ಕೆ.ಎ.ದಯಾನಂದ ಐಎಎಸ್ ವಾಚನಾಲಯ ಲೋಕಾರ್ಪಣೆ ನವೆಂಬರ್ 25ಕ್ಕೆ, ಸಮನ್ವಯ ಟ್ರಸ್ಟ್ ನಿರ್ಮಾಣದ ಅಧ್ಯಯನ ಕೇಂದ್ರ

ಕೆ.ಎ.ದಯಾನಂದ ಐಎಎಸ್ ವಾಚನಾಲಯ ಲೋಕಾರ್ಪಣೆ ನವೆಂಬರ್ 25ಕ್ಕೆ, ಸಮನ್ವಯ ಟ್ರಸ್ಟ್ ನಿರ್ಮಾಣದ ಅಧ್ಯಯನ ಕೇಂದ್ರ

ಶಿವಮೊಗ್ಗ | 22 ನವೆಂಬರ್ 2023 | ಡಿಜಿ ಮಲೆನಾಡು.ಕಾಂ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಆಕಾಂಕ್ಷಿಗಳಿಗೆ ನೆರವಾಗುವ ದೃಷ್ಠಿಯಿಂದ ನಿರ್ಮಿಸಿರುವ ಸಮನ್ವಯ ಟ್ರಸ್ಟ್ ನ ನೂತನ ಕಟ್ಟಡ “ಕೆ.ಎ.ದಯಾನಂದ ಐಎಎಸ್ ವಾಚನಾಲಯ” ಲೋಕಾರ್ಪಣೆಯು ನವೆಂಬರ್ 25ರಂದು ಬೆಳಗ್ಗೆ 11.30ಕ್ಕೆ ನಡೆಯಲಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ನೂತನ ಕಟ್ಟದಲ್ಲಿನ ವಿಶೇಷತೆ: ಸಮನ್ವಯ ಟ್ರಸ್ಟ್ ವತಿಯಿಂದ ನಿರ್ಮಾಣ ಮಾಡಿರುವ ನೂತನ ಕಟ್ಟಡಕ್ಕೆ “ಕೆ.ಎ.ದಯಾನಂದ ಐಎಎಸ್, ರಾಜ್ಯದ ಮೊದಲ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ವಾಚನಾಲಯ” ಎಂದು ಹೆಸರಿಡಲಾಗಿದೆ. ಅಲ್ಲಮ ಪ್ರಭು ಜ್ಞಾನ ಮಂದಿರ, ಅತಿಥಿಗೃಹ, ಕುವೆಂಪು ಅಂಗಳ ಹಾಗೂ ಸಮನ್ವಯ ಕಾರ್ಯಾಲಯ ಕೂಡ ಹೊಸ ಕಟ್ಟಡದಲ್ಲಿ ಇರಲಿದೆ.

Click on below this picture, Like & Follow Facebook Page ” Digi Malenadu “

ಸಮನ್ವಯ ಟ್ರಸ್ಟ್ ನೂತನ ಕಟ್ಟಡದ ಲೋಕಾರ್ಪಣೆಯು ನವೆಂಬರ್ 25ರ ಬೆಳಗ್ಗೆ 11.30ಕ್ಕೆ ನಡೆಯಲಿದ್ದು, ಮೈಸೂರಿನ ಶ್ರೀ ಅರ್ಜುನ ಅವಧೂತ ಮಹಾರಾಜರು, ಗೋಣಿಬೀಡಿನ ಡಾ. ಸಿದ್ಧಲಿಂಗ ಸ್ವಾಮೀಜಿ, ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬಸವಕೇಂದ್ರದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ, ಮೂಲೆಗದ್ದೆ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ, ರಾಮಕೃಷ್ಣ ಆಶ್ರಮ ಶ್ರೀ ವಿನಯಾನಂದ ಸರಸ್ವತಿ ಸ್ವಾಮೀಜಿ ಅವರು ಕಟ್ಟಡದ ಲೋಕಾರ್ಪಣೆ ನಡೆಸಿಕೊಡುವರು.

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ, ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ನಟಿ ಪ್ರೇಮಾ, ಸಮನ್ವಯ ಟ್ರಸ್ಟ್ ಅಧ್ಯಕ್ಷೆ ಗಿರಿಜಾದೇವಿ, ಕರ್ನಾಟಕ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಉಪಸ್ಥಿತರಿರುವರು. ಸಮನ್ವಯ ಟ್ರಸ್ಟ್ ನಿರ್ದೇಶಕ ಸಮನ್ವಯ ಕಾಶಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು, ಉದ್ಯಮಿಗಳು ಭಾಗವಹಿಸುವರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಮೊದಲ ವಿಶೇಷ ಕಾರ್ಯಕ್ರಮ: ಸಮನ್ವಯದ ನೂತನ ಕಟ್ಟಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳ ಜತೆ ಸಂವಾದವು ನವೆಂಬರ್ 25ರ ಸಂಜೆ 5ಕ್ಕೆ ನಡೆಯಲಿದ್ದು, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ, ಐಎಎಸ್ ತರಬೇತುದಾರರಾದ ಆಯಿಷಾ ಪರ್ಝಾನ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸಮನ್ವಯ ಟ್ರಸ್ಟ್ ಅಧ್ಯಕ್ಷೆ ಗಿರಿಜಾದೇವಿ, ಟ್ರಸ್ಟಿ ವಿಕ್ರಮ್.ಎ.ವಿ. ಉಪಸ್ಥಿತರಿರುವರು. ಸಂವಾದದಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತರು 8792435402 ಸಂಪರ್ಕಿಸಬಹುದಾಗಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!