ಕ್ರೀಡಾಶಾಲೆಗಳಿಗೆ ಪ್ರವೇಶಕ್ಕೆ ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಆಯ್ಕೆ ಪ್ರಕ್ರಿಯೆ

ಕ್ರೀಡಾಶಾಲೆಗಳಿಗೆ ಪ್ರವೇಶಕ್ಕೆ ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಆಯ್ಕೆ ಪ್ರಕ್ರಿಯೆ

ಶಿವಮೊಗ್ಗ | 12 ಡಿಸೆಂಬರ್ 2023 | ಡಿಜಿ ಮಲೆನಾಡು.ಕಾಂ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಡೆಸುತ್ತಿರುವ ಕ್ರೀಡಾಶಾಲೆ, ಕ್ರೀಡಾನಿಲಯಗಳಿಗೆ 2024-25ನೇ ಸಾಲಿನ  ಪ್ರವೇಶಕ್ಕೆ ತಾಲೂಕು ಮಟ್ಟದಲ್ಲಿ ಆಯ್ಕೆ ನಡೆಸಲಾಗುತ್ತದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಅಥ್ಲೆಟಿಕ್ಸ್, ಹಾಕಿ, ಫುಟ್‍ಬಾಲ್, ಕುಸ್ತಿ ಕ್ರೀಡೆಗಳಿಗೆ ವಿವಿಧ ಮಟ್ಟಗಳಲ್ಲಿ ಆಯ್ಕೆ ನಡೆಸಬೇಕಿದ್ದು, ಇಲಾಖೆ ನಿರ್ದೇಶಕರ ನಿರ್ದೇಶನದಂತೆ ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ತಾಲೂಕು ಮಟ್ಟದ ಆಯ್ಕೆಯನ್ನು ದಿನಾಂಕ ಮತ್ತು ಸ್ಥಳಗಳಲ್ಲಿ ಏರ್ಪಡಿಸಲಾಗಿದೆ.

Click on below this picture, Like & Follow Facebook Page ” Digi Malenadu “

ಆಯ್ಕೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಶಾಲಾ ಮುಖ್ಯಸ್ಥರಿಂದ ಜನ್ಮ ದಿನಾಂಕ ಪ್ರಮಾಣ ಪತ್ರ ಹಾಗೂ ವ್ಯಾಸಂಗ ಮಾಡುತ್ತಿರುವ ತರಗತಿಯ ವಿವರಗಳನ್ನು ಒಳಗೊಂಡ ದೃಢೀಕರಣ ಪತ್ರವನ್ನು ಆಯ್ಕೆಯ ದಿನದಂದು ಕಡ್ಡಾಯವಾಗಿ ತರಬೇಕು.

ಡಿಸೆಂಬರ್‌ 18 ರಂದು ಸರ್ಕಾರಿ ಪದವಿ ಪೂರ್ವ ಕಾಲೇಜು ತೀರ್ಥಹಳ್ಳಿ, ಡಿಸೆಂಬರ್‌ 20 ರಂದು ಸಾಗರ ತಾಲೂಕು ಕ್ರೀಡಾಂಗಣ, ಡಿಸೆಂಬರ್‌ 22 ರಂದು ಹೊಸನಗರ ತಾಲೂಕು ಕ್ರೀಡಾಂಗಣ, ಡಿಸೆಂಬರ್‌ 26 ರಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಆನವಟ್ಟಿ, ಡಿಸೆಂಬರ್‌ 28 ರಂದು ಶಿಕಾರಿಪುರ ತಾಲೂಕು ಕ್ರೀಡಾಂಗಣ, ಡಿಸೆಂಬರ್‌ 29 ರಂದು ಕನಕ ಮಂಟಪ ಮೈದಾನ ಮತ್ತು ಡಿಸೆಂಬರ್‌ 30 ರಂದು ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ಪ್ರತಿ ದಿನ ಬೆಳಗ್ಗೆ 10 ಗಂಟೆಯಿಂದ ಪ್ರಾರಂಭವಾಗುತ್ತದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಪ್ರತಿ ತಾಲೂಕಿನ ಬಾಲಕ, ಬಾಲಕಿಯರು ಆಯಾ ತಾಲೂಕಿನ ಭಾಗವಹಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿ ಮತ್ತು ನಿಗಧಿತ ಅರ್ಜಿ ನಮೂನೆಗೆ ಸಹಾಯಕ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಮತ್ತು ತರಬೇತುದಾರರಾದ ಬಾಳಪ್ಪ ಮಾನೆ ಮೊಬೈಲ್‌ ಸಂಖ್ಯೆ 9880653266 ಹಾಗೂ ಪಿ.ವಿ.ನಾಗರಾಜ್ ಮೊಬೈಲ್‌ ಸಂಖ್ಯೆ 9964599936 ಸಂಪರ್ಕಿಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!