ಪದವೀಧರ, ಶಿಕ್ಷಕರ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಕಟ, ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ

ಪದವೀಧರ, ಶಿಕ್ಷಕರ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಕಟ, ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ

ಶಿವಮೊಗ್ಗ | 23 ನವೆಂಬರ್ 2023 | ಡಿಜಿ ಮಲೆನಾಡು.ಕಾಂ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಸಾರ್ವಜನಿಕರು ಜಾಲತಾಣದಲ್ಲಿ ವೀಕ್ಷಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಉಪಸ್ಥಿತಿಯಲ್ಲಿ ಮತದಾರರ ಪಟ್ಟಿ ನೋಂದಣಿ ಮತ್ತು ಪರಿಷ್ಕರಣೆ ಕುರಿತು ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ರಾಜ್ಯ ವಿಧಾನ ಪರಿಷತ್ತಿನ ನೈಋತ್ಯ ಪದವೀಧರರ ಮತ್ತು ಶಿಕ್ಷಕರ ತಾತ್ಕಾಲಿಕ ಮತ್ತು ಸಾಮಾನ್ಯ ಹುದ್ದೆಗಳಿಗೆ 2023ರ ನವೆಂಬರ್ 1ನ್ನು ಅರ್ಹತಾ ದಿನಾಂಕವಾಗಿ ಉಲ್ಲೇಖಿಸಲಾಗಿದೆ. ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ದಪಡಿಸುವ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪ್ರಸ್ತುತ ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರದ ಆಯನೂರು ಮಂಜುನಾಥ ಅವರ ರಾಜೀನಾಮೆಯಿಂದ ತೆರವಾದ ಸ್ಥಾನ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ಎಸ್.ಎಲ್.ಭೋಜೇಗೌಡ ಅವರ ಅವಧಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರಕ್ಕೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಮತ್ತು ಹೊನ್ನಾಳಿ ತಾಲೂಕುಗಳು ಸೇರಿ ಶಿವಮೊಗ್ಗ ಜಿಲ್ಲೆ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳು ವ್ಯಾಪ್ತಿಗೊಳಪಡಲಿವೆ. ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ  ಶಿವಮೊಗ್ಗ, ದಾವಣಗೆರೆ ಜಿಲ್ಲೆಯ ಚನ್ನಗಿರಿ ಮತ್ತು ಹೊನ್ನಾಳಿ ತಾಲೂಕುಗಳು ಸೇರಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳು ವ್ಯಾಪ್ತಿಗೊಳಪಡಲಿವೆ ಎಂದರು.

ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು, ಕೈಬಿಡಲು, ತಿದ್ದುಪಡಿ ಮಾಡಲು ಹಾಗೂ ಸ್ಥಳಾಂತರಿಸಲು ಈವರೆಗೆ ಸ್ವೀಕರಿಸಲಾದ ಅರ್ಜಿಗಳ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅರ್ಜಿದಾರರು ಹಾಗೂ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅರ್ಜಿ ಸಲ್ಲಿಸಿದ ಅರ್ಜಿದಾರರು ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಆಕ್ಷೇಪಣೆಗಳಿದ್ದಲ್ಲಿ 2023ರ ಡಿಸೆಂಬರ್ 9ರೊಳಗೆ ಸಲ್ಲಿಸಬಹುದಾಗಿದೆ. ಅರ್ಹ ಶಿಕ್ಷಕರು ಮತ್ತು ಪದವೀಧರ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ನಮೂನೆ 18 ಮತ್ತು 19 ರಲ್ಲಿ ಸಲ್ಲಿಸಬಹುದಾಗಿದೆ. ಮತದಾರರ ಪಟ್ಟಿಯ ಅಂತಿಮ ಪ್ರಕಟಣೆಯನ್ನು 2023ರ ಡಿಸೆಂಬರ್ 30ರಂದು ಪ್ರಕಟಿಸಲಾಗುವುದು ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಯೋಗವು ಚುನಾವಣಾ ನೋಂದಣಿ ಅಧಿಕಾರಿಗಳು, ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳನ್ನು ನೇಮಿಸಲಾಗಿದೆ. ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ವ್ಯಾಪ್ತಿಯಲ್ಲಿ ಈವರೆಗೆ 66,982 ಅರ್ಜಿಗಳು ಸ್ವೀಕಾರಗೊಂಡಿದ್ದು, ದಾಖಲಾತಿಗಳು ಸರಿಯಾಗಿದ್ದ 65,566 ಅರ್ಜಿಗಳನ್ನು ಮಾನ್ಯ ಮಾಡಲಾಗಿದೆ. ಉಳಿದ 1,416 ಅರ್ಜಿಗಳನ್ನು ವಿವಿಧ ಕಾರಣಗಳಿಗಾಗಿ ತಿರಸ್ಕೃತಗೊಳಿಸಲಾಗಿದೆ. 33,964 ಪುರುಷರು, 31,600 ಸ್ತ್ರೀಯರು, 2 ಇತರರು ಸೇರಿದಂತೆ ಒಟ್ಟು, 65,566 ಹೆಸರುಗಳು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದೆ.

ಶಿಕ್ಷಕರ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕ್ಷೇತ್ರದ ವ್ಯಾಪ್ತಿಯಲ್ಲಿ 17,402 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಆ ಪೈಕಿ 16,950 ಸ್ವೀಕಾರಗೊಂಡಿದ್ದು, 452 ಅರ್ಜಿಗಳನ್ನು ವಿವಿಧ ಕಾರಣಗಳಿಗಾಗಿ ತಿರಸ್ಕೃತಗೊಳಿಸಲಾಗಿದೆ. ಮತದಾರರ ಪಟ್ಟಿಯಲ್ಲಿ 7,833 ಪುರುಷರು, 9,117 ಸ್ತ್ರೀಯರು ಸೇರಿದಂತೆ ಅರ್ಹರಾದ ಒಟ್ಟು 16,950 ಅರ್ಜಿದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಜಿಪಂ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಚುನಾವಣಾ ತಹಸೀಲ್ದಾರ್ ಮಂಜುನಾಥ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!