ಪೊಲೀಸ್‌ ಹುತಾತ್ಮರ ದಿನಾಚರಣೆ, ಶಿವಮೊಗ್ಗ ಜಿಲ್ಲಾ ಸಶಸ್ತ್ರ ಪೊಲೀಸ್‌ ಕವಾಯತು ಮೈದಾನದಲ್ಲಿ ಕಾರ್ಯಕ್ರಮ

ಪೊಲೀಸ್‌ ಹುತಾತ್ಮರ ದಿನಾಚರಣೆ, ಶಿವಮೊಗ್ಗ ಜಿಲ್ಲಾ ಸಶಸ್ತ್ರ ಪೊಲೀಸ್‌ ಕವಾಯತು ಮೈದಾನದಲ್ಲಿ ಕಾರ್ಯಕ್ರಮ

ಶಿವಮೊಗ್ಗ | 21 ಅಕ್ಟೋಬರ್ 2023 | ಡಿಜಿ ಮಲೆನಾಡು.ಕಾಂ

ಪೊಲೀಸ್ ಹುತಾತ್ಮರ ದಿನಾಚರಣೆ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ಕರ್ತವ್ಯದಲ್ಲಿ ಹುತಾತ್ಮರಾದ ಪೋಲಿಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಾಗ, ರಾಷ್ಟ್ರ ರಕ್ಷಣೆ ಮಾಡುವಾಗ ಮತ್ತು ಇತರೆ ಕರ್ತವ್ಯ ನಿರತ ಅವಧಿಯಲ್ಲಿ ಪ್ರಾಣ ತ್ಯಾಗ ಮಾಡಿದ ಅಧಿಕಾರಿ ಮತ್ತು ಸಿಬ್ಬಂದಿಗೆ ದೇಶಾದ್ಯಂತ ಪ್ರತಿ ವರ್ಷ ಅಕ್ಟೋಬರ್‌ 21ರಂದು ಗೌರವ ಪೂರ್ವಕವಾಗಿ ಸ್ಮರಿಸಲಾಗುತ್ತದೆ.

Click on below this picture, Like & Follow Facebook Page ” Digi Malenadu “

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಮಾತನಾಡಿ, ಹುತಾತ್ಮ ಯೋಧರ ಸೇವೆಯನ್ನು ಸ್ಮರಿಸಿ, ಸಮಾಜದ ರಕ್ಷಣಾ ಕರ್ತವ್ಯ ಪರಿಪಾಲನೆಯಲ್ಲಿ 1-09-2022 ರಿಂದ 31-08-2023 ರ ಅವಧಿಯಲ್ಲಿ ಭಾರತ ದೇಶದಲ್ಲಿ 189 ಜನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಮೃತಪಟ್ಟಿರುತ್ತಾರೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯದ 16 ಪೊಲೀಸ್ ಅಧಿಕಾರಿ, ಸಿಬ್ಬಂದಿ ಮೃತಪಟ್ಟಿದ್ದು, ಹೆಸರನ್ನು ವಾಚಿಸಿ, ಹುತಾತ್ಮರ ಸ್ಥಂಬಕ್ಕೆ ಹೂ ಗುಚ್ಛವನ್ನು ಅರ್ಪಿಸುವ ಮೂಲಕ ನಮನ ಸಲ್ಲಿಸಲಾಗಿರುತ್ತದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸಿಇಒ ಲೋಖಂಡೆ ಸ್ನೇಹಲ್ ಸುಧಾಕರ್, ಡಿಸಿಎಫ್‌ ಶಿವಶಂಕರ್ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!