ಶಿವಮೊಗ್ಗ ಜಿಲ್ಲೆಯಲ್ಲಿ ಬಾಲ ಕಾರ್ಮಿಕರ ನಿಯಂತ್ರಣಕ್ಕೆ ಅಗತ್ಯ ಕ್ರಮ, ದೂರುಗಳಿದ್ದಲ್ಲಿ ಸಾರ್ವಜನಿಕ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ

ಶಿವಮೊಗ್ಗ ಜಿಲ್ಲೆಯಲ್ಲಿ ಬಾಲ ಕಾರ್ಮಿಕರ ನಿಯಂತ್ರಣಕ್ಕೆ ಅಗತ್ಯ ಕ್ರಮ, ದೂರುಗಳಿದ್ದಲ್ಲಿ ಸಾರ್ವಜನಿಕ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ

ಶಿವಮೊಗ್ಗ | 27 ಅಕ್ಟೋಬರ್ 2023 | ಡಿಜಿ ಮಲೆನಾಡು.ಕಾಂ

ಶಿಕ್ಷಣ ವಂಚಿತ ಮಕ್ಕಳು ಕಾರ್ಖಾನೆ, ಗ್ಯಾರೇಜ್‌, ಹೋಟೆಲ್ ಸೇರಿದಂತೆ ಇತರೆ ಕೆಲಸ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಅಮೂಲ್ಯವಾದ ಬಾಲ್ಯವನ್ನು ಹಾಳುಮಾಡಿಕೊಳ್ಳುತ್ತಿರುವುದು ಬೇಸರ ಸಂಗತಿ. ಇಂತಹ ಮಕ್ಕಳನ್ನು ಬಾಲಕಾರ್ಮಿಕ ಪದ್ದತಿಯಿಂದ ಮುಕ್ತಗೊಳಿಸಿ, ಶಿಕ್ಷಣದ ಮುಖ್ಯವಾಹಿನಿಗೆ ಕರೆತರಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಶಿವಮೊಗ್ಗ ಜಿಲ್ಲೆಯಲ್ಲಿ ಕೆಲ ವರ್ಷಗಳಲ್ಲಿ ದಾಖಲಾಗಿರುವ ಬಾಲಕಾರ್ಮಿಕರ ಸಂಖ್ಯೆ ಅತೀವ ಕಡಿಮೆಯಾಗಿದೆ. ಬಾಲಕಾರ್ಮಿಕರಿದ್ದಲ್ಲಿ ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಬೇಕು. ಜಿಲ್ಲಾ ಪಂಚಾಯಿತಿ ಸಹಕಾರ ಪಡೆದು, ಪಂಚಾಯಿತಿ ಮಟ್ಟದಲ್ಲಿಯೂ ಬಾಲಕಾರ್ಮಿಕರನ್ನು ಗುರುತಿಸಿ, ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುವವರ ವಿರುದ್ಧ ಮೊಕದ್ದಮೆ ದಾಖಲಿಸಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಸುಮಾ ಅವರಿಗೆ ಸೂಚಿಸಿದರು.

ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಹೊರ ರಾಜ್ಯಗಳಿಂದ ವಲಸೆ ಬಂದಿರುವ ಕಾರ್ಮಿಕರ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ದೂರುಗಳಿವೆ. ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸಕಾಲದಲ್ಲಿ ತಪಾಸಣೆ ನಡೆಸಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಬಾಲ ಕಾರ್ಮಿಕ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ಉಚಿತ ಸಹಾಯವಾಣಿ 1098ಗೆ ಕರೆ ಮಾಡಿ ದೂರು ದಾಖಲಿಸಬೇಕು.

ಶಿಕ್ಷಣ ಇಲಾಖೆಯ ಅಧಿಕಾರಿಗಳು ಕೂಡ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ, ಅನ್ಯ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಹಾಗೂ ಪೋಷಕರ ಮನವೊಲಿಸಿ, ಮಕ್ಕಳನ್ನು ಶಾಲೆಗೆ ಕರೆತರುವಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸಿ, ಅವರ ಚಟುವಟಿಕೆಗಳ ಬಗ್ಗೆ ಗಮನಹರಿಸಬೇಕು ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಬಾಲ್ಯವಿವಾಹ, ಸಾಗಾಣಿಕೆ, ಬಾಲಕಾರ್ಮಿಕರ ಬಗ್ಗೆಯೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುವ ಮಕ್ಕಳ ಸಭೆಗಳಲ್ಲಿ ಸಮಾಲೋಚನೆ ನಡೆಸಬೇಕು. ಗ್ರಾಮಾಂತರ ಪ್ರದೇಶಗಳಲ್ಲಿ ಗೋಡೆ ಬರಹಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಸುಮಾ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸುಜಾತಾ, ಜಿಲ್ಲಾ ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಗಣೇಶ್, ಬಾಲ ಕಾರ್ಮಿಕ ಯೋಜನಾಧಿಕಾರಿ ರಾಘವೇಂದ್ರ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!