ಡಿಜಿಟಲ್ ಗ್ರಂಥಾಲಯ ಶೀಘ್ರದಲ್ಲೇ ಮರು ಪ್ರಾರಂಭ

ಡಿಜಿಟಲ್ ಗ್ರಂಥಾಲಯ ಶೀಘ್ರದಲ್ಲೇ ಮರು ಪ್ರಾರಂಭ

ಶಿವಮೊಗ್ಗ | 21 ನವೆಂಬರ್ 2023 | ಡಿಜಿ ಮಲೆನಾಡು.ಕಾಂ

ಹತ್ತು ವಾರದೊಳಗೆ ಡಿಜಿಟಲ್ ಗ್ರಂಥಾಲಯವನ್ನು ಮರು ಪ್ರಾರಂಭಿಸಲಯ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ, ಜಿಲ್ಲಾ ಉಸ್ತುವರಿ ಸಚಿವ ಎಸ್. ಮಧು ಬಂಗಾರಪ್ಪ  ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಸೊರಬದ ರಂಗ ಮಂದಿರದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯ ಶಿವಮೊಗ್ಗ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಸಮಾರೋಪ ಮತ್ತು ಸಿಬ್ಬಂದಿ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಉಚಿತ ಸದಸ್ಯತ್ವವನ್ನು ಪಡೆದು ಡಿಜಿಟಲ್ ಗ್ರಂಥಾಲಯದ ಮೂಲಕ ಓದುವ ಹವ್ಯಾಸ ಹೆಚ್ಚಿಸಿಕೊಳ್ಳಬಹುದು. ಮೊಬೈಲ್ ಅನ್ನು ಕಲಿಕೆಗಾಗಿ ಸದ್ಬಳಕೆ ಮಾಡಿಕೊಳ್ಳಬಹುದು. 4 ಕೋಟಿ ಜನರು ಡಿಜಿಟಲ್ ಗ್ರಂಥಾಲಯದ ಸದಸ್ಯತ್ವ ಪಡೆದಿದ್ದು, ಶೀಘ್ರದಲ್ಲಿ ಸಕ್ರಿಯ ಗೊಳಿಸಲಾಗುವುದು. ಹೊರದೇಶದವರು ಡಿಜಿಟಲ್ ಗ್ರಂಥಾಲಯದ ಮೂಲಕ ಕನ್ನಡ ಪುಸ್ತಕವನ್ನು ಓದಬಹುದು ಎಂದು ತಿಳಿಸಿದರು.

ದೇಶದಲ್ಲೇ ಅತಿ ಹೆಚ್ಚು ಗ್ರಂಥಾಲಯಗಳನ್ನು ಹೊಂದಿರುವ ರಾಜ್ಯ ನಮ್ಮದು. ನಮ್ಮ ಇಲಾಖೆ ಹೆಚ್ಚು ಸಂಖ್ಯೆಯ ಗ್ರಂಥಾಲಯಗಳನ್ನು ಹೊಂದಿದೆ. ಇಲಾಖಾ ವ್ಯಾಪ್ತಿಯಲ್ಲಿ 7000 ಕ್ಕೂ ಹೆಚ್ಚು ಗ್ರಂಥಾಲಯಗಳಿವೆ ಎಂದರು.

ಇದೇ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ ಗ್ರಂಥಾಲಯದ ಅಧಿಕಾರಿ ಮತ್ತು ಸಿಬ್ಬಂದಿಗೆ ಸಚಿವರು ಪ್ರಶಸ್ತಿ ಪ್ರದಾನ ಮಾಡಿದರು. ಗ್ರಂಥಾಲಯದ ಕೈಪಿಡಿ ಬಿಡುಗಡೆಗೊಳಿಸಲಾಯಿತು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ. ಸತೀಶ್ ಕುಮಾರ ಎಸ್ ಹೊಸಮನಿ, ಗ್ರಂಥಾಲಯ ಇಲಾಖೆಯ ವಿಶ್ರಾಂತ ನಿರ್ದೇಶಕ ಡಾ. ಪಿ.ವೈ ರಾಜೇಂದ್ರ ಕುಮಾರ್, ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿ ನಿಕಟಪೂರ್ವ ಅಧ್ಯಕ್ಷ ಡಾ. ಕೆ.ವಿ. ಕೊಣ್ಣೂರು, ಗ್ರಂಥಾಲಯ ಇಲಾಖೆ ವಿಶ್ರಾಂತ ನಿರ್ದೇಶಕ ಟಿ. ಮಲ್ಲೇಶಪ್ಪ, ತಹಸೀಲ್ದಾರ್ ಹುಸೇನ್ ಎ ಸರಕಾವಸ್, ತಾಪಂ ಇ ಒ ಪ್ರದೀಪ್ ಕುಮಾರ್, ಭದ್ರಾವತಿ ರಾಮಾಚಾರಿ, ಮಂಜುನಾಥ್ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!