ದೇಶಾದ್ಯಂತ ದೀಪಾವಳಿ ಹಬ್ಬದ ವಿಶೇಷ ಆಚರಣೆ

ಶಿವಮೊಗ್ಗ | 19 ನವೆಂಬರ್ 2023 | ಡಿಜಿ ಮಲೆನಾಡು.ಕಾಂ
ಭಾರತ ದೇಶದ ಹಬ್ಬಗಳಲ್ಲಿ ದೀಪಾವಳಿಗೆ ವಿಶೇಷ ಸ್ಥಾನ ಇದ್ದು, ವಿವಿಧ ಭಾಗಗಳಲ್ಲಿ ವೈಶಿಷ್ಟ್ಯಪೂರ್ಣವಾಗಿ ದೀಪಾವಳಿ ಆಚರಣೆ ಮಾಡುತ್ತಾರೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್.ಸುಂದರ ರಾಜ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ದೀಪಾವಳಿ ಹಬ್ಬ ಜ್ಞಾನದ ಬೆಳಕನ್ನು ಬೆಳಗಿಸುವ ಹಬ್ಬ. ಇಡೀ ದೇಶದಲ್ಲಿ ಐದು ದಿನಗಳ ಕಾಲ ಅಚರಿಸುವ ಹಬ್ಬ ಎಂದರೆ ಅದು ದೀಪಾವಳಿ ಎಂದು ತಿಳಿಸಿದರು.
Click on below this picture, Like & Follow Facebook Page ” Digi Malenadu “
ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ಎಲ್ಲ ಹಿಂದೂ ಹಬ್ಬಗಳು ಉತ್ಸಾಹವನ್ನು, ಪ್ರೀತಿ ಆತ್ಮವಿಶ್ವಾಸವನ್ನು ಮೂಡಿಸುತ್ತವೆ. ರೋಟರಿ ಸಂಸ್ಥೆಯಲ್ಲಿ ಸಮಾಜಮುಖಿ ಸೇವೆ ಹಾಗೂ ಸದಸ್ಯರಿಗೆ ಹಮ್ಮಿಕೊಳ್ಳಲಾದ ವಿಶೇಷ ಕಾರ್ಯಕ್ರಮಗಳಲ್ಲಿ ಕುಟುಂಬ ಮಿಲನವು ಒಂದು. ಇದರಿಂದ ನಮ್ಮ ಸ್ನೇಹ ಬಾಂಧವ್ಯ ಗಟ್ಟಿಗೊಳ್ಳುತ್ತದೆ ಎಂದರು.
ದೀಪಾವಳಿ ಪ್ರಯುಕ್ತ ಪಟಾಕಿ ಪ್ರದರ್ಶನ ಮತ್ತು ದಾಂಡಿಯಾ ನೃತ್ಯ ಏರ್ಪಡಿಸಲಾಗಿತ್ತು. ಸೀತಾರತ್ನ ಪ್ರಾರ್ಥಿಸಿದರು. ಸತೀಶ್ ಚಂದ್ರ ಸ್ವಾಗತಿಸಿದರು. ಜಿ.ವಿಜಯಕುಮಾರ್ ಅತಿಥಿಗಳ ಪರಿಚಯ ನಡೆಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ವಸಂತ್ ಹೋಬಳಿದಾರ್, ಮಾಜಿ ಅಧ್ಯಕ್ಷ ಎನ್.ಎಚ್.ಶ್ರೀಕಾಂತ್, ಕೆ ಜಿ ರಾಮಚಂದ್ರ ರಾವ್, ಡಾ. ಪರಮೇಶ್ವರ್ ಶಿಗ್ಗಾವ್, ಎಚ್ ಬಿ ಆದಿಮೂರ್ತಿ, ಇನ್ನರ್ ವೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯ ಕುಮಾರ್, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕಿಶೋರ್ ಕುಮಾರ್, ಅರುಣ್ ದೀಕ್ಷಿತ್ ಹಾಗೂ ರೋಟರಿ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/