ಪ್ರತಿ ವಿದ್ಯಾರ್ಥಿಯು ನಾಯಕತ್ವ ಗುಣ ಬೆಳೆಸಿಕೊಳ್ಳುವುದು ಅಗತ್ಯ

ಪ್ರತಿ ವಿದ್ಯಾರ್ಥಿಯು ನಾಯಕತ್ವ ಗುಣ ಬೆಳೆಸಿಕೊಳ್ಳುವುದು ಅಗತ್ಯ

ಶಿವಮೊಗ್ಗ | 28 ಅಕ್ಟೋಬರ್ 2023 | ಡಿಜಿ ಮಲೆನಾಡು.ಕಾಂ

ವಿದ್ಯಾರ್ಥಿಗಳಲ್ಲಿ ಉತ್ತಮ ನಾಯಕತ್ವ ಗುಣ ಅತ್ಯಂತ ಮುಖ್ಯ ಆಗಿದ್ದು, ಇಂಟರ‍್ಯಾಕ್ಟ್ ಕ್ಲಬ್ ನಾಯಕತ್ವ ಮನೋಭಾವ ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ ಎಂದು ರೋಟರಿ ಜಿಲ್ಲಾ ಗವರ್ನರ್ ಬಿ.ಸಿ.ಗೀತಾ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ ರೋಟರಿ ಪೂರ್ವ ಆಂಗ್ಲ ಮಾಧ್ಯಮ ಶಾಲೆಗೆ ಭೇಟಿ ನೀಡಿ ಇಂಟರ‍್ಯಾಕ್ಟ್ ಕ್ಲಬ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ರೋಟರಿ ಇಂಟರ‍್ಯಾಕ್ಟ್ ಕ್ಲಬ್‌ನಲ್ಲಿ ಪ್ರಾಥಮಿಕ ಶಿಕ್ಷಣ ಹಂತದಿಂದಲೇ ತೊಡಗಿಸಿಕೊಳ್ಳುವುದರಿಂದ ಮುಂದೆ ಉತ್ತಮ ಪ್ರಜೆಗಳಾಗಿ ಹೊರ ಹೊಮ್ಮಲು ಸಾಧ್ಯ. ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವಲ್ಲಿ ಸಹಕಾರಿ ಎಂದು ತಿಳಿಸಿದರು.

Click on below this picture, Like & Follow Facebook Page ” Digi Malenadu “

ರೋಟರಿ ಇಂಟರ‍್ಯಾಕ್ಟ್ ಕ್ಲಬ್ ಪ್ರಪಂಚದಾದ್ಯಂತ ಇದ್ದು, ಪರಸ್ಪರ ಸಂವಹನದ ಮೂಲಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಹಕಾರ, ಸೇವಾ ಮನೋಭಾವನೆಯಯನ್ನು ಬೆಳೆಸಿಕೊಳ್ಳಲು ಕ್ಲಬ್ ಒಂದು ಅತ್ಯುತ್ತಮ ವೇದಿಕೆಯಾಗಲಿದೆ. ಎಲ್ಲಾ ವಿದ್ಯಾರ್ಥಿಗಳು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್‌ಚಂದ್ರ ಮಾತನಾಡಿ, ರೋಟರಿ ಪೂರ್ವ ಶಾಲೆಯ ಇಂಟರ‍್ಯಾಕ್ಟ್ ಕ್ಲಬ್‌ನ ಸದಸ್ಯರೆಲ್ಲರು ಅನೇಕ ಕಾರ್ಯ ಚಟುವಟಿಕೆ ಹಮ್ಮಿಕೊಂಡಿದ್ದು, ರೋಟರಿ ಶಿವಮೊಗ್ಗ ಪೂರ್ವದ ವತಿಯಿಂದ ಈಗಾಗಲೇ 5 ಇಂಟರ‍್ಯಾಕ್ಟ್ ಕ್ಲಬ್ ಸ್ಥಾಪಿಸಲಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನಲ್ ಮತ್ತು ಚಾರಿಟಬಲ್ ಟ್ರಸ್ಟ್ ಉಪಾಧ್ಯಕ್ಷ ಡಾ. ಪರಮೇಶ್ವರ್ ಡಿ. ಶಿಗ್ಗಾಂವ್ ಮಾತನಾಡಿ, ಇಂಟರ‍್ಯಾಕ್ಟ್ ಕ್ಲಬ್ ನಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದರ ಮೂಲಕ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಕಾರ್ಯಚಟುವಟಿಕೆಗಳ ಜೊತೆಗೆ ಉತ್ತಮವಾದ ಫಲಿತಾಂಶ ಬರಲು ಈಗಿನಿಂದಲೇ ಸತತ ಪ್ರಯತ್ನ ನಡೆಸಬೇಕು ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ರೋಟರಿ ಸಹಾಯಕ ಗವರ್ನರ್ ರವಿ ಕೋಟೋಜಿ, ಜೋನ್ ಲೆಫ್ಟಿನೆಂಟ್ ಧಮೇಂದ್ರ ಸಿಂಗ್, ರೋಟರಿ ಶಿವಮೊಗ್ಗ ಪೂರ್ವದ ಕಾರ್ಯದರ್ಶಿ ಕಿಶೋರ್ ಕುಮಾರ್ ಡಿ., ಟ್ರಸ್ಟ್ ಕಾರ್ಯದರ್ಶಿ ರಾಮಚಂದ್ರ ಎಸ್.ಸಿ., ಜಂಟಿ ಕಾರ್ಯದರ್ಶಿ ನಾಗವೇಣಿ ಎಸ್.ಆರ್., ಖಜಾಂಚಿ ವಿಜಯ್ ಕುಮಾರ್ ಜಿ., ಡಾ. ಗುಡದಪ್ಪ ಕಸಬಿ, ಪ್ರಾಚಾರ್ಯ ಸೂರ್ಯನಾರಾಯಣ್ ಆರ್., ಹರ್ಷಿತ್ ಕೋಟ್ಯಾನ್, ವಿಜಯ್ ಕುಮಾರ್, ಮಂಜುನಾಥ್, ರೋಟರಿ ಪೂರ್ವದ ಸದಸ್ಯರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!