ದೇಶಾದ್ಯಂತ ನನ್ನ ಮಣ್ಣು, ನನ್ನ ದೇಶ ಅಭಿಯಾನ, ಉದ್ಯಾನವನ ನಿರ್ಮಾಣ ಪುಣ್ಯದ ಕೆಲಸ

ದೇಶಾದ್ಯಂತ ನನ್ನ ಮಣ್ಣು, ನನ್ನ ದೇಶ ಅಭಿಯಾನ, ಉದ್ಯಾನವನ ನಿರ್ಮಾಣ ಪುಣ್ಯದ ಕೆಲಸ

ಶಿವಮೊಗ್ಗ | 21 ಅಕ್ಟೋಬರ್ 2023 | ಡಿಜಿ ಮಲೆನಾಡು.ಕಾಂ

ನನ್ನ ಮಣ್ಣು ನನ್ನ ದೇಶ ಅಮೃತ ಕಳಶ ಯಾತ್ರೆಯು ದೇಶದ್ಯಾಂತ ನಡೆಯುತ್ತಿದ್ದು, ಎಲ್ಲ ಹಳ್ಳಿಯ ಮಣ್ಣನ್ನು ಸಂಗ್ರಹಿಸಿ ದೆಹಲಿಯ ಕರ್ತವ್ಯ ಪಥದಲ್ಲಿ ಉದ್ಯಾನವನ ನಿರ್ಮಿಸಲಾಗುವುದು ಎಂದು ಲೋಕಸಭೆ ಸದಸ್ಯ ಬಿ.ವೈ ರಾಘವೇಂದ್ರ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನೆಹರು ಯುವ ಕೇಂದ್ರ, ತಾಲ್ಲೂಕು ಪಂಚಾಯಿತಿ, ಶಿವಮೊಗ್ಗ, ರಾಷ್ಟ್ರೀಯ ಸೇವಾ ಯೋಜನೆ, ಕುವೆಂಪು ವಿಶ್ವವಿದ್ಯಾಲಯ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತೀಯ ಅಂಚೆ ಇಲಾಖೆ, ಕೇಂದ್ರ ಸಂವಹನ ಇಲಾಖೆ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಶಿವಮೊಗ, ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನೆಹರು ಯುವ ಕೇಂದ್ರ, ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ನನ್ನ ಮಣ್ಣು ನನ್ನ ದೇಶ ಅಮೃತ ಕಳಶ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಹಳ್ಳಿ, ಹಳ್ಳಿಗಳಿಂದ ಮಣ್ಣು ಸಂಗ್ರಹಿಸಿ ಉದ್ಯಾನವನ ನಿರ್ಮಿಸುವ   ಪುಣ್ಯದ ಕೆಲಸದಲ್ಲಿ ನಾವೆಲ್ಲರೂ ಕೈ ಜೋಡಿಸೋಣ ಎಂದು ಹೇಳಿ ಎಲ್ಲರಿಗೂ ದಸರಾ ಮತ್ತು ವಿಜಯದಶಮಿ ಹಬ್ಬದ ಶುಭಾಶಯ ತಿಳಿಸಿದರು.

ಮೆರವಣಿಗೆಯು ತಾಲ್ಲೂಕು ಪಂಚಾಯಿತಿ ಕಚೇರಿಯಿಂದ ಹೊರಟು ಡಿ.ಸಿ ಕಚೇರಿ ಮುಂಭಾಗದಿಂದ ಕೋರ್ಟ್ ರಸ್ತೆ ಮೂಲಕ ನೆಹರು ಒಳಾಂಗಣ ಕ್ರೀಡಾಂಗಣಕ್ಕೆ ತಲುಪಿತು. ಇದೇ ಸಂದರ್ಭದಲ್ಲಿ ಎಲ್ಲರೂ  ಪಂಚಪ್ರಾಣ ಪ್ರತಿಜ್ಞೆಯನ್ನು ತೆಗೆದುಕೊಂಡರು.

ಶಿವಮೊಗ್ಗದ 7 ತಾಲ್ಲೂಕಿನ ತಾಲ್ಲೂಕು ಮಟ್ಟದ   ಅಮೃತ ಕಳಶ ಯಾತ್ರೆಯು ಮುಗಿದ ನಂತರ ಕಳಶವನ್ನು ನೆಹರು ಯುವ ಕೇಂದ್ರಕ್ಕೆ ಹಸ್ತಾಂತರ ಮಾಡಲಾಗುತ್ತದೆ.  ನಂತರ ಕಳಶವನ್ನು ರಾಷ್ಟ್ರೀಯ ಯುವ ಕಾರ್ಯಕರ್ತರು ದೆಹಲಿಗೆ ತೆಗೆದುಕೊಂಡು ಹೋಗುತ್ತಾರೆ. ಅಮೃತ ಕಳಶ ಯಾತ್ರೆಯ ರಾಷ್ಟ್ರಮಟ್ಟದ ಕಾರ್ಯಕ್ರಮವನ್ನು ದೆಹಲಿಯಲ್ಲಿ ಅಕ್ಟೋಬರ್ ತಿಂಗಳಿನ ಕೊನೆಯಲ್ಲಿ ಹಮ್ಮಿಕೊಳ್ಳಲಾಗುವುದು. ಈ ಮಣ್ಣಿನಿಂದ ದೆಹಲಿಯಲ್ಲಿ ಅಮೃತ ವಾಟಿಕಾ (ಉದ್ಯಾನವನ) ಮತ್ತು ಆಜಾದಿ ಕಾ ಅಮೃತ ಮಹೋತ್ಸವ ಸ್ಮಾರಕವನ್ನು ಕರ್ತವ್ಯ ಪಥ್, ಇಂಡಿಯಾಗೇಟ್‍ನಲ್ಲಿ ಸ್ಥಾಪಿಸಲಾಗುವುದು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಶಿವಮೊಗ್ಗ ನಗರ ಶಾಸಕ ಎಸ್.ಎನ್‍ಚನ್ನಬಸಪ್ಪ,   ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್., ಜಿ.ಪಂ ಸಿಇಒ ಲೋಕಂಡೆ ಸ್ನೇಹಲ್ ಸುಧಾಕರ್, ತಾ,ಪಂ ಇಓ ಅವಿನಾಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್, ನೆಹರು ಯುವಕೇಂದ್ರದ ಜಿಲಾ ಯುವ ಅಧಿಕಾರಿ ಉಲ್ಲಾಸ್, 1000ಕ್ಕೂ ಹೆಚ್ಚು ಜನರು ಅಮೃತ ಕಳಶ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!