ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡರಿಗೆ ಅಭಿನಂದನಾ ಸಮಾರಂಭ ಜನವರಿ 27ಕ್ಕೆ

ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡರಿಗೆ ಅಭಿನಂದನಾ ಸಮಾರಂಭ ಜನವರಿ 27ಕ್ಕೆ

ಶಿವಮೊಗ್ಗ | 8 ಜನವರಿ 2024 | ಡಿಜಿ ಮಲೆನಾಡು.ಕಾಂ

ಕೈಗಾರಿಕಾ ಉದ್ಯಮಿ, ವಿಧಾನ ಪರಿಷತ್‌ ಸದಸ್ಯ ಎಸ್‌.ರುದ್ರೇಗೌಡರಿಗೆ ಶಿವಮೊಗ್ಗ ನಗರದ ಸರ್ಜಿ ಕನ್ವೆನ್‌ಷನ್‌ ಸಭಾಂಗಣದಲ್ಲಿ ಜನವರಿ 27ರಂದು “ಅಮೃತಮಯಿ” ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ಡಿ.ಜಿ.ಬೆನಕಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಉದ್ಯಮಿ ಎಸ್‌.ರುದ್ರೇಗೌಡ ಅವರು 75ನೇ ಜನ್ಮ ವರ್ಷಕ್ಕೆ ಪಾದಾರ್ಪಣೆ ಹಿನ್ನೆಲೆಯಲ್ಲಿ ವಿಶೇಷ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ರುದ್ರೇಗೌಡರ ರಾಜಕಾರಣ, ಸಮಾಜಸೇವೆ, ಕೈಗಾರಿಕಾ ಕ್ಷೇತ್ರದ ಕುರಿತು ಚರ್ಚಿಸಲು ಜನವರಿ 27ರಂದು “ಶ್ರಮದಿಂದ ಸಾರ್ಥಕತೆಯಡೆಗೆ” ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Click on below this picture, Like & Follow Facebook Page ” Digi Malenadu “

ಅಭಿನಂದನಾ ಸಮಿತಿ ಪ್ರಧಾನ ಕಾರ್ಯದರ್ಶಿ ಡಾ. ಧನಂಜಯ ಸರ್ಜಿ ಮಾತನಾಡಿ, ಜನವರಿ 27ರ ಮಧ್ಯಾಹ್ನ 3ಕ್ಕೆ ವಿವಿಧ ಕ್ಷೇತ್ರದ ಯುವಜನತೆಯೊಂದಿಗೆ ರುದ್ರೇಗೌಡರ ಬದುಕು ಸಾಧನೆ ಕುರಿತು “ ಅಂತರಂಗ ಬಹಿರಂಗ “ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. ಉದ್ಯಮ ಕಟ್ಟಿದ ರೀತಿ, ಅವಕಾಶಗಳನ್ನು ಸದುಪಯೋಗ ಪಡಿಸಿದ ಕುರಿತು ಅನಿಸಿಕೆ ಹಂಚಿಕೊಳ್ಳಲಿದ್ದಾರೆ. ಪುತ್ರಿ ಚೈತ್ರಾ ಅರುಣ್‌ ಸಂವಾದ ನಡೆಸಿಕೊಡಲಿದ್ದಾರೆ ಎಂದರು.

ಜನವರಿ 27ರ ಸಂಜೆ 5.30ಕ್ಕೆ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದು, ಸುಪ್ರೀಂ ಕೋರ್ಟ್‌ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ್‌ ವಿ ಪಾಟೀಲ್‌ ಅವರು ರುದ್ರೇಗೌಡರನ್ನು ಅಭಿನಂದಿಸುವರು. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು “ಎಸ್‌.ರುದ್ರೇಗೌಡ ದಿ ಐರನ್‌ಮ್ಯಾನ್‌” ಪುಸ್ತಕ ಬಿಡುಗಡೆಗೊಳಿಸುವರು. ವಿಧಾನ ಪರಿಷತ್ ಮಾಜಿ ಸಭಾಪತಿ ಬಿ.ಎಲ್‌.ಶಂಕರ್‌ ಅಭಿನಂದನಾ ನುಡಿಗಳನ್ನಾಡುವರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಪ್ರಮುಖರಾದ ಆರ್‌.ಕೆ.ಸಿದ್ದರಾಮಣ್ಣ, ಎಸ್‌.ಎಸ್‌.ಜ್ಯೋತಿಪ್ರಕಾಶ್‌, ಎನ್‌.ಗೋಪಿನಾಥ್‌, ಕೆ.ಕಿರಣ್‌ಕುಮಾರ್‌, ಬಾಳೆಕಾಯಿ ಮೋಹನ್‌, ವಿಶ್ವಾಸ್‌, ರಮೇಶ್‌ ಹೆಗ್ಡೆ, ರುದ್ರಣ್ಣ, ಹರ್ಷ ಕಾಮತ್‌ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!