ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ

ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ

ಶಿವಮೊಗ್ಗ | 1 ಡಿಸೆಂಬರ್ 2023 | ಡಿಜಿ ಮಲೆನಾಡು.ಕಾಂ

ಸಾರ್ವಜನಿಕರಲ್ಲಿ ಮತ್ತು ಯುವಜನರಲ್ಲಿ ಏಡ್ಸ್ ಕುರಿತಂತೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮ ಆಗಬೇಕು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಶಿವಮೊಗ್ಗ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸುಬ್ಬಯ್ಯ ನರ್ಸಿಂಗ್ ಕಾಲೇಜ್, ಬಾಪೂಜಿ ನರ್ಸಿಂಗ್ ಕಾಲೇಜ್, ನ್ಯಾಷನಲ್ ಲಾ ಕಾಲೇಜ್, ಎಫ್.ಪಿ.ಎ.ಐ ಶಿವಮೊಗ್ಗ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳು ಶಿವಮೊಗ್ಗ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನದ ಪ್ರಯುಕ್ತ ಆಯೋಜಿಸಿದ್ದ “ಸಮುದಾಯಗಳು ಮುನ್ನಡೆಸಲಿ” ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಭಾರತದಲ್ಲಿ ಏಡ್ಸ್ 1986 ರಲ್ಲಿ ಮೊದಲು ಕಾಣಿಸಿಕೊಂಡಿದ್ದು, 40 ಲಕ್ಷ ಜನರು ಸೋಂಕಿಗೆ ತುತ್ತಾಗಿದ್ದಾರೆ. ಸೂಕ್ತವಾದ ಔಷಧವನ್ನು ವೈದ್ಯ ವಿಜ್ಞಾನಿಗಳು ಕಂಡು ಹಿಡಿಯಲು ಸದಾ ಪ್ರಯತ್ನ ಮಾಡುತ್ತಿದ್ದಾರೆ. ಮುಖ್ಯವಾಗಿ ಜನರಲ್ಲಿ ಏಡ್ಸ್  ಕುರಿತು ಅರಿವು ಮತ್ತು ಜಾಗೃತಿ ಮೂಡಿಸಬೇಕು. ಆಗ ಮಾತ್ರ ತಡೆಗಟ್ಟಲು ಸಾಧ್ಯ ಎಂದು ತಿಳಿಸಿದರು.

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್ ನಾಯಕ್ ಮಾತನಾಡಿ, ಏಡ್ಸ್ ಎಂಬ ಮಾರಕ ರೋಗದ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ರೋಗಕ್ಕೆ ಪೀಡಿತರಾದವರನ್ನು ಮತ್ತು ಕುಟುಂಬದ ಸದಸ್ಯರನ್ನು ನಾವು ಯಾವ ರೀತಿ ನೋಡಿಕೊಳ್ಳಬೇಕು ಎಂಬುದು ಜಾಥಾದ ಮುಖ್ಯ ಉದ್ದೇಶ. ಎ.ಆರ್.ಟಿ ಚಿಕಿತ್ಸೆ ಪಡೆಯುವುದರಿಂದ ಜೀವನ ಸುಧಾರಿಸಿಕೊಳ್ಳಬಹುದು ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ಮಾತನಾಡಿ, 2023ರ ವೇಳೆಗೆ ಹೆಚ್.ಐ.ವಿ  ಮತ್ತು ಏಡ್ಸ್ ಪ್ರಕರಣ ಸೊನ್ನೆ ಆಗಬೇಕು. ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಕಾಲೇಜ್‍ಗಳಲ್ಲಿ ಆಪ್ತ ಸಮಾಲೋಚನೆ ಮಾಡಲಾಗುತ್ತಿದೆ ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ರೋಟರಿ ಮಾಜಿ ಸಹಾಯಕ ಗವರ್ನರ್‌ ಜಿ.ವಿಜಯ್ ಕುಮಾರ್ ಮಾತನಾಡಿ, ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸುವ ಮೂಲಕ ಏಡ್ಸ್‌ ತಡೆಗಟ್ಟಬಹುದು ಎಂದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಿ.ಜಿ. ಶಿವಮೂರ್ತಿ, ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ. ದಿನೇಶ್ ಜಿ.ಸಿ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ರಮೇಶ್ ಸಿ, ಸಿದ್ಧನಗೌಡ, ರವಿಕುಮಾರ್, ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!