ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡುವುದು ಅತ್ಯಂತ ಮುಖ್ಯ

ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡುವುದು ಅತ್ಯಂತ ಮುಖ್ಯ

ಶಿವಮೊಗ್ಗ | 7 ಡಿಸೆಂಬರ್ 2023 | ಡಿಜಿ ಮಲೆನಾಡು.ಕಾಂ

ದೇಶಿಯ ಉತ್ಪನ್ನಗಳನ್ನು ಖರೀದಿ ಮಾಡುವ ಮೂಲಕ ಭಾರತ ದೇಶವನ್ನು ಆರ್ಥಿಕವಾಗಿ ಸ್ವಾವಲಂಬನೆಯತ್ತ ಕೊಂಡೊಯ್ಯಬಹುದು ಎಂದು ಸಿರಿಗೆರೆ ಬೃಹನ್ಮಠದ ತರಳುಬಾಳು ಜಗದ್ಗುರು ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‌ನಲ್ಲಿ ಸ್ವದೇಶಿ ಜಾಗರಣ ಮಂಚ್‌ ಕರ್ನಾಟಕ ವತಿಯಿಂದ ಆಯೋಜಿಸಿದ್ದ ಸ್ವದೇಶಿ ಮೇಳ ಉದ್ಘಾಟಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಪ್ರತಿಯೊಬ್ಬ ಭಾರತೀಯರು ಸ್ವದೇಶಿ ವಸ್ತುಗಳ ಬಳಕೆ ಮಾಡುವುದರಿಂದ ದೇಶಿಯ ಉದ್ಯಮಗಳಿಗೆ ಪೃೋತ್ಸಾಹ ನೀಡಲು ಸಾಧ್ಯವಾಗುತ್ತದೆ. ಸ್ವದೇಶಿ ಸಂಸ್ಕೃತಿಯನ್ನು ಕಾಪಾಡಿಕೊಂಡು ಮುನ್ನಡೆಯಬೇಕು ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾತನಾಡಿ, ಸ್ವದೇಶಿ ಮೇಳದ ಮೂಲಕ ಸ್ಥಳೀಯ ಉತ್ಪನ್ನ ತಯಾರಕರು, ಸಣ್ಣ ಉದ್ಯಮಕ್ಕೆ ಪ್ರೋತ್ಸಾಹ ನೀಡಲು ಸಾಧ್ಯವಾಗುತ್ತಿದೆ. ಮಾರುಕಟ್ಟೆ ಸೌಕರ್ಯ ಕಲ್ಪಿಸುವ ಮೂಲಕ ವೇದಿಕೆ ಒದಗಿಸುತ್ತಿರುವುದು ಉತ್ತಮ ಕಾರ್ಯ ಆಗಿದ್ದು, ಸ್ವಾವಲಂಬನೆಯಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಸ್ವದೇಶಿ ಮೇಳ ಪರಿಕಲ್ಪನೆಯ ಗೀತೆಯನ್ನು ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಬಿಡುಗಡೆಗೊಳಿಸಿದರು. ಸ್ವದೇಶಿ ಚಿಂತಕ ಪ್ರೊ. ಬಿ.ಎಂ.ಕುಮಾರಸ್ವಾಮಿ ದಿಕ್ಸೂಚಿ ಭಾಷಣ ಮಾಡಿದರು. ಸ್ವದೇಶಿ ಮೇಳದ ಸಂಚಾಲಕ ಡಿ.ಎಸ್‌.ಅರುಣ್‌ ಪ್ರಾಸ್ತಾವಿಕ ಮಾತನಾಡಿದರು.

ಸ್ವದೇಶಿ ಮೇಳದ ಸಂಯೋಜಕ ಡಾ. ಧನಂಜಯ ಸರ್ಜಿ, ಸಂಘಟಕ ಹರ್ಷ ಕಾಮತ್‌, ಎಸ್‌.ದತ್ತಾತ್ರಿ ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!