ಅಕ್ಟೋಬರ್ 15ರಿಂದ 24ರವರೆಗೆ ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ

ಅಕ್ಟೋಬರ್ 15ರಿಂದ 24ರವರೆಗೆ ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ

ಶಿವಮೊಗ್ಗ | 13 ಅಕ್ಟೋಬರ್ 2023 | ಡಿಜಿ ಮಲೆನಾಡು.ಕಾಂ

ಮಹಾನಗರ ಪಾಲಿಕೆ ವತಿಯಿಂದ ಅದ್ಧೂರಿಯಾಗಿ ನಾಡಹಬ್ಬ ದಸರಾ ಆಚರಿಸಲು ಸಕಲ ರೀತಿಯಲ್ಲಿ ಸಿದ್ಧತೆ ನಡೆಸಿಕೊಂಡಿದ್ದು, ಅಕ್ಟೋಬರ್‌ 15ರಿಂದ 24ರವರೆಗೆ ಶಿವಮೊಗ್ಗ ನಗರಾದ್ಯಂತ ಸಂಭ್ರಮದ ದಸರಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮೇಯರ್‌ ಎಸ್.ಶಿವಕುಮಾರ್‌ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಕೋಟೆ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವಮೂರ್ತಿ ಪ್ರತಿಷ್ಠಾಪನೆ ಜತೆಯಲ್ಲಿ ನವರಾತ್ರಿ ಪ್ರಯುಕ್ತ ಭಜನಾ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭಾರತೀಯ ಶಾಸ್ತ್ರೀಯ ನೃತ್ಯಗಾರ್ತಿ ವೈಜಯಂತಿ ಕಾಶಿ ಅಕ್ಟೋಬರ್‌ 15ರ ಬೆಳಗ್ಗೆ 11ಕ್ಕೆ ಶಿವಮೊಗ್ಗ ದಸರಾ ಮಹೋತ್ಸವವನ್ನು ಉದ್ಘಾಟಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Click on below this picture, Like & Follow Facebook Page ” Digi Malenadu “

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಚಿವ ಡಿ.ಸುಧಾಕರ್‌, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್‌.ಚನ್ನಬಸಪ್ಪ, ಎಸ್‌,ರುದ್ರೇಗೌಡ, ಡಿ.ಎಸ್.ಅರುಣ್‌, ಸ್ಥಳೀಯ ಜನಪ್ರತಿನಿಧಿಗಳು, ಪಾಲಿಕೆ ಸದಸ್ಯರು, ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿರುವರು ಎಂದರು.

ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ದಸರಾ ಸಂಭ್ರಮ ಆಚರಣೆಗೆ 14 ಸಮಿತಿಗಳನ್ನು ಮಾಡಿಕೊಂಡಿದ್ದು, ವೈಭವದ ಮೆರವಣಿಗೆ ಅಕ್ಟೋಬರ್‌ 24ರಂದು ಮಧ್ಯಾಹ್ನ 2.30ಕ್ಕೆ ಆರಂಭಗೊಳ್ಳಲಿದೆ. ಬೆಳ್ಳಿಮಂಟಪದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಬೆಳ್ಳಿ ವಿಗ್ರಹದ ಅಂಬಾರಿ ಮೆರವಣಿಗೆ ನಡೆಯಲಿದ್ದು, ದೇವಾನುದೇವತೆಗಳೊಂದಿಗೆ ಶಿವಪ್ಪನಾಯಕ ಅರಮನೆ ಆವರಣದಿಂದ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟನೆಗೊಳ್ಳಲಿದೆ ಎಂದು ಹೇಳಿದರು.

ಮೇಯರ್‌ ಶಿವಕುಮಾರ್‌ ಮೆರವಣಿಗೆಗೆ ಚಾಲನೆ ನೀಡುವರು. ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಎಸ್‌ಪಿ ಜಿ.ಕೆ.ಮಿಥುನ್‌ಕುಮಾರ್‌, ಪಾಲಿಕೆ ಆಯುಕ್ತ ಮಾಯಣ್ಣಗೌಡ, ಪಾಲಿಕೆ ವಿವಿಧ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿರುವರು. ವಿವಿಧ ಕಲಾತಂಡಗಳು ಪಾಲ್ಗೊಳ್ಳಲಿವೆ. 1.5 ಕೋಟಿ ರೂ. ಅನುದಾನಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಮೆರವಣಿಗೆಯಲ್ಲಿ ಸಾಗರ ಆನೆಯು ಅಂಬಾರಿ ಹೊತ್ತು ಸಾಗಲಿದ್ದು, ನೇತ್ರಾವತಿ ಹಾಗೂ ಹೇಮಾವತಿ ಆನೆಗಳು ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿವೆ. ನಂದಿ ಧ್ವಜ ಕುಣಿತ, ವೀರಗಾಸೆ, ಚಂಡೆ ಮದ್ದಳೆ, ಯಕ್ಷಗಾನ, ನಗಿಸುವ ಗೊಂಬೆಗಳ ಕುಣಿತ, ಕೀಲುಕುದುರೆ, ಮಹಿಳಾ ಡೊಳ್ಳು ಕುಣಿತ, ಹುಲಿವೇಷ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಇರಲಿದೆ. ತಹಸೀಲ್ದಾರ್‌ ಆರ್.ಪ್ರದೀಪ್‌ ಬನ್ನಿ ಮುಡಿಯುವ ಕಾರ್ಯಕ್ರಮಕ್ಕೆ ಅ. 24ರ ಸಂಜೆ 6.30ಕ್ಕೆ ಚಾಲನೆ ನೀಡಿದ ನಂತರ ಆಕರ್ಷಕ ಪಟಾಕಿ ಸಿಡಿಮದ್ದು ರಾವಣ ದಹನ ಏರ್ಪಡಿಸಲಾಗಿದೆ ಎಂದರು. ಉಪಮೇಯರ್‌ ಲಕ್ಷ್ಮೀ ಶಂಕರನಾಯ್ಕ್‌, ಪಾಲಿಕೆ ಸದಸ್ಯರು ಸುದ್ದಿಗೋಷ್ಠಿಯಲ್ಲಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!