ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ, ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ ಮುಖ್ಯ

ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ, ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ ಮುಖ್ಯ

ಶಿವಮೊಗ್ಗ | 3 ಡಿಸೆಂಬರ್ 2023 | ಡಿಜಿ ಮಲೆನಾಡು.ಕಾಂ

ಮಕ್ಕಳು ವಿದ್ಯಾಭ್ಯಾಸದ ಜತೆಯಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸುವಂತೆ ಪೋಷಕರು ಸೂಕ್ತ ಮಾರ್ಗದರ್ಶನ ನೀಡಬೇಕು. ಮಕ್ಕಳ ಸರ್ವತೋಮುಖ ಏಳಿಗೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಪಾಲ್ಗೊಳ್ಳುವಿಕೆ ಸಹಕಾರಿಯಾಗುತ್ತದೆ ಎಂದು ನಿವೃತ್ತ ಪ್ರಾಚಾರ್ಯ ಡಾ. ಕೆ.ಬಿ.ಧನಂಜಯ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಲಿಟಲ್ ಎಲಿ ಶಾಲೆಯ ಮೂರನೇ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಿದ್ದ ಕ್ರೀಡಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಮಕ್ಕಳಿಗೆ ಶಿಕ್ಷಣ ಕಡೆಗೆ ಮಾತ್ರ ಒತ್ತಡ ಹಾಕದೇ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ಆಸಕ್ತಿ ಬೆಳೆಸಬೇಕು. ಕ್ರೀಡೆ, ಸಾಂಸ್ಕೃತಿಕ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ರಾಷ್ಟ್ರೀಯ ಈಜುಪಟು ಆರ್ಶಿಕಾ ದೀಪಕ್ ಹೆಗಡೆ ಮಾತನಾಡಿ, ಮಕ್ಕಳು ಎಲ್ಲ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು. ಮಕ್ಕಳ ದೈಹಿಕ ಸಾಮಾರ್ಥ್ಯ ಹೆಚ್ಚುವ ಜತೆಯಲ್ಲಿ ಮನೋಸ್ಥೈರ್ಯ ಹೆಚ್ಚುತ್ತದೆ ಎಂದು ಹೇಳಿದರು.

ಬಾಲ್ಯದಿಂದಲೇ ಮಕ್ಕಳಿಗೆ ಕ್ರೀಡೆಯಲ್ಲಿ ಆಸಕ್ತಿ ಬೆಳೆಸಬೇಕು. ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ಮಾಡುವಂತೆ ಪ್ರೇರೆಪಿಸಬೇಕು. ಇಂತಹ ಕಾರ್ಯಕ್ರಮಗಳು ಮಕ್ಕಳಿಗೆ ಹೆಚ್ಚು ಉಪಯುಕ್ತ ಆಗುತ್ತದೆ ಎಂದರು.

ಲಿಟಲ್ ಎಲಿ ಶಾಲೆಯ ಅನಿಲ್ ಪಿ ಶೆಟ್ಟಿ ಮಾತನಾಡಿ, ಶಾಲೆಯ ವಿದ್ಯಾಭ್ಯಾಸದ ಜತೆಯಲ್ಲಿ ಮಕ್ಕಳಿಗೆ ವಿಶೇಷ ಕೌಶಲ್ಯ ವೃದ್ಧಿಸುವ ಅಂಶಗಳನ್ನು ಕಲಿಸಲಾಗುತ್ತದೆ. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲಾಗುತ್ತದೆ. ಉತ್ತಮ ಶಿಕ್ಷಣ ಹಾಗೂ ಶಿಸ್ತು, ನಾಯಕತ್ವ ಕಲಿಕೆಗೆ ಪ್ರಾಮುಖ್ಯತೆ ನೀಡಲಾಗುತ್ತದೆ ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಇದೇ ಸಂದರ್ಭದಲ್ಲಿ ಮಕ್ಕಳಿಗೆ ಕ್ರೀಡೆ ಹಾಗೂ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಬಿಂದು ಅನಿಲ್ ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!