಾಡೆಮಿಯ ಕರ್ನಾಟಕ ರಾಜ್ಯ ಮುಖ್ಯಸ್ಥ ವಿಷ್ಣುಪ್ರಸಾದ್ ಮಾತನಾಡಿ, ಸೈಬರ್ ಸೆಕ್ಯುರಿಟಿ ವಿಷಯ ಸಂಬಂಧಿತ ಅಧ್ಯಯನದಿಂದ ಅನೇಕ ಉದ್ಯೋಗವಕಾಶ ಪಡೆಯಲು ಸಾಧ್ಯವಾಗಲಿದೆ. ನಿರ್ದಿಷ್ಟ ತಾಂತ್ರಿಕ ವಿಷಯಾನುಸಾರ ಅಧ್ಯಯನ, ಉತ್ತಮ ಕೌಶಲ್ಯತೆ ಮತ್ತು ಜ್ಞಾನ ಹೊಂದಿದವರು ಎಂದಿಗೂ‌ ಇಂತಹ ಏರಿಳಿತಗಳ ಬಗ್ಗೆ ಆತಂಕ ಪಡಬೇಕಾಗಿಲ್ಲ ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಕಾರ್ಯಕ್ರಮದಲ್ಲಿ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಪಿ.ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ಲೇಸ್ಮೆಂಟ್ ಅಧಿಕಾರಿ ಜಿ.ಸುರೇಶ್, ಐಸಿಟಿ ಅಕಾಡೆಮಿ ಸಂವಹನಾಧಿಕಾರಿ ಜಕಾವುಲ್ಲ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!