ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯಂತ ಮುಖ್ಯ, ಪೇಸ್ ಪಿಯು ಕಾಲೇಜಿನಲ್ಲಿ ವಾರ್ಷಿಕೋತ್ಸವ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯಂತ ಮುಖ್ಯ, ಪೇಸ್ ಪಿಯು ಕಾಲೇಜಿನಲ್ಲಿ ವಾರ್ಷಿಕೋತ್ಸವ

ಶಿವಮೊಗ್ಗ | 21 ಡಿಸೆಂಬರ್ 2023 | ಡಿಜಿ ಮಲೆನಾಡು.ಕಾಂ

ಧ್ಯಾನ, ಯೋಗ ಹಾಗೂ ಪ್ರಾಣಾಯಾಮ ಪ್ರತಿ ನಿತ್ಯ ಅಭ್ಯಾಸ ಮಾಡುವುದರಿಂದ ಉತ್ತಮ ಸದೃಢ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಹರಿಹರ ಹರಕ್ಷೇತ್ರ ವೀರಶೈವ ಲಿಂಗಾಯತ ಪಂಚಮಶಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ ಜಯಲಕ್ಷ್ಮೀ ಈಶ್ವರಪ್ಪ ಕನ್ವೆನ್ಷನ್ ಹಾಲ್‌ನಲ್ಲಿ ಪೇಸ್ ಪದವಿಪೂರ್ವ ಕಾಲೇಜಿನ ವತಿಯಿಂದ ಆಯೋಜಿಸಿದ್ದ ವಾರ್ಷಿಕೋತ್ಸವ 2023-24 ಕಾರ್ಯಕ್ರಮದಲ್ಲಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯಂತ ಮುಖ್ಯ. ಶಿಕ್ಷಣ ಅಧ್ಯಯನ ಪರಿಣಾಮಕಾರಿಯಾಗಿ ಮಾಡಲು ಮನಸ್ಸಿನ ನಿಯಂತ್ರಣ ಅಗತ್ಯ. ಸಕಾರಾತ್ಮಕ ಮನೋಭಾವ ಬೆಳೆಸಿಕೊಳ್ಳಲು ಸಹ ಯೋಗ, ಧ್ಯಾನ ಸಹಕಾರಿ ಆಗುತ್ತದೆ ಎಂದು ತಿಳಿಸಿದರು.

ಸರಿಯಾದ ಉಸಿರಾಟ ನಿರ್ವಹಣೆ ಮಾಡುವುದರಿಂದ ಅನೇಕ‌ ಅನಾರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣ ಕಲಿಕೆಯ ಜತೆಯಲ್ಲಿ‌ ಆರೋಗ್ಯ ಕಾಪಾಡಿಕೊಳ್ಳಲು ಬಗ್ಗೆಯೂ ಪ್ರತಿ ದಿನ ಒಂದು ಗಂಟೆ ಮೀಸಲಿಡಬೇಕು. ಧ್ಯಾನ, ಯೋಗ, ವ್ಯಾಯಾಮ ಅಭ್ಯಾಸದಲ್ಲಿ‌ ತೊಡಗಿಸಿಕೊಳ್ಳಬೇಕು ಎಂದರು.

ಪ್ರಜ್ಞಾ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಇದೇ ಸಂದರ್ಭದಲ್ಲಿ ಪೇಸ್ ಪಿಯು ಕಾಲೇಜ್ ಪ್ರಾಚಾರ್ಯ ಪ್ರೊ. ಬಿ.ಎನ್. ವಿಶ್ವನಾಥಯ್ಯ 75ನೇ ಜನ್ಮದಿನ ಆಚರಿಸಲಾಯಿತು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಹರಿಹರ ಹರಕ್ಷೇತ್ರ ವೀರಶೈವ ಲಿಂಗಾಯತ ಪಂಚಮಶಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಸ್ವಾಮೀಜಿ ಅವರು ವಿದ್ಯಾರ್ಥಿಗಳಿಗೆ ಶ್ವಾಸಯೋಗ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

ಪ್ರಜ್ಞಾ ಎಜುಕೇಷನ್ ಟ್ರಸ್ಟ್ ಖಜಾಂಚಿ ಕೆ.ಈ.ಕಾಂತೇಶ್, ಪ್ರಜ್ಞಾ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ,  ಪ್ರಜ್ಞಾ ಎಜುಕೇಷನ್ ಟ್ರಸ್ಟ್ ಉಪಾಧ್ಯಕ್ಷ ಪ್ರೊ. ಎಚ್.ಆನಂದ್ , ಜಯಲಕ್ಷ್ಮಿ ಈಶ್ವರಪ್ಪ, ಪೇಸ್ ಪಿಯು ಕಾಲೇಜಿನ ಬೋಧಕ, ಬೋಧಕೇತರ ವರ್ಗ, ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!