ನಿರಂತರ ಪರಿಶ್ರಮ ಹಾಗೂ ಧೈರ್ಯದಿಂದ ಕಠಿಣ ಸನ್ನಿವೇಶ ನಿಭಾಯಿಸುವ ಸಾಮಾರ್ಥ್ಯ ವೃದ್ಧಿ

ನಿರಂತರ ಪರಿಶ್ರಮ ಹಾಗೂ ಧೈರ್ಯದಿಂದ ಕಠಿಣ ಸನ್ನಿವೇಶ ನಿಭಾಯಿಸುವ ಸಾಮಾರ್ಥ್ಯ ವೃದ್ಧಿ

ಶಿವಮೊಗ್ಗ | 15 ಅಕ್ಟೋಬರ್ 2023 | ಡಿಜಿ ಮಲೆನಾಡು.ಕಾಂ

ಪ್ರಸ್ತುತ ಕಠಿಣ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಆತ್ಮವಿಶ್ವಾಸ ಇದ್ದರೆ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಿದೆ. ಗುರುಗಳ ಮಾರ್ಗದರ್ಶನ ಅತ್ಯಂತ ಮುಖ್ಯ ಎಂದು ಲೆಕ್ಕ ಪರಿಶೋಧಕ ಕಿರಣ್ ಎ ವಸಂತ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ , ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ “ಲೆಕ್ಕ ಪರಿಶೋಧಕ ಕೋರ್ಸ್” ತರಬೇತಿಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಮುಂದಿನ ಭವಿಷ್ಯ ಉತ್ತಮವಾಗಿ ರೂಪಿಸಿಕೊಳ್ಳಬೇಕಾದರೆ ಹಾಗೂ ಯಶಸ್ಸು ಸಾಧಿಸಬೇಕಾದರೆ ನಮ್ಮ ಮನೋಸಾಮಾರ್ಥ್ಯ ಸದೃಢವಾಗಿ ಇರಬೇಕು. ನಿರಂತರ ಪರಿಶ್ರಮ ಹಾಗೂ ಧೈರ್ಯದಿಂದ ಕಠಿಣ ಸನ್ನಿವೇಶಗಳನ್ನು ನಿಭಾಯಿಸಬೇಕು ಎಂದು ತಿಳಿಸಿದರು.

ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ಗುರುಗಳ ಮಾರ್ಗದರ್ಶನ ಹಾಗೂ ಸ್ಪಷ್ಟ ಗುರಿ ಇದ್ದಾಗ ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಉನ್ನತ ಹಂತಕ್ಕೆ ತಲುಪಲು ಸಾಧ್ಯವಿದೆ. ಪದವಿ ಶಿಕ್ಷಣ ಹಂತದಿಂದಲೇ ಸೂಕ್ತ ಮಾರ್ಗದರ್ಶನ ಪಡೆದುಕೊಳ್ಳಬೇಕು ಎಂದರು.

ಲೆಕ್ಕ ಪರಿಶೋಧಕ ವೃತ್ತಿಯು ಅತ್ಯಂತ ಹೆಚ್ಚು ಬೇಡಿಕೆಯಲ್ಲಿರುವ ಉದ್ಯೋಗ ಅವಕಾಶ ಆಗಿದ್ದು, ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆಯುತ್ತಿರುವ ಹಂತದಿಂದಲೇ ಸಿಎ ತರಬೇತಿಗೆ ಪೂರಕವಾಗಿರುವ ಕೌಶಲ್ಯಗಳನ್ನು ವಿದ್ಯಾರ್ಥಿಗಳು ಕಲಿತುಕೊಳ್ಳಲು ಮುಂದಾಗಬೇಕು. ಡಿವಿಎಸ್ ಸಂಸ್ಥೆಯು ಲೆಕ್ಕ ಪರಿಶೋಧಕ ತರಬೇತಿ ನೀಡಲು ವಿಶೇಷ ಕಾರ್ಯಕ್ರಮ ರೂಪಿಸಿದೆ ಎಂದು ಹೇಳಿದರು.

ಲೆಕ್ಕ ಪರಿಶೋಧಕ ನಾಗರಾಜ್ ಮಾತನಾಡಿ, ಸಿಎ ತರಬೇತಿ ಪೂರ್ಣಗೊಳಿಸಿದ ವ್ಯಕ್ತಿಯು ಯಾವುದೇ ಸ್ಥಳದಲ್ಲಿ ಆದರೂ ವೃತ್ತಿ ಜೀವನ ರೂಪಿಸಿಕೊಳ್ಳಬಹುದಾಗಿದೆ. ಸಣ್ಣ ಊರು, ನಗರಗಳಿಂದ ಪ್ರಮುಖ ನಗರಗಳಲ್ಲಿ ಬೇಕಾದರೂ ವೃತ್ತಿ ಆರಂಭಿಸಬಹುದಾಗಿದೆ. ಹೆಚ್ಚು ಹೆಚ್ಚು ಅವಕಾಶಗಳು ಜೀವನದಲ್ಲಿ ಸಿಗುತ್ತವೆ ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ದೇಶಿಯ ವಿದ್ಯಾಶಾಲಾ ಸಮಿತಿ ಜಂಟಿ ಕಾರ್ಯದರ್ಶಿ ಡಾ. ಎ.ಸತೀಶ್‌ಕುಮಾರ್ ಶೆಟ್ಟಿ ಮಾತನಾಡಿ, ಡಿವಿಎಸ್ ಸಂಸ್ಥೆಯು ಶಿಕ್ಷಣದ ಜತೆಯಲ್ಲಿ ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಅವಶ್ಯವಿರುವ ವೃತ್ತಿ ಕೌಶಲ್ಯಗಳನ್ನು ಆರಂಭಿಕ ಹಂತದಿಂದಲೇ ತರಬೇತಿ ಕೊಡಿಸುವ ವಿಶೇಷ ವ್ಯವಸ್ಥೆ ಮಾಡಿಕೊಂಡು ಬರುತ್ತಿದೆ. ಇದರಿಂದ ವಿದ್ಯಾರ್ಥಿಗಳು ಭವಿಷ್ಯ ಉತ್ತಮವಾಗುತ್ತದೆ ಎಂದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಉನ್ನತ ಹಂತಕ್ಕೆ ಏರಲು ಅಗತ್ಯ ಇರುವ ವೃತ್ತಿ ಕೌಶಲ್ಯಗಳ ಕಲಿಕೆಗೆ ಪ್ರಾಮುಖ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಲೆಕ್ಕ ಪರಿಶೋಧಕ ವೃತ್ತಿಯ ಅವಕಾಶಗಳ ಬಗ್ಗೆ ಸಿಎ ಕಿರಣ್ ಎ ವಸಂತ್ ಹಾಗೂ ನಾಗರಾಜ್ ಅವರು ವಿಶೇಷ ಉಪನ್ಯಾಸ ನೀಡಿದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ರುದ್ರೇಶ್ ಸಿ.ಇ., ಉಪನ್ಯಾಸಕ ವರ್ಗ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!