ರಸ್ತೆ ಸುರಕ್ಷತಾ ನಿಯಮ ಪಾಲಿಸುವುದು ಎಲ್ಲರ ಕರ್ತವ್ಯ

ರಸ್ತೆ ಸುರಕ್ಷತಾ ನಿಯಮ ಪಾಲಿಸುವುದು ಎಲ್ಲರ ಕರ್ತವ್ಯ

ಶಿವಮೊಗ್ಗ | 17 ಜನವರಿ 2024 | ಡಿಜಿ ಮಲೆನಾಡು.ಕಾಂ

ರಸ್ತೆ ಸುರಕ್ಷತಾ ನಿಯಮಗಳ ಪಾಲನೆ ಮಾಡದಿರುವುದು ಅಪಘಾತ ಸಂಖ್ಯೆ ಹೆಚ್ಚಲು ಪ್ರಮುಖ ಕಾರಣ. ಪ್ರತಿಯೊಬ್ಬ ವಾಹನ ಬಳಕೆದಾರರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳ ಪಾಲಿಸಬೇಕು ಎಂದು ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವತಿಯಿಂದ ಸುಬ್ಬಯ್ಯ ದಂತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ “ಅಪಘಾತ ಜಾಗೃತಿ ಅಭಿಯಾನ” ಕಾರ್ಯಕ್ರಮದಲ್ಲಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ವಾಹನ ಚಾಲನಾ ಪರವಾನಗಿ ಹೊಂದುವುದು ಮೊದಲ ಕರ್ತವ್ಯ. ಬೈಕ್ ಓಡಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಕಾರು ಚಲಾಯಿಸುವಾಗ ಸೀಟ್ ಬೆಲ್ಟ್ ಧರಿಸಬೇಕು. ನಿಯಮಾನುಸಾರ ವೇಗದಲ್ಲಿ ವಾಹನ ಓಡಿಸಬೇಕು. ಎಲ್ಲ ರಸ್ತೆ ಸುರಕ್ಷತಾ ನಿಯಮಗಳು ಪಾಲಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.

ದೇಶಿಯ ವಿದ್ಯಾಶಾಲಾ ಸಮಿತಿ ಸಹ ಕಾರ್ಯದರ್ಶಿ ಡಾ. ಸತೀಶ್ ಕುಮಾರ್ ಶೆಟ್ಟಿ ಮಾತನಾಡಿ, ಮಕ್ಕಳು ಜವಾಬ್ದಾರಿಯುತವಾಗಿ ಜೀವನ ನಡೆಸಬೇಕು ಎನ್ನುವುದು ಪಾಲಕರ ಕನಸು. ಆದರೆ ಯುವಜನರು ನಿರ್ಲಕ್ಷ್ಯ ವಹಿಸಿ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಜೀವವನ್ನೇ ಕಳೆದುಕೊಳ್ಳುತ್ತಾರೆ. ಇದರಿಂದ ಪಾಲಕರು ತುಂಬಾ ನೋವು ಅನುಭವಿಸುತ್ತಾರೆ. ಯುವಜನರು ಜಾಗೃತಿ ವಹಿಸಿ ವಾಹನ ಚಲಾಯಿಸಬೇಕು ಎಂದು ಸಲಹೆ ನೀಡಿದರು.

ಸುಬ್ಬಯ್ಯ ದಂತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯ ಡಾ. ಪ್ರಮೋದಕೃಷ್ಣ.ಬಿ ಅವರು ರಸ್ತೆ ಅಪಘಾತ, ಪರಿಣಾಮಗಳು ಮತ್ತು ಎಚ್ಚರಿಕೆ ವಹಿಸಬೇಕಾದ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಸ್ವಾಗತ ಭಾಷಣ ಮಾಡಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ದೇಶಿಯ ವಿದ್ಯಾಶಾಲಾ ಸಮಿತಿಯ ಐಕ್ಯೂಎಸಿ ಸಂಚಾಲಕ ಎನ್.ಕುಮಾರಸ್ವಾಮಿ, ಕೇತನಾ ಆರ್ತಿ, ವಾಣಿಜ್ಯ ವಿಭಾಗದ ಮುಖ್ಯಸ್ಥ ರುದ್ರೇಶ್.ಸಿ.ಇ ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!