ಗುರಿ ತಲುಪಲು ಪೂರಕ ಪ್ರಯತ್ನ ಮುಖ್ಯ, ಕಸ್ತೂರಬಾ ಕಾಲೇಜಿನ ವಿದ್ಯಾರ್ಥಿನಿ ಸಂಘಗಳ ಸಮಾರೋಪ ಕಾರ್ಯಕ್ರಮ

ಗುರಿ ತಲುಪಲು ಪೂರಕ ಪ್ರಯತ್ನ ಮುಖ್ಯ, ಕಸ್ತೂರಬಾ ಕಾಲೇಜಿನ ವಿದ್ಯಾರ್ಥಿನಿ ಸಂಘಗಳ ಸಮಾರೋಪ ಕಾರ್ಯಕ್ರಮ

ಶಿವಮೊಗ್ಗ | 10 ಜನವರಿ 2024 | ಡಿಜಿ ಮಲೆನಾಡು.ಕಾಂ

ನಾವು ಕಾಣುವ ಕನಸುಗಳು ಗುರಿಯಾಗಿ ಬದಲಾಗಬೇಕಿದ್ದು, ಗುರಿಯನ್ನು ತಲುಪುವ ಪೂರಕ ಅಂಶಗಳನ್ನು ಬಳಸಿಕೊಂಡು ಯಶಸ್ಸು ಪಡೆಯಿರಿ ಎಂದು ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ ನಿರ್ದೇಶಕ ಡಾ. ಎಂ.ಆರ್.ಏಕಾಂತಪ್ಪ ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನ ವತಿಯಿಂದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ವಿವಿಧ ವಿದ್ಯಾರ್ಥಿನಿ ಸಂಘಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಇಂದಿನ ವಿದ್ಯಾರ್ಥಿಗಳಲ್ಲಿ ಹಿಂಜರಿಕೆ ಹೆಚ್ಚಿದ್ದು, ತಮ್ಮಲ್ಲಿರುವ ಗೊಂದಲಗಳನ್ನು ಪದೇಪದೇ ಮೆಲುಕು ಹಾಕುತ್ತಾ ಕೀಳರಿಮೆಯಲ್ಲಿ ಮುಳುಗುತ್ತಿದ್ದಾರೆ‌. ಅಂತಹ ಕೀಳರಿಮೆಯಿಂದ ಹೊರಬನ್ನಿ. ಕಲಿಕೆಯಲ್ಲಿ ಪ್ರೇರೇಪಣೆ ನೀಡುವ ವಾತಾವರಣ ನಿರ್ಮಿಸಿಕೊಳ್ಳಿ ಎಂದು ತಿಳಿಸಿದರು.

ಶಿಕ್ಷಣ ಸಚಿವರ ಆಪ್ತ ಕಾರ್ಯದರ್ಶಿ ಕಿಶೋರ್ ಕುಮಾರ್, ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣರಾವ್, ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಕಾಲೇಜಿನ ಪ್ರಾಚಾರ್ಯ ಟಿ.ಬಸವರಾಜ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಚಾರ್ಯ ಬಿ.ರಂಗಪ್ಪ, ಕಸ್ತೂರಬಾ ಪ್ರೌಢಶಾಲೆಯ ಉಪ ಪ್ರಾಚಾರ್ಯ ಕೆ.ಆರ್.ಉಮೇಶ್, ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ನಂದಿತಾ, ಕಾರ್ಯದರ್ಶಿ ಲೀಲಾವತಿ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!