ಎಂಎಸ್ಎಂಇ ಯೋಜನೆಗಳ ಕುರಿತು ಅರಿವು ಅಗತ್ಯ

ಎಂಎಸ್ಎಂಇ ಯೋಜನೆಗಳ ಕುರಿತು ಅರಿವು ಅಗತ್ಯ

ಶಿವಮೊಗ್ಗ | 22 ಡಿಸೆಂಬರ್ 2023 | ಡಿಜಿ ಮಲೆನಾಡು.ಕಾಂ

ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಅಧಿಕ ವ್ಯಾಪ್ತಿ ಹಾಗೂ ಹಣಕಾಸಿನ ಸಾಲ ಸೌಲಭ್ಯಗಳು ಇದ್ದು, ಉದ್ಯಮಿಗಳು ಸದುಪಯೋಗ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಸಿಡ್ಬಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಕಾಸಿಯಾ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ನಗರದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಿದ್ದ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಹಾಗೂ ಹಣಕಾಸಿನ ನೆರವು ಕುರಿತು ಅರಿವು, ರಫ್ತು ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಸರ್ಕಾರ ಎಂಎಸ್‍ಎಂಇ ಕುರಿತು ಅನೇಕ ಕಾರ್ಯಕ್ರಮ ಮತ್ತು ಪ್ರೋತ್ಸಾಹ ನೀಡುತ್ತಿದ್ದರೂ ಸಮರ್ಪಕ ಬಳಕೆ ಆಗುತ್ತಿಲ್ಲ. ಆದ್ದರಿಂದ ಶಿಕ್ಷಣದಲ್ಲಿ ಅಳವಡಿಸಿದರೆ ವಿದ್ಯಾರ್ಥಿ ಹಂತದಿಂದಲೇ ಹಣಕಾಸು, ಜಿಎಸ್‍ಟಿ, ತೆರಿಗೆ, ಉದ್ಯಮದ ಬಗ್ಗೆ ತಿಳವಳಿಕೆ ಮೂಡುತ್ತದೆ. ಸರ್ಕಾರ ಸಹ ಪಠ್ಯಕ್ರಮದಲ್ಲಿ ಅಳವಡಿಸಲು ಚಿಂತನೆ ನಡೆಸಿದೆ ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶ ವೃದ್ದಿಯಾಗಬೇಕು. ಸಣ್ಣ ಮಟ್ಟದ ಕೈಗಾರಿಕೆಗಳ ಬೆಳವಣಿಗೆ ಆಗಬೇಕು. ಕೈಗಾರಿಕಾ ವಲಯಕ್ಕೆ ಸೊರಬದಲ್ಲಿ 16 ಎಕರೆ ಜಾಗ ಗುರುತಿಸಿದ್ದು ಶೀಘ್ರದಲ್ಲಿ ಅಭಿವೃದ್ದಿ ಪಡಿಸಲಾಗುವುದು. ಕೆಐಎಡಿಬಿ, ಕೆಎಸ್‍ಎಸ್‍ಐಡಿಸಿ ವತಿಯಿಂದಲೂ ಕೈಗಾರಿಕಾ ಪ್ರದೇಶಗಳ ಅಭಿವೃದ್ದಿಯಾಗಬೇಕು ಎಂದರು.

ಕಾಸಿಯಾ ಅಧ್ಯಕ್ಷ ಸಿ.ಎ.ಶಶಿಧರ ಶೆಟ್ಟಿ ಮಾತನಾಡಿ, ಎಂಎಸ್‍ಎಂಇ ಗೆ ಉತ್ತಮ ಅವಕಾಶಗಳಿದ್ದು, ಎಂಎಸ್‍ಎಂಇ ಯೋಜನೆಗಳ ಕುರಿತು ಜನರಲ್ಲಿ ಅರಿವಿನ ಕೊರತೆ ಇದೆ. ಯುವಜನತೆ ಸರ್ಕಾರದ ಎಂಎಸ್‍ಎಂಇ ಯೋಜನೆಗಳ ಕುರಿತು ಮಾಹಿತಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಡಿಜಿಎಂ ರಾಜಮಣಿ,  ಎಂಎಸ್‌ಎಂಇ ಉಪ ನಿರ್ದೇಶಕ ಎನ್.ಗೋಪಿನಾಥ ರಾವ್, ಎಂಎಸ್‍ಎಂಇ ಜಂಟಿ ನಿರ್ದೇಶಕ ಡಾ. ಸಾಕ್ರಟೀಸ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗಣೇಶ್ ಆರ್, ಕಾಸಿಯಾ ಉಪಾಧ್ಯಕ್ಷ ರಾಜಗೋಪಾಲ್, ಮಾಚೇನಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ರಮೇಶ್ ಹೆಗಡೆ, ಜೋಯಿಸ್ ರಾಮಾಚಾರ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್ ಗೋಪಿನಾಥ್, ಕಾರ್ಯದರ್ಶಿ ವಸಂತ್ ಹೋಬಳಿದಾರ್, ಸಹಕಾರ್ಯದರ್ಶಿ ಜಿ.ವಿಜಯಕುಮಾರ್ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!