ಪರಿಣಿತಿ ಕಲಾಕೇಂದ್ರದಿಂದ 9ನೇ ನೃತ್ಯ ಸಂಗೀತೋತ್ಸವ
ಶಿವಮೊಗ್ಗ | 18 ಡಿಸೆಂಬರ್ 2023 | ಡಿಜಿ ಮಲೆನಾಡು.ಕಾಂ
ನೃತ್ಯ ಉತ್ಸವಗಳಿಂದ ಕಲಾವಿದರಿಗೆ ನಿರಂತರವಾಗಿ ಪ್ರೋತ್ಸಾಹ ಸಿಗುತ್ತಿದ್ದು, ಪ್ರತಿಯೊಬ್ಬ ಕಲಾವಿದರು ಉತ್ಸವ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗುರು ಕರ್ನಾಟಕ ಕಲಾಶ್ರೀ ಪುರಸ್ಕೃತ ನೃತ್ಯ ಗುರು ಮಿನಾಲ್ ಪ್ರಭು ಅಭಿಪ್ರಾಯಪಟ್ಟರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಪರಿಣಿತಿ ಕಲಾಕೇಂದ್ರದ ವತಿಯಿಂದ ಸಾಗರದ ಗಾಂಧಿ ಮೈದಾನದಲ್ಲಿ ಆಯೋಜಿಸಿದ್ದ “9ನೇ ವರ್ಷದ ಪರಿಣಿತಿ ರಾಷ್ಟ್ರೀಯ ನೃತ್ಯ, ಯೋಗ ಹಾಗೂ ಸಂಗೀತೋತ್ಸವ” ಕಾರ್ಯಕ್ರಮದಲ್ಲಿ ಮಾತನಾಡಿದರು.
Click on below this picture, Like & Follow Facebook Page ” Digi Malenadu “
ದಶಕಗಳ ಹಿಂದೆ ನೃತ್ಯ ಕಲಿಕೆಗೆ, ಕಾರ್ಯಕ್ರಮಗಳಿಗೆ ಸೂಕ್ತ ಪ್ರೋತ್ಸಾಹ ಸಿಗುತ್ತಿರಲಿಲ್ಲ. ಆದರೆ ಇಂದಿನ ಕಾಲದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಯಕ್ರಮಗಳಿಗೆ ಸಹಕಾರ ನೀಡುವ ಮೂಲಕ ಕಲಾವಿದರಿಗೆ ಸೂಕ್ತ ಪ್ರೋತ್ಸಾಹ ಸಿಗುತ್ತಿದೆ ಎಂದು ತಿಳಿಸಿದರು.
ಪರಿಣಿತಿ ಕಲಾಕೇಂದ್ರದ ಕಾರ್ಯದರ್ಶಿ ವಿದ್ವಾನ್ ಎಂ.ಗೋಪಾಲ್ ಮಾತನಾಡಿ, 15 ವರ್ಷಗಳಿಂದ ಸಾಗರದಲ್ಲಿ ಪರಿಣಿತಿ ಕಲಾಕೇಂದ್ರವು ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದ್ದು, 9 ವರ್ಷಗಳಿಂದ ರಾಷ್ಟ್ರೀಯ ನೃತ್ಯ ಉತ್ಸವ ನಡೆಸಲಾಗುತ್ತಿದೆ. ಸಾಗರದ ಜನತೆಯ ಎಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದರು.
ಪರಿಣಿತಿ ಕಲಾಕೇಂದ್ರದಲ್ಲಿ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡುತ್ತಿರುವುದು, ವಿವಿಧ ರಾಜ್ಯಗಳಲ್ಲಿ ನಡೆಯುವ ರಾಷ್ಟ್ರೀಯ ಉತ್ಸವಗಳಲ್ಲಿ ಪಾಲ್ಗೊಳ್ಳುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚೆಚ್ಚು ವೇದಿಕೆ ಕಲ್ಪಿಸುವ ಉದ್ದೇಶದಿಂದ ಕಾರ್ಯಕ್ರಮ ರೂಪಿಸಲಾಗುವುದು ಎಂದು ಹೇಳಿದರು.
ಪರಿಣಿತಿ ಕಲಾಕೇಂದ್ರದ ಗೌರವಾಧ್ಯಕ್ಷೆ ವೀಣಾ ಬೆಳೆಯೂರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಿಂದ ಆಯೋಜಿಸಿರುವ ಪರಿಣಿತಿ ನೃತ್ಯ, ಯೋಗ ಹಾಗೂ ಸಂಗೀತೋತ್ಸವದಲ್ಲಿ ಪಶ್ಚಿಮ ಬಂಗಾಳ, ಕೇರಳ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿದ ಹೆಸರಾಂತ ಕಲಾವಿದರು ಪ್ರದರ್ಶನ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ನೃತ್ಯ ಸಂಗೀತೋತ್ಸವದಲ್ಲಿ ವಿವಿಧ ರಾಜ್ಯಗಳ ಕಲಾವಿದರು ಪ್ರದರ್ಶನ ನೀಡುವುದರಿಂದ ವೈವಿಧ್ಯ ಕಲಾ ಪ್ರಕಾರಗಳ ಪರಿಚಯ ಸ್ಥಳೀಯ ಕಲಿಕಾರ್ಥಿಗಳಿಗೆ ಆಗುತ್ತದೆ. ಸ್ಥಳೀಯ ಪ್ರತಿಭೆಗಳಿಗೂ ರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಪ್ರದರ್ಶನ ನೀಡಲು ಅವಕಾಶ ಸಿಗುತ್ತದೆ ಎಂದರು.
ಬೆಂಗಳೂರಿನ ಮುದ್ರಿಕಾ ಫೌಂಡೇಶನ್ ಗುರು ಕರ್ನಾಟಕ ಕಲಾಶ್ರೀ ಮಿನಾಲ್ ಪಭು ತಂಡದಿಂದ ಭರತನಾಟ್ಯ, ಕಾಸರಗೋಡಿನ ಗೋಪಾಲ ಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ಕೆ.ವಿ.ರಮೇಶ್ ಅವರಿಂದ ಬೊಂಬೆಯಾಟ, ವಿದೂಷಿ ಅದಿತಿ ಪ್ರಹ್ಲಾದ್ ಬೆಂಗಳೂರು ತಂಡದಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, ಕೇರಳದ ಪ್ರಸಿದ್ಧ ಗುರು ಕಲಾನಿಲಯಮ್ ವಾಸುದೇವನ್ ತಂಡದಿಂದ ಕಥಕ್ ನೃತ್ಯ ಕಾರ್ಯಕ್ರಮ ನಡೆಯಿತು.
ಉದ್ಯಮಿ ಎಸ್.ಡಿ.ವೀರಪ್ಪ, ಉದ್ಯಮಿ ಟಿ.ವಿ.ಪಾಂಡುರಂಗ, ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಮಾಜಿ ಸದಸ್ಯ ಕೆ.ಸಿದ್ದಪ್ಪ, ಪರಿಣಿತಿ ಕಲಾಕೇಂದ್ರ ಸಾಗರ ಅಧ್ಯಕ್ಷ ಸೋಮಶೇಖರ್, ಕಲಾಪೋಷಕ ಸುಬ್ಬರಾಯರು, ಮೈತ್ರಿ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/