ಸರ್ಕಾರಿ ಶಾಲೆಗಳಿಗೆ ಸಂಘ ಸಂಸ್ಥೆಗಳ ನೆರವು ಅಗತ್ಯ
ಶಿವಮೊಗ್ಗ | 29 ಸೆಪ್ಟೆಂಬರ್ 2023 | ಡಿಜಿ ಮಲೆನಾಡು.ಕಾಂ
ಗ್ರಾಮಾಂತರ ಪ್ರದೇಶ ಸೇರಿದಂತೆ ಶಾಲೆಗಳಿಗೆ ಸರ್ಕಾರದ ಅನುದಾನ ಇದ್ದರೂ ಕೆಲ ಮೂಲ ಸೌಕರ್ಯಗಳಿಂದ ವಂಚಿತ ಆಗಿರುತ್ತವೆ. ಸರ್ಕಾರಿ ಶಾಲೆಗಳಿಗೆ ಅಗತ್ಯವಿರುವ ಮೂಲ ಸೌಕರ್ಯ ಒದಗಿಸಲು ಸಂಘ ಸಂಸ್ಥೆಗಳು ಮುಂದಾಗಬೇಕು ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ನಿದಿಗೆಯ ಜನತಾ ಕಾಲನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಪಯುಕ್ತ ಆಗುವ ಆಶಯದಿಂದ ಶುದ್ಧ ಕುಡಿಯುವ ನೀರಿನ ಘಟಕ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
Click on below this picture, Like & Follow Facebook Page ” Digi Malenadu “
ಕುಡಿಯುವ ನೀರು ಸರಿ ಇಲ್ಲದಿದ್ದರೆ ಆರೋಗ್ಯ ಸಮಸ್ಯೆಗಳು ಕಾಣಿಸುತ್ತವೆ. ಇದರಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕಲುಷಿತ ನೀರಿನ ಸೇವನೆಯಿಂದ ಅನಾರೋಗ್ಯ ಕಾಣಿಸಿಕೊಂಡ ಪ್ರಕರಣಗಳು ಅನೇಕ ಕಡೆ ನಡೆದಿವೆ. ರೋಟರಿ ಸಂಸ್ಥೆಯು ಮಕ್ಕಳಿಗೆ ಶುದ್ಧ ಕುಡಿಯುವ ನೀರು ಲಭ್ಯವಾಗಲು ಘಟಕ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್ಕುಮಾರ್ ಮಾತನಾಡಿ, ರೋಟರಿ ಸಂಸ್ಥೆಯು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಹೆಚ್ಚಿನ ಸೇವೆ ಸಲ್ಲಿಸುತ್ತಿದೆ. ಸರ್ಕಾರಿ ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ಮೂಲ ಸೌಕರ್ಯ ಒದಗಿಸುವ ಕೆಲಸ ಮಾಡುತ್ತಿರುವುದು ಅಭಿನಂದನೀಯ ಎಂದು ಹೇಳಿದರು.
ಪ್ರತಿಭಾವಂತ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಅಧ್ಯಯನ ನಡೆಸುತ್ತಿದ್ದು, ಸೂಕ್ತ ಪ್ರೋತ್ಸಾಹ ಹಾಗೂ ಮೂಲ ಸೌಕರ್ಯದ ಲಭ್ಯತೆ ಇದ್ದರೆ ಅನುಕೂಲವಾಗುತ್ತದೆ. ಮಕ್ಕಳು ಉತ್ತಮ ಸಾಧನೆ ಮಾಡಲು ಸಹಕಾರಿ ಆಗುತ್ತದೆ. ದಾನಿಗಳು ಒದಗಿಸುವ ಸೌಕರ್ಯಗಳನ್ನು ಮಕ್ಕಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಇದೇ ಸಂದರ್ಭದಲ್ಲಿ ಶಾಲೆ ಮುಖ್ಯ ಶಿಕ್ಷಕಿ ತುಳಸಿ ಅಡಿಗ ಅವರು ದೇಣಿಗೆ ನೀಡಿದ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಗೆ ಅಭಿನಂದನೆ ಸಲ್ಲಿಸಿದರು. ಶಿಕ್ಷಕಿ ಸೋಮಿಬಾಯಿ, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕಿಶೋರ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/