ಭಯಮುಕ್ತ ಚುನಾವಣೆ ನಡೆಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ತರ
ಶಿವಮೊಗ್ಗ | 4 ಡಿಸೆಂಬರ್ 2023 | ಡಿಜಿ ಮಲೆನಾಡು.ಕಾಂ
ಭಯಮುಕ್ತ ಚುನಾವಣೆ ನಡೆಸುವಲ್ಲಿ ಸೆಕ್ಟರ್ ಅಧಿಕಾರಿಗಳ ಪಾತ್ರ ಅತಿ ಮುಖ್ಯ ಆಗಿದ್ದು, ಲೋಪದೋಷವಿಲ್ಲದಂತೆ ಕಾರ್ಯ ನಿರ್ವಹಿಸಲು ಸನ್ನದ್ದರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ.ಆರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಸಂಬಂಧಿಸಿ ಸೆಕ್ಟರ್ ಅಧಿಕಾರಿಗಳು ಹಾಗೂ ಸೆಕ್ಟರ್ ಪೊಲೀಸ್ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Click on below this picture, Like & Follow Facebook Page ” Digi Malenadu “
ಚುನಾವಣಾ ವೇಳೆ ಸೆಕ್ಟರ್ ಅಧಿಕಾರಿ, ಸೆಕ್ಟರ್ ಪೊಲೀಸ್ ಅಧಿಕಾರಿಗಳ ಜವಾಬ್ದಾರಿ, ಕರ್ತವ್ಯಗಳು ಹಾಗೂ ಕಾರ್ಯವಿಧಾನದ ಕುರಿತು ಇಂದಿನ ತರಬೇತಿ ಕಾರ್ಯಕ್ರಮದಲ್ಲಿ ಮಾಸ್ಟರ್ ತರಬೇತುದಾರರು ತರಬೇತಿ ನೀಡುವರು. ತರಬೇತಿ ಪಡೆದ ಸೆಕ್ಟರ್ ಅಧಿಕಾರಿಗಳು ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಸೆಕ್ಟರ್ ಅಧಿಕಾರಿ/ಪೊಲೀಸ್ ಸೆಕ್ಟರ್ ಅಧಿಕಾರಿಗಳ ಕಾರ್ಯ ವಿಧಾನದ ಕುರಿತು ವಿವರಣೆ ನೀಡಿದರು.
ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಶಿವಕುಮಾರ್ ಹಾಗೂ ತುಂಗಾ ಮೇಲ್ದಂಡೆ ಯೋಜನೆ ವಿಶೇಷ ಭೂಸ್ವಾಧೀನ ಅಧಿಕಾರಿ ರವಿಚಂದ್ರನಾಯ್ಕ್ ಪಿಪಿಟಿ ಮೂಲಕ ಸೆಕ್ಟರ್ ಅಧಿಕಾರಿಗಳ ಜವಾಬ್ದಾರಿ, ಸ್ಥಾನಮಾನ, ಸಿದ್ದತೆಗಳು, ಕಾರ್ಯವಿಧಾನದ ಕುರಿತು ತರಬೇತಿ ನೀಡಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಪೊಲೀಸ್, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/