ಶಿವಮೊಗ್ಗ ದಸರಾ, ಅಂಬಾರಿ ಮೆರವಣಿಗೆ, ಬನ್ನಿ ಮುಡಿಯುವ ಕಾರ್ಯಕ್ರಮ, ಮಂಗಳವಾರ 24 ಅಕ್ಟೋಬರ್ 2023 ವಿಜಯ ದಶಮಿ ವಿಶೇಷ

ಶಿವಮೊಗ್ಗ ದಸರಾ, ಅಂಬಾರಿ ಮೆರವಣಿಗೆ, ಬನ್ನಿ ಮುಡಿಯುವ ಕಾರ್ಯಕ್ರಮ, ಮಂಗಳವಾರ 24 ಅಕ್ಟೋಬರ್ 2023 ವಿಜಯ ದಶಮಿ ವಿಶೇಷ

ಶಿವಮೊಗ್ಗ | 23 ಅಕ್ಟೋಬರ್ 2023 | ಡಿಜಿ ಮಲೆನಾಡು.ಕಾಂ

ದಸರಾ ಸಂಭ್ರಮದ ವಿಜಯ ದಶಮಿಯಂದು ಶಿವಮೊಗ್ಗ ನಗರದ ಶಿವಪ್ಪ ನಾಯಕ ಅರಮನೆ ಆವರಣದಿಂದ ನಂಧಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಅಕ್ಟೋಬರ್‌ 24ರ ಮಧ್ಯಾಹ್ನ 2.30ಕ್ಕೆ ಅಂಬಾರಿ ಮೆರವಣಿಗೆಗೆ ಮಹಾನಗರ ಪಾಲಿಕೆ ಮೇಯರ್‌ ಶಿವಕುಮಾರ್‌ ಚಾಲನೆ ನೀಡಲಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಬೆಳ್ಳಿ ಮಂಟಪದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಬೆಳ್ಳಿ ವಿಗ್ರಹದ ವೈಭವದ ಅಂಬಾರಿ ಮೆರವಣಿಗೆಯು ಮಂಗಳವಾರ ಮಧ್ಯಾಹ್ನ ಆರಂಭಗೊಳ್ಳಲಿದೆ. ದೇವಾನುದೇವತೆಗಳೊಂದಿಗೆ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯು ಸಾಗಲಿದೆ.

ವಿಶೇಷ ಆಕರ್ಷಣೆ: ಅಲಂಕೃತ ಶ್ರೀ ಚಾಮುಂಡೇಶ್ವರಿ ದೇವಿಯ ಮೆರವಣಿಗೆಯಲ್ಲಿ ಸಾಗರ್‌ ಆನೆಯು ಅಂಬಾರಿಯನ್ನು ಹೊತ್ತು ಸಾಗಲಿದ್ದು, ನೇತ್ರಾವತಿ ಹಾಗೂ ಹೇಮಾವತಿ ಆನೆಯು ಹೆಜ್ಜೆ ಹಾಕಲಿವೆ. ಮಂಗಳವಾದ್ಯ, ನಂದಿ ಧ್ವಜ ಕುಣಿತ, ವೀರಗಾಸೆ, ಚಂಡೆ ಮದ್ದಳೆ, ಯಕ್ಷಗಾನ, ನಗಿಸುವ ಗೊಂಬೆಗಳ ಕುಣಿತ, ಕೀಲುಕುದುರೆ, ದೊಡ್ಡ ಗೊಂಬೆಗಳ ಕುಣಿತ, ಮಹಿಳಾ ಡೊಳ್ಳು ಕುಣಿತ, ಹುಲಿವೇಷ ಕುಣಿತ, ಆರ್ಕೆಸ್ಟ್ರಾ ಹಾಗೂ ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‌ನಲ್ಲಿ ಸಂಜೆ 6.30ಕ್ಕೆ ಬನ್ನಿ ಮುಡಿಯುವ ಕಾರ್ಯಕ್ರಮ ನಡೆಯಲಿದ್ದು, ತಹಸೀಲ್ದಾರ್‌ ಪ್ರದೀಪ್‌ ಆರ್.‌ ಕಾರ್ಯಕ್ರಮ ನೆರವೇರಿಸಿ ಕೊಡಲಿದ್ದಾರೆ. ಬನ್ನಿ ಮುಡಿದ ನಂತರ ಅತ್ಯಾಕಾರ್ಷಕ ಪಟಾಕಿ ಸಿಡಿಮದ್ದು ಪ್ರದರ್ಶನ ನಡೆಯಲಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!